LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

JOB ALERT : ಉದ್ಯೋಗಾಕಾಂಕ್ಷಿಗಳೇ ಗಮನಿಸಿ ; ಜೂ.19 ರಂದು ನೇರ ಸಂದರ್ಶನ

ಬಳ್ಳಾರಿ :   ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಆದಿತ್ಯ ಬಿರ್ಲಾ ಸನ್ ಲೈಫ್ ಇನ್ಶೂರೆನ್ಸ್ ಕಂಪನಿ ಇವರ ಜಂಟಿ ಆಶ್ರಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಜೂನ್ 19 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಸಂದರ್ಶನ ನಡೆಯುವ ಸ್ಥಳ

ಆದಿತ್ಯ ಬಿರ್ಲಾ ಸನ್ ಲೈಫ್ ಇನ್ಶೂರೆನ್ಸ್ ಕಚೇರಿ, 2ನೇ ಮಹಡಿ, ಅಯ್ಯಪ್ಪನ್ ಡು-ಟವರ್, ಎಂಐಜಿ -3 ಕೆಹೆಚ್‌ಬಿ ಕಾಲೋನಿ, ಪಾರ್ವತಿ ನಗರ, ಕೆಎಫ್‌ಸಿ ಕಚೇರಿ ಎದುರು, ಬಳ್ಳಾರಿ – 583103.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

ಪಿಯುಸಿ ಅಥವಾ ಯಾವುದೇ ಪದವಿ ಉತ್ತೀರ್ಣರಾದವರು ಭಾಗವಹಿಸಬಹುದು. ಪುರುಷರು ಮತ್ತು ಮಹಿಳೆಯರಿಬ್ಬರಿಗೂ ಅವಕಾಶವಿದೆ. ಈ ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ (ಉಚಿತ ಪ್ರವೇಶ).ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಸ್ವ-ವಿವರಗಳ ಮಾಹಿತಿ ಪ್ರತಿ ಹಾಗೂ ಆಧಾರ್ ಕಾರ್ಡ್ ನಕಲು ಪ್ರತಿಯೊಂದಿಗೆ ಹಾಜರಾಗಬೇಕು.ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ 7619207762, 9663263086, 7676774293, 6360408094 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ: ಆಗಸ್ಟ್ 31 ಕೊನೆಯ ದಿನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ವಿವಿಧ ವಿದ್ಯಾರ್ಥಿವೇತನ ಹಾಗೂ ಸೌಲಭ್ಯಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ ಅವರು ತಿಳಿಸಿದ್ದಾರೆ.

ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ: ಊಟ ಮತ್ತು ವಸತಿ ಸಹಾಯ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್ SSP Postmatric Portal ಗೆ ಭೇಟಿ ನೀಡಬಹುದಾಗಿದೆ. ಅಗತ್ಯ ದಾಖಲೆಗಳೊಂದಿಗೆ ನಿಗದಿತ ಸಮಯದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!