LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

JOB ALERT : ಜು.04 ರಂದು ಜವಾಹರ್ ನವೋದಯ ವಿದ್ಯಾಲಯದ ವಿವಿಧ ಹುದ್ದೆಗಳಿಗೆ ಸಂದರ್ಶನ

ಮಡಿಕೇರಿ : ತಾಲ್ಲೂಕಿನ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯ ವತಿಯಿಂದ 2026-27ನೇ ಶೈಕ್ಷಣಿಕ ವರ್ಷಕ್ಕೆ ಗುತ್ತಿಗೆ ಮತ್ತು ದಿನಗೂಲಿ ಆಧಾರದ ಮೇಲೆ ಪಿಜಿಟಿ ಭೂಗೋಳ, ಟಿಜಿಟಿ ಸಮಾಜ ವಿಜ್ಞಾನ, ಟಿಜಿಟಿ ಸಂಗೀತ, ಜೆಎಸ್‍ಎ, ಎಂಟಿಎಸ್, ಮೇಟ್ರನ್, ಸೆಕ್ಯುರಿಟಿ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಲು ಕೊಡಗು ಜಿಲ್ಲೆಯ ಮಡಿಕೇರಿಯ ಗಾಳಿಬೀಡಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಜುಲೈ, 04 ರಂದು ಬೆಳಗ್ಗೆ 10:30 ಕ್ಕೆ ವಾಕ್-ಇನ್ ಸಂದರ್ಶನಕ್ಕೆ ಹಾಜರಾಗಲು ಅಭ್ಯರ್ಥಿ ಆಹ್ವಾನಿಸಲಾಗಿದೆ.

ಅರ್ಹತಾ ಮಾನದಂಡಗಳು: ಕೇಂದ್ರ ಸರ್ಕಾರದ ಶಿಕ್ಷಕರ ನೇಮಕಾತಿಯ ಪ್ರಕಾರ. ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಮಾನದಂಡಗಳ ಪ್ರಕಾರ. ಎನ್‍ವಿಎಸ್‍ನ ನೇಮಕಾತಿ ನಿಯಮಗಳ ಪ್ರಕಾರ.

ಹೆಚ್ಚಿನ ಮಾಹಿತಿಗೆ ದೂ.ಸಂ. 9611862835, 9448215623 ಮತ್ತು 9449379654 ನ್ನು ಸಂಪರ್ಕಿಸಬಹುದು ಎಂದು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಮೂರ್ನಾಡು ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಗೆ 2026-27ನೇ ಸಾಲಿಗೆ ಪೂರ್ವ ಪ್ರಾರ್ಥಮಿಕ ಶಿಕ್ಷಕರು, ಕಂಪ್ಯೂಟರ್ ಶಿಕ್ಷಕರು, ಯೋಗ ಮತ್ತು ಕರಾಟೆ ಶಿಕ್ಷಕರು, ಸಂಗೀತ ಮತ್ತು ನೃತ್ಯ ಶಿಕ್ಷಕರು ಹಾಗೂ ಭದ್ರತಾ ಸಿಬ್ಬಂದಿಯ ನೇಮಕಾತಿಗಾಗಿ ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪೂರ್ವ ಪ್ರಾರ್ಥಮಿಕ ಶಿಕ್ಷಕರ ವಿದ್ಯಾರ್ಹತೆ ಮೊಂಟೆಸರಿ/ಡಿಇಡಿ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಉತ್ತೀರ್ಣ ಹೊಂದಿರಬೇಕು, ಕಂಪ್ಯೂಟರ್ ಶಿಕ್ಷಕರ ವಿದ್ಯಾರ್ಹತೆ ಬಿಸಿಎ/ಬಿಎಸ್‍ಸಿ/ಬಿಟೆಕ್/ಬಿಇ(ಐಟಿ/ಸಿಎಸ್/ಡಿಪ್ಲೊಮಾ), ಯೋಗ, ಕರಾಟೆ, ಸಂಗೀತ ಮತ್ತು ನೃತ್ಯ ಶಿಕ್ಷಕರು ಮಾನ್ಯತೆ ಪಡೆದ ಸಂಸ್ಥೆಗಳಿಂದ ತರಬೇತಿ ಹೊಂದಿರಬೇಕು.

ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಮೂಲ ದಾಖಲೆಗಳೊಂದಿಗೆ ಶಾಲಾ ಕಚೇರಿಗೆ ಖುದ್ದಾಗಿ ಭೇಟಿ ನೀಡಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ಗೌರವಧನ ನೀಡಲಾಗುವುದು. ಅರ್ಜಿ ಸಲ್ಲಿಸಲು ಜುಲೈ, 2, 2026 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮುಖ್ಯ ಶಿಕ್ಷಕರು, ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಶಾಲೆ, ಮೂರ್ನಾಡು ಸಂಪರ್ಕಿಸಬಹುದು ಎಂದು ಮೂರ್ನಾಡು ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಕಟಣೆ ತಿಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಇತಿಹಾಸ ಸೃಷ್ಟಿಸಿದ ಐರ್ಲೆಂಡ್: ಭಾರತಕ್ಕೆ ಟಿ20 ಸರಣಿ ಸೋಲಿನ ಶಾಕ್BREAKING: ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ: ಮದುವೆ ನಿರಾಕರಿಸಿದ್ದಕ್ಕೆ ಕುತ್ತಿಗೆಗೆ ಚಾಕುವಿನಿಂದ ಇರಿದು ಪ್ರಿಯಕರನಿಂದಲೇ ಪ್ರೇಯಸಿ ಕೊಲೆರಾಜ್ಯದಲ್ಲಿ ಜು. 2 ರವರೆಗೆ ಮಳೆ ಮುನ್ಸೂಚನೆ: ಮಲೆನಾಡು, ಕರಾವಳಿಗೆ ಆರೆಂಜ್ ಅಲರ್ಟ್ರಾಜ್ಯದಲ್ಲಿ ನಾಳೆಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭ2028ಕ್ಕೆ ಕರ್ನಾಟಕದಲ್ಲಿ, 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ: ಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ವಿಪಕ್ಷದವರ ಹತಾಶೆಯ ಪರಮಾವಧಿ: ಸಿಎಂ ಡಿ.ಕೆ. ಶಿವಕುಮಾರ್BREAKING: ರಾಸ್ ತನುರಾ ಬಳಿ ಸೌದಿ ಅರೇಬಿಯಾದ ಇಂಧನ ದೈತ್ಯ ‘ಸೌದಿ ಅರಾಮ್ಕೊ’ ಹೆಲಿಕಾಪ್ಟರ್ ಪತನ: 14 ಮಂದಿ ಸಾವುBREAKING NEWS: ಫ್ರಾನ್ಸ್ ನಲ್ಲಿ ನಾಗರಿಕ ವಿಮಾನ ಪತನ: 11 ಜನ ಸಾವು‘ಮಿಷನ್ ಇಂದ್ರಧನುಷ್’ ಯೋಜನೆಯಡಿ 7 ಪ್ರಮುಖ ರೋಗಗಳ ವಿರುದ್ಧದ ಲಸಿಕೆಗಳನ್ನು ಕಾಲಕಾಲಕ್ಕೆ ಮಕ್ಕಳಿಗೆ ಹಾಕಿಸಿನನ್ನ ಹೋರಾಟ ಡಿ.ಕೆ.ಶಿವಕುಮಾರ್​ ವಿರುದ್ಧ ಅಲ್ಲ; ರೈತರ ನಡುವೆ ಬಂದು ಚರ್ಚೆ ಮಾಡುವುದಕ್ಕೆ ನಾನು ಈಗಲೂ ಸಿದ್ಧ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ