LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: JNU ಪ್ರಾಧ್ಯಾಪಕ, ಸಂಸದ ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ವಜಾ

ನವದೆಹಲಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಪ್ರೊಫೆಸರ್‌, ಕಾಂಗ್ರೆಸ್ ಸಂಸದ ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ಅವರನ್ನು ವಜಾಗೊಳಿಸಲಾಗಿದೆ.

ಬಿಮೋಲ್ ಅಕೋಯಿಜಮ್ ಇನ್ನರ್ ಮಣಿಪುರದ ಕಾಂಗ್ರೆಸ್ ಲೋಕಸಭಾ ಸಂಸದರೂ ಆಗಿದ್ದು, ವಿಶ್ವವಿದ್ಯಾಲಯದ ಆಂತರಿಕ ಸಮಿತಿ ವರದಿಯ ಆಧಾರದ ಮೇಲೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಜೆಎನ್ ಯು ವಿದ್ಯಾರ್ಥಿನಿ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಇವರ ವಿರುದ್ಧ ಕೇಳಿಬಂದಿತ್ತು.

ಕುಲಪತಿ ಪ್ರೊಫೆಸರ್ ಶಾಂತಿಶ್ರೀ ಡಿ. ಪಂಡಿತ್ ಅವರು ಸಹಿ ಹಾಕಿರುವ ಆದೇಶದ ಪ್ರತಿಯಲ್ಲಿ, ಪ್ರೊ. ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟ ಉಲ್ಲೇಖವಿದೆ. ಸ್ಕೂಲ್ ಆಫ್ ಸೋಶಿಯಲ್ ಸೈನ್ಸಸ್‌ನ ಸೆಂಟರ್ ಫಾರ್ ದಿ ಸ್ಟಡಿ ಆಫ್ ಸೋಶಿಯಲ್ ಸಿಸ್ಟಮ್ಸ್‌ಗೆ ಸೇರಿದ ಅಧ್ಯಾಪಕರೊಬ್ಬರ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಬಂದ ನಂತರ, ಅವರ ವಿರುದ್ಧ ಆಂತರಿಕ ತನಿಖೆಯನ್ನು ನಡೆಸಲಾಗಿತ್ತು ಎಂದು ಈ ಆದೇಶ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.

ಸೂಕ್ತ ಪ್ರಕ್ರಿಯೆಯನ್ನು ಅನುಸರಿಸಿ, ಲಭ್ಯವಿರುವ ಎಲ್ಲಾ ಸಂಗತಿಗಳನ್ನು ಪರಿಗಣಿಸಿ ಹಾಗೂ ಆಂತರಿಕ ಸಮಿತಿಯ ವರದಿಯ ಆಧಾರದ ಮೇಲೆ, ಪ್ರೊ. ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ಅವರನ್ನು ವಿಶ್ವವಿದ್ಯಾಲಯದ ಸೇವೆಯಿಂದ ವಜಾಗೊಳಿಸುವ ಶಿಕ್ಷೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಿಧಿಸಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

2026ರ ಮೇ ತಿಂಗಳಲ್ಲಿ 11 ವಿದ್ಯಾರ್ಥಿನಿಯರು ವಿಶ್ವವಿದ್ಯಾಲಯಕ್ಕೆ, ಪ್ರೊ. ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ವಿರುದ್ಧ ಲೈಂಗಿಕ ಕಿರುಕುಳದ ದೂರುಗಳನ್ನು ಸಲ್ಲಿಸಿದ್ದರು. ಅನುಚಿತ ಹೇಳಿಕೆಗಳು, ಸಭೆ-ಸಮಾರಂಭಗಳಲ್ಲಿನ ಅನುಚಿತ ವರ್ತನೆ ಮತ್ತು ಶೈಕ್ಷಣಿಕ ಚಟುವಟಿಕೆಗಳ ಸಂದರ್ಭದ ಅಸಂಬದ್ಧ ನಡವಳಿಕೆಗಳ ಬಗ್ಗೆ, ವಿದ್ಯಾರ್ಥಿನಿಯರು ನೀಡಿದ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

ಹೆಚ್ಚಿನ ಅಂಕಗಳಿಗಾಗಿ ಲೈಂಗಿಕ ಬೇಡಿಕೆಗಳನ್ನು ಮಂಡಿಸಿದ ಗಂಭೀರ ಆರೋಪವೂ, ಪ್ರೊ. ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ವಿರುದ್ಧ ಕೇಳಿಬಂದಿವೆ. ಇಷ್ಟೇ ಅಲ್ಲದೇ ಕ್ಯಾಂಪಸ್‌ನಲ್ಲಿರುವ ತಮ್ಮ ನಿವಾಸದಲ್ಲಿ ನಡೆಯುವ ಸಾಮಾಜಿಕ ಕೂಟಗಳಿಗೆ, ಮಹಿಳಾ ವಿದ್ಯಾರ್ಥಿನಿಯರನ್ನು ಆಹ್ವಾನಿಸಿ ಅವರೊಂದಿಗೆ ಅಸಮರ್ಪಕ ಲೈಂಗಿಕ ವರ್ತನೆಯನ್ನು ತೋರಿದ್ದಾರೆ ಎಂಬ ಆರೋಪಗಳು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿವೆ.

ಬಿಮೋಲ್ ಅಕೋಯಿಜಮ್ ತರಗತಿಯ ಚಟುವಟಿಕೆಗಳು ಮತ್ತು ಶೈಕ್ಷಣಿಕ ಸನ್ನಿವೇಶಗಳಲ್ಲಿ, ಅಸಮರ್ಪಕ ಅಥವಾ ಅಶ್ಲೀಲ ಪದಗಳನ್ನು ಬಳಸುತ್ತಿದ್ದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಾನ್ನು ವಿಶ್ವವಿದ್ಯಾಲಯದಿಂದ ವಾಜಗೊಳಿಸಲಾಗಿದೆ.

ಪ್ರಜ್ವಲ್ ರೇವಣ್ಣ ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್

ಬೆಂಗಳೂರು: ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನು ಬೆಳಗಾವಿ ಹಿಂದಲಗಾ ಜೈಲಿಗೆ ಶಿಫ್ಟ್ ಮಾಡಲು ಸಿದ್ಧತೆಗಳು ನಡೆದಿವೆ.

ಕೆಲ ದಿನಗಳ ಹಿಂದೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದ ವೇಳೆ ಪ್ರಜ್ವಲ್ ರೇವಣ್ಣ ಬ್ಯಾರಕ್ ನಲ್ಲಿ ಮೊಬೈಲ್, ಸಿಮ್ ಕಾರ್ಡ್, ಪೆನ್ ಡ್ರೈವ್, ನೋಟ್ ಬುಕ್ ಸೇರಿದಂತೆ ನಿಷೇಧಿತ ವಸ್ತಿಗಳು ಪತ್ತೆಯಾಗಿದ್ದವು. ಅಲ್ಲದೇ ಪ್ರಜ್ವಲ್ ರೇವಣ್ಣ ಜೈಲಿನ ಸೆಲ್ ನಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಪ್ರಜ್ವಲ್ ರೇವಣ್ಣನನ್ನು ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲು ಕಾರಾಗೃಹ ಮತ್ತು ಸುಧಾರಣೆ ಸೇವೆ ಇಲಾಖೆ ಡಿಜಿಪಿ ಅಲೋಕ್​ಕುಮಾರ್ ಮಹತ್ವದ ಆದೇಶ ಮಾಡಿದ್ದಾರೆ.

ಪ್ರಜ್ವಲ್ ರೇವಣನ್ನು ಶಿಫ್ಟ್​ ಸಂಬಂಧ ಬೆಳಗಾವಿಯ ಹಿಂಡಲಗಾ ಜೈಲಿಗೆ ಅಧಿಕೃತ ಇ-ಮೇಲ್ ಮಾಡಲಾಗಿದೆ. ಜೈಲು ಮುಖ್ಯ ಅಧೀಕ್ಷಕರಿಗೆ ಮಾಹಿತಿ ನೀಡಲಾಗಿದ್ದು, ಆದಷ್ಟು ಬೇಗ ಹಿಂಡಲಗಾ ಜೈಲಿಗೆ ಪ್ರಜ್ವಲ್​​ ಶಿಫ್ಟ್​ ಮಾಡಲಾಗುತ್ತೆ. ಯಾವಾಗ ಬೇಕಾದ್ರೂ ಎಸ್ಕಾರ್ಟ್ ಮೂಲಕ ಶಿಫ್ಟ್​ ಮಾಡಬಹುದು. ಹೀಗಾಗಿ ಈ ಬಗ್ಗೆ ಸಿದ್ಧತೆ ಮಾಡಿಕೊಳ್ಳುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ

2026ರ ಆಗಸ್ಟ್​​​ 11ರಂದು ಪರಪ್ಪನ ಅಗ್ರಹಾರ ಜೈಲಿನ ಮೇಲೆ ಡಿಸಿಪಿ ಹರಿಬಾಬು ಮತ್ತು ಇಮಾಮ್ ಖಾಸೀಂ ನೇತೃತ್ವದಲ್ಲಿ ಸಿಸಿಬಿ ದಾಳಿ ನಡೆಸಿತ್ತು. ಈ ವೇಳೆ ಪ್ರಜ್ವಲ್​​ ರೇವಣ್ಣ ಇದ್ದ ಸೆಲ್​​ನಲ್ಲಿ ಮೊಬೈಲ್​​ ಪತ್ತೆಯಾಗಿತ್ತು. ಜೊತೆಗೆ ಚಾರ್ಜರ್, ನೀಲಿ ಬಣ್ಣದ ನೋಟ್‌ಬುಕ್ ಹಾಗೂ ಪೆನ್ ಡ್ರೈವ್​​ನ ಕೂಡ ಪೊಲೀಸರು ವಶಕ್ಕೆ ಪಡೆದಿದ್ದರು. ಮೊಬೈಲ್‌ನಲ್ಲಿ ವಾಟ್ಸಾಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ , ನೆಟ್‌ಫ್ಲಿಕ್ಸ್ , ಪ್ರೈಮ್ ವಿಡಿಯೋ ಆ್ಯಪ್‌ಗಳು ಇದ್ದು, ಪಾಸ್‌ವರ್ಡ್‌ನಿಂದ ರಕ್ಷಿಸಲ್ಪಟ್ಟಿದ್ದವು. ವಿಧಿವಿಜ್ಞಾನ ಪರೀಕ್ಷೆಯಲ್ಲಿ (FSL) ಮೊಬೈಲ್‌ನಲ್ಲಿ ಕೆಲ ವಿಡಿಯೋ ಫೈಲ್‌ಗಳು ಕೂಡ ಪತ್ತೆಯಾಗಿವೆ ಎನ್ನಲಾಗಿತ್ತು.

ಅಲ್ಲದೇ ಪ್ರಜ್ವಲ್​​ ರೇವಣ್ಣ ಜೈಲಿನಲ್ಲಿ ಮೊಬೈಲ್​​ನಲ್ಲಿ ಮಾತನಾಡುತ್ತಿದ್ದ ವಿಡಿಯೋ, ಫೋಟೋಗಳು ವೈರಲ್ ಆಗಿದ್ದವು. ಈ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳ ನಿರ್ಲಕ್ಷ್ಯ ಇರೋದು ಸಾಬೀತು ಹಿನ್ನೆಲೆ ತನಿಖೆಗಾಗಿ ಕಾರಾಗೃಹ ಮತ್ತು ಸುಧಾರಣೆ ಇಲಾಖೆ ಡಿಐಜಿ ಜಿನೇಂದ್ರ ಖನಗಾವಿ ನೇತೃತ್ವದ ತಂಡ ರಚನೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿ ತನಿಖೆ ಕೂಡ ನಡೆದಿತ್ತು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!