LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

GOOD NEWS : ‘ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್  ;  15,000 ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ರಾಜ್ಯ ಸರ್ಕಾರ ವೇಗ ನೀಡಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶಿಕ್ಷಣ ಇಲಾಖೆಗೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿದ್ದು, ಹಣಕಾಸು ಇಲಾಖೆಯ ಅನುಮೋದನೆ ದೊರೆತ ಬಳಿಕ 100 ದಿನಗಳೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

ಹೌದು.   ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮುಂದಿನ 100 ದಿನಗಳೊಳಗೆ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ನಡೆಸಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸೂಚನೆಯಂತೆ ಶಿಕ್ಷಣ ಇಲಾಖೆ ಅಗತ್ಯ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದ್ದು, ಉದ್ಯೋಗಾಕಾಂಕ್ಷಿಗಳಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತಿದೆ. ಈ ಸಮಸ್ಯೆ ನಿವಾರಣೆಗೆ ಶೀಘ್ರ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.

ಇತ್ತೀಚಿನ ಬಜೆಟ್ ಘೋಷಣೆಯಲ್ಲಿಯೂ ಶಾಲೆಗಳು ಮತ್ತು ಕಾಲೇಜುಗಳಲ್ಲಿನ 15 ಸಾವಿರ ಖಾಲಿ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸರ್ಕಾರ ತಿಳಿಸಿತ್ತು. ಶಿಕ್ಷಕರ ನೇಮಕಾತಿ ಮೂಲಕ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಲಾಗಿದೆ.

ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಹಾಗೂ ಅರ್ಹತೆ ಆಧಾರಿತವಾಗಿಸಲು ಸರ್ಕಾರ ಈಗಾಗಲೇ ನೇಮಕಾತಿ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದು, ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಟಿಇಟಿ ಅಂಕಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ.

15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಜಾರಿಯಾದರೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಗಣನೀಯವಾಗಿ ಕಡಿಮೆಯಾಗಲಿದ್ದು, ಶಿಕ್ಷಣದ ಗುಣಮಟ್ಟ ಹೆಚ್ಚಲು ನೆರವಾಗಲಿದೆ. ಜೊತೆಗೆ ಸಾವಿರಾರು ಯುವಕರಿಗೆ ಸರ್ಕಾರಿ ಉದ್ಯೋಗ ದೊರೆಯುವ ಸಾಧ್ಯತೆ ಇದ್ದು, ಸರ್ಕಾರದ ಈ ಕ್ರಮವನ್ನು ಶಿಕ್ಷಣ ಕ್ಷೇತ್ರದ ಬಲವರ್ಧನೆಗೆ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!