LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

GOOD NEWS : ರೈತರಿಗೆ ದಸರಾ ಉಡುಗೊರೆ..! ಪಿಎಂ ಕಿಸಾನ್ 24ನೇ ಕಂತಿನ ಹಣ ಬಿಡುಗಡೆಗೆ ಕೇಂದ್ರ ಸಿದ್ಧತೆ

ಪಿಎಂ ಕಿಸಾನ್ 24ನೇ ಕಂತಿನ ಹಣಕ್ಕಾಗಿ ದೇಶಾದ್ಯಂತ ರೈತರು ಕಾತರದಿಂದ ಕಾಯುತ್ತಿದ್ದಾರೆ. ಹಣ ಯಾವಾಗ ಖಾತೆಗೆ ಜಮೆಯಾಗಲಿದೆ ಎಂಬುದರ ಬಗ್ಗೆ ಇದೀಗ ಮಹತ್ವದ ಅಪ್‌ಡೇಟ್‌ ಹೊರಬಿದ್ದಿದೆ. ಅಕ್ಟೋಬರ್‌ನಲ್ಲಿ ದಸರಾ ಉಡುಗೊರೆಯಾಗಿ ಹಣ ಬಿಡುಗಡೆ ಮಾಡುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎನ್ನಲಾಗಿದೆ.

ಪಿಎಂ ಕಿಸಾನ್ 24ನೇ ಕಂತಿನ ಹಣದ ಬಗ್ಗೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಶೀಘ್ರದಲ್ಲೇ ಹಣ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಅಕ್ಟೋಬರ್ ತಿಂಗಳಲ್ಲಿ ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. 23ನೇ ಕಂತಿನ ಹಣ ಬಿಡುಗಡೆಯಾಗಿ ಸುಮಾರು ನಾಲ್ಕು ತಿಂಗಳು ಕಳೆದಿರುವ ಹಿನ್ನೆಲೆಯಲ್ಲಿ 24ನೇ ಕಂತಿನ ಹಣ ಪಾವತಿಸಲು ಕೇಂದ್ರ ಸರ್ಕಾರ ಸಿದ್ಧವಾಗುತ್ತಿದೆ.

ಅಕ್ಟೋಬರ್‌ನಲ್ಲಿ ಹಣ ಬಿಡುಗಡೆ ಮಾಡುವ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಆದರೆ ಎಲ್‌ನಿನೊ ಪರಿಣಾಮದಿಂದ ಬೆಳೆ ಕೃಷಿಯಿಂದ ರೈತರು ದೂರವಾಗುತ್ತಿರುವುದು, ದಸರಾ ಮತ್ತು ದೀಪಾವಳಿ ಹಬ್ಬಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ತಿಂಗಳಲ್ಲೇ ಹಣ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

24ನೇ ಕಂತಿನಡಿ ಪ್ರತಿ ಫಲಾನುಭವಿ ರೈತರ ಖಾತೆಗೆ ₹2,000 ಜಮೆಯಾಗಲಿದೆ. ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್‌ಫರ್ (DBT) ಮೂಲಕ ಕೇಂದ್ರ ಸರ್ಕಾರ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಿದೆ.

23ನೇ ಕಂತಿನಲ್ಲಿ ₹18,880 ಕೋಟಿ ಬಿಡುಗಡೆ

2026ರ ಜೂನ್ 20ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ತಾರಕೇಶ್ವರದಲ್ಲಿ ಪಿಎಂ ಕಿಸಾನ್ ಯೋಜನೆಯ 23ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದರು. ದೇಶಾದ್ಯಂತ 9.44 ಕೋಟಿ ರೈತರಿಗೆ ಒಂದೇ ಬಾರಿಗೆ ₹18,880 ಕೋಟಿ ಹಣವನ್ನು ಪಾವತಿಸಲಾಗಿತ್ತು.

ಸಾಮಾನ್ಯವಾಗಿ ಪಿಎಂ ಕಿಸಾನ್ ಯೋಜನೆಯಡಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಹಣ ಬಿಡುಗಡೆ ಮಾಡಲಾಗುತ್ತದೆ. ಜೂನ್ 20ರಂದು 23ನೇ ಕಂತು ಬಿಡುಗಡೆಯಾಗಿದ್ದು, ಅಕ್ಟೋಬರ್ 20ಕ್ಕೆ ನಾಲ್ಕು ತಿಂಗಳು ಪೂರ್ಣಗೊಳ್ಳಲಿದೆ. ಇದೇ ಅವಧಿಯಲ್ಲಿ ದಸರಾ ಹಬ್ಬವೂ ಬರುತ್ತಿರುವುದರಿಂದ, ರೈತರಿಗೆ ಹಬ್ಬದ ಉಡುಗೊರೆಯಾಗಿ 24ನೇ ಕಂತಿನ ಹಣ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ನಂತರ ನವೆಂಬರ್‌ನಲ್ಲಿ ದೀಪಾವಳಿ ಹಬ್ಬವೂ ಇದೆ.

ವರ್ಷಕ್ಕೆ ₹6,000 ನೆರವು

2019ರಲ್ಲಿ ಪಿಎಂ ಕಿಸಾನ್ ಯೋಜನೆ ಆರಂಭಿಸಲಾಯಿತು. ಈ ಯೋಜನೆಯಡಿ ಅರ್ಹ ರೈತರಿಗೆ ಪ್ರತಿವರ್ಷ ₹6,000 ಆರ್ಥಿಕ ನೆರವು ನೀಡಲಾಗುತ್ತದೆ. ಈ ಹಣವನ್ನು ಮೂರು ಕಂತುಗಳಲ್ಲಿ ತಲಾ ₹2,000ರಂತೆ ರೈತರ ಖಾತೆಗಳಿಗೆ ಜಮೆ ಮಾಡಲಾಗುತ್ತದೆ.

ಇದುವರೆಗೆ ರೈತರಿಗೆ ಒಟ್ಟು ₹4.46 ಲಕ್ಷ ಕೋಟಿ ಹಣವನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

24ನೇ ಕಂತಿನ ಹಣ ಪಡೆಯಲು e-KYC ಕಡ್ಡಾಯ

ಶೀಘ್ರದಲ್ಲೇ ಬಿಡುಗಡೆಯಾಗಲಿರುವ 24ನೇ ಕಂತಿನ ಹಣ ಪಡೆಯಲು ರೈತರು ಕೆಲವು ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು. ಅದರಲ್ಲಿ e-KYC ಪೂರ್ಣಗೊಳಿಸುವುದು ಕಡ್ಡಾಯವಾಗಿದೆ.

ರೈತರ e-KYC ಸಕ್ರಿಯವಾಗಿದ್ದರೆ ಮಾತ್ರ ಪಿಎಂ ಕಿಸಾನ್ ಯೋಜನೆಯ ಹಣ ಖಾತೆಗೆ ಜಮೆಯಾಗಲಿದೆ. e-KYC ನಿಷ್ಕ್ರಿಯವಾಗಿದ್ದರೆ ಹಣ ಪಾವತಿ ತಡೆಹಿಡಿಯುವ ಸಾಧ್ಯತೆ ಇದೆ. ಬಳಿಕ e-KYC ಪೂರ್ಣಗೊಳಿಸಿದ ನಂತರವೇ ಯೋಜನೆಯ ಹಣ ಲಭ್ಯವಾಗಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!