LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

JOB ALERT : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ; ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ 2026-27ನೇ ಸಾಲಿಗೆ ಶಿವಮೊಗ್ಗ ನಗರದಲ್ಲಿ ಹೊಸದಾಗಿ ಅಲ್ಪಸಂಖ್ಯಾತರ ಮಹಿಳೆಯರ ಉನ್ನತ ಶಿಕ್ಷಣಕ್ಕೆ ಮಹಿಳಾ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸಿದ್ದು, ಈ ಕಾಲೇಜುಗಳಿಗೆ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಕ್ಕೆ ಅತಿಥಿ ಉಪನ್ಯಾಸಕರ ಹುದ್ದೆಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೆಡ್, 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ಶಿವಮೊಗ್ಗ ಇಲ್ಲಿಗೆ ತಮ್ಮ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಮೇ 25 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-220206 ನ್ನು ಸಂಪರ್ಕಿಸುವುದು.

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ‘ಡೇಟಾ ಸೈನ್ಸ್ ಮತ್ತು ಎಐ’ ಕುರಿತು ಮೂರು ದಿನಗಳ ಕಾರ್ಯಾಗಾರ

ಶಿವಮೊಗ್ಗ : ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧೀನದಲ್ಲಿರುವ ‘ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ’ (ಕೆಎಸ್ ಟಿಎ)ವತಿಯಿಂದ “ಸುಧಾರಿತ ದತ್ತಾಂಶ ವಿಜ್ಞಾನ, ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ” (Advanced Data Science, Artificial Intelligence & Machine Learning) ಎಂಬ ವಿಷಯದ ಕುರಿತು ಮೂರು ದಿನಗಳ ವಿಶೇಷ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಾಗಾರದ ವಿವರಗಳು

ಮೇ 18 ರಿಂದ ಮೇ 20 ರವರೆಗೆ, ಅಕಾಡೆಮಿಯ ಕಚೇರಿ, ಪ್ರೊ. ಯು.ಆರ್. ರಾವ್ ವಿಜ್ಞಾನ ಭವನ, ಬನಶಂಕರಿ 2ನೇ ಹಂತ, ಬೆಂಗಳೂರು ಇಲ್ಲಿ‌ ಕಾರ್ಯಾಗಾರ ನಡೆಯಲಿದ್ದು, ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ಮತ್ತು ತಂತ್ರಜ್ಞರು ಈ ಕಾರ್ಯಾಗಾರದಲ್ಲಿ ಉಪನ್ಯಾಸ ನೀಡಲಿದ್ದಾರೆ.ವಿಜ್ಞಾನ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಗಳಲ್ಲಿ ಆಸಕ್ತಿ ಇರುವ ಪ್ರತಿನಿಧಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಲು ಅವಕಾಶವಿದೆ.

ಆಸಕ್ತರು ಗೂಗಲ್ ಫಾರ್ಮ್

https://forms.gle/Dyf9KFQ85hnRLDHH6) ಮೂಲಕ ಮೇ 16 ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗಿ ಕೋರಲಾಗಿದೆ.

ಕಾರ್ಯಾಗಾರದ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಯೋಜಕರಾದ ಶ್ರೀನಿವಾಸು ವಿ.ಕೆ., ಮೊಬೈಲ್: 9620767819 ಅವರನ್ನು ಸಂಪರ್ಕಿಸಬಹುದು ಅಥವಾ ಅಕಾಡೆಮಿಯ ಅಧಿಕೃತ ವೆಬ್‌ಸೈಟ್ https://kstacademy.in ವೀಕ್ಷಿಸಬಹುದು ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಆನಂದ್ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?