LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

HOSTEL : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ಸಾಲಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ (ಪಿಯುಸಿ, ಡಿಪ್ಲೋಮಾ ಹಾಗೂ ಐ.ಟಿ.ಐ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ (ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ) ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

2026-27 ನೇ ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯ ಮಡಿಕೇರಿ ಹಾಗೂ ಕುಶಾಲನಗರದ ವಿದ್ಯಾರ್ಥಿ ನಿಲಯಗಳಿಗೆ (ಪಿಯುಸಿ, ಡಿಪ್ಲೋಮಾ ಹಾಗೂ ಐ.ಟಿ.ಐ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಆನ್‍ಲೈನ್ ನ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) https://shp.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೊಸ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಜೂನ್, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272-225528/220214, ನಿಲಯಪಾಲಕರು ಮಡಿಕೇರಿ 9742116601, ನಿಲಯಪಾಲಕರು ಕುಶಾಲನಗರ 9945960004, ತಾಲ್ಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂರವಾಣಿ ಸಂಖ್ಯೆ: 8548068519, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ.ಕಾಲೇಜು ಹತ್ತಿರ, ಮಡಿಕೇರಿ ಕೊಡಗು ಜಿಲ್ಲೆ: 9972799091 ಹಾಹೂ ತಾಲ್ಲೂಕು ಮಾಹಿತಿ ಕೇಂದ್ರ ವಿರಾಜಪೇಟೆ ದೂ.ಸಂ. 9900731037 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ಅವರು ತಿಳಿಸಿದ್ದಾರೆ.

ಜೂ.22 ರಂದು ಪಿಂಚಣಿ ಅದಾಲತ್

ಧಾರವಾಡ :   ಹುಬ್ಬಳ್ಳಿ ರೈಲ್ವೆ ಅಂಚೆ ವಿಭಾಗದ ಅಂಚೆ ಇಲಾಖೆ ಪಿಂಚಣಿದಾರಿಗಾಗಿ ಪಿಂಚಣಿ ಅದಾಲತ್‍ನ್ನು ಜೂನ್ 22 ರಂದು ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಗಿರಿಣಿ ಚಾಳ ಎದುರಿನ ರೈಲ್ವೆ ಅಂಚೆ ವಿಭಾಗದ ಅಧೀಕ್ಷಕರ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ.

ಸೇವೆಯಿಂದ ನಿವೃತ್ತರಾದ ನೌಕರರ ಪಿಂಚಣಿ ಮತ್ತು ಇತರೆ ನಿವೃತ್ತಿ ಸೌಲಭ್ಯಗಳ ಹಾಗೂ ಕುಟುಂಬ ಪಿಂಚಣಿದಾರರ ಅಹವಾಲುಗಳೇನಾದರೂ ಇದ್ದಲ್ಲಿ ಅವುಗಳನ್ನು ಅದಾಲತ್‍ನಲ್ಲಿ ಆಲಿಸಲಾಗುತ್ತದೆ. ಗ್ರಾಮೀಣ ಅಂಚೆ ಸೇವಕರು ಮತ್ತಿತರಿಗೆ ಅದಾಲತ್‍ನಲ್ಲಿ ಪಾಲ್ಗೊಳ್ಳಲು ಅವಕಾಶವಿರುವುದಿಲ್ಲ. ಅದಾಲತ್‍ನಲ್ಲಿ ಭಾಗವಹಿಸುವವರಿಗೆ ಯಾವುದೇ ಭತ್ಯೆ ನೀಡಲಾಗುವುದಿಲ್ಲ.

ಅದಾಲತ್‍ನಲ್ಲಿ ತೀರ್ಮಾನಿಸುವ ಅಹವಾಲುಗಳಿದ್ದಲ್ಲಿ ಅಧೀಕ್ಷಕರು, ರೈಲ್ವೆ ಅಂಚೆ ವಿಭಾಗ, ಹುಬ್ಬಳ್ಳಿ 580029 ಈ ವಿಳಾಸಕ್ಕೆ ಜೂನ್ 18 ರೊಳಗಾಗಿ ಲಿಖಿತ ರೂಪದಲ್ಲಿ ಅಥವಾ [email protected] ಇಮೇಲ್ ಮೂಲಕ ಕಳಿಸಬಹುದು ಎಂದು ಹುಬ್ಬಳ್ಳಿ ರೈಲ್ವೆ ಅಂಚೆ ವಿಭಾಗದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!