LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

JOB ALERT : ಭಾರತೀಯ ರೈಲ್ವೇ ಇಲಾಖೆಯಲ್ಲಿ ಮತ್ತೊಂದು ಬೃಹತ್ ನೇಮಕಾತಿ ; ಆ. 14ರಿಂದ ಅರ್ಜಿ ಸಲ್ಲಿಕೆ ಆರಂಭ |Railway Recruitment 2026

ದೇಶಾದ್ಯಂತ ರೈಲ್ವೆ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ರೈಲ್ವೆ ನೇಮಕಾತಿ ಮಂಡಳಿ (RRB) ಸಿಹಿಸುದ್ದಿ ನೀಡಿದೆ. ಸೆಂಟ್ರಲೈಜ್ಡ್ ಎಂಪ್ಲಾಯ್ಮೆಂಟ್ ನೋಟಿಫಿಕೇಶನ್ (CEN 04/2026) ಮೂಲಕ ದೇಶದ ವಿವಿಧ ರೈಲ್ವೆ ವಲಯಗಳಲ್ಲಿ ಜೂನಿಯರ್ ಇಂಜಿನಿಯರ್ (JE), ಡೆಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಹಾಗೂ ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ದೇಶದಾದ್ಯಂತ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಭಾರತೀಯ ರೈಲ್ವೇ ಇಲಾಖೆ ಮತ್ತೊಮ್ಮೆ ಸಿಹಿಸುದ್ದಿ ನೀಡಿದೆ. ವಿವಿಧ ರೈಲ್ವೇ ವಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ರೈಲ್ವೇ ನೇಮಕಾತಿ ಮಂಡಳಿ (RRB) ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದ್ದು, ಆಗಸ್ಟ್‌ 14ರಿಂದ ಆನ್‌ಲೈನ್‌ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯಲ್ಲಿ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಒಟ್ಟು 4,098 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 33 ವರ್ಷ ವಯೋಮಿತಿಯೊಳಗಿರಬೇಕು. ಸಂಬಂಧಿತ ವಿಭಾಗದಲ್ಲಿ ಇಂಜಿನಿಯರಿಂಗ್ ಡಿಪ್ಲೊಮಾ, ಪದವಿ ಅಥವಾ ಬಿಎಸ್ಸಿ ವಿದ್ಯಾರ್ಹತೆ ಹೊಂದಿರಬೇಕು.ಆನ್‌ಲೈನ್ ಅರ್ಜಿ ಪ್ರಕ್ರಿಯೆ 2026ರ ಆಗಸ್ಟ್ 14ರಿಂದ ಆರಂಭವಾಗಲಿದ್ದು, 2026ರ ಸೆಪ್ಟೆಂಬರ್ 16ರವರೆಗೆ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ.

ಆಯ್ಕೆ ಪ್ರಕ್ರಿಯೆಯಲ್ಲಿ ಸಿಬಿಟಿ ಹಂತ-1, ಸಿಬಿಟಿ ಹಂತ-2, ದಾಖಲೆಗಳ ಪರಿಶೀಲನೆ ಹಾಗೂ ರೈಲ್ವೆ ವೈದ್ಯಕೀಯ ಪರೀಕ್ಷೆ ಒಳಗೊಂಡಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹35,400 ಮೂಲ ವೇತನ ಜೊತೆಗೆ ನಿಯಮಾನುಸಾರ ಇತರೆ ಭತ್ಯೆಗಳನ್ನೂ ನೀಡಲಾಗುತ್ತದೆ.ಪ್ರಾದೇಶಿಕವಾರು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ವಿಧಾನ, ವಿಭಾಗವಾರು ವಿದ್ಯಾರ್ಹತೆ, ಪರೀಕ್ಷೆಯ ಪಠ್ಯಕ್ರಮ ಸೇರಿದಂತೆ ಹೆಚ್ಚಿನ ಮಾಹಿತಿ ಆಗಸ್ಟ್ 13ರಂದು ಪ್ರಕಟವಾಗುವ ಸಂಪೂರ್ಣ ಅಧಿಸೂಚನೆಯಲ್ಲಿ ಲಭ್ಯವಾಗಲಿದೆ.

ಪ್ರಮುಖ ದಿನಾಂಕಗಳು
ವಿವರವಾದ ಅಧಿಸೂಚನೆ ಪ್ರಕಟಣೆ: 13 ಆಗಸ್ಟ್ 2026
ಆನ್‌ಲೈನ್ ಅರ್ಜಿ ಆರಂಭ: 14 ಆಗಸ್ಟ್ 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16 ಸೆಪ್ಟೆಂಬರ್ 2026
ಸಿಬಿಟಿ-1 ಪರೀಕ್ಷೆಯ ದಿನಾಂಕ: ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!