LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

JOB ALERT: ರಾಜ್ಯದಲ್ಲಿ 814 ಉಪನ್ಯಾಸಕರ ನೇಮಕಾತಿಗೆ ಸರ್ಕಾರದಿಂದ ಅಧಿಸೂಚನೆ ಪ್ರಕಟ : KEA ಮೂಲಕ ನೇರ ನೇಮಕಾತಿ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ (PU) ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಒಟ್ಟು 814 ಉಪನ್ಯಾಸಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಆಯ್ಕೆ ಪ್ರಕ್ರಿಯೆಯನ್ನು ನಡೆಸಲು ‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ’ಕ್ಕೆ (KEA) ಜವಾಬ್ದಾರಿ ನೀಡಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಪದವಿ ಪೂರ್ವ ಶಿಕ್ಷಣ) ಹೊರಡಿಸಿರುವ ಈ ಅಧಿಸೂಚನೆಯಲ್ಲಿ, ಕಲ್ಯಾಣ ಕರ್ನಾಟಕ (KK) ಭಾಗದ 36 ಹುದ್ದೆಗಳು ಹಾಗೂ ಉಳಿಕೆ ಮೂಲ ವೃಂದದ (NKK) 778 ಹುದ್ದೆಗಳು ಸೇರಿದಂತೆ ಒಟ್ಟು 814 ಉಪನ್ಯಾಸಕರ ಹುದ್ದೆಗಳ ಮರು ವರ್ಗೀಕರಣದ ವಿವರಗಳನ್ನು ಪ್ರಕಟಿಸಲಾಗಿದೆ.

ವಿಷಯವಾರು ಖಾಲಿ ಹುದ್ದೆಗಳ ವಿವರ:

ಕ್ರ.ಸಂ. ವಿಷಯ (Subject) ಉಳಿಕೆ ಮೂಲ ವೃಂದ (NKK) ಕಲ್ಯಾಣ ಕರ್ನಾಟಕ (KK) ಒಟ್ಟು ಹುದ್ದೆಗಳು
1 ಕನ್ನಡ (Kannada) 84 5 89
2 ಇಂಗ್ಲಿಷ್ (English) 140 5 145
3 ಇತಿಹಾಸ (History) 45 5 50
4 ಅರ್ಥಶಾಸ್ತ್ರ (Economics) 85 5 90
5 ರಾಜ್ಯಶಾಸ್ತ್ರ (Political Science) 20 5 25
6 ಸಮಾಜಶಾಸ್ತ್ರ (Sociology) 20 5 25
7 ಭೂಗೋಳಶಾಸ್ತ್ರ (Geography) 10 0 10
8 ವಾಣಿಜ್ಯಶಾಸ್ತ್ರ (Commerce) 146 4 150
9 ಭೌತಶಾಸ್ತ್ರ (Physics) 30 0 30
10 ರಸಾಯನಶಾಸ್ತ್ರ (Chemistry) 30 0 30
11 ಗಣಿತ (Mathematics) 30 0 30
12 ಜೀವಶಾಸ್ತ್ರ (Biology) 30 0 30
13 ಕಂಪ್ಯೂಟರ್ ಸೈನ್ಸ್ (Comp. Science) 108 2 110
  ಒಟ್ಟು (Total) 778 36 814

9 ಮತ್ತು 10 ನೇ ತರಗತಿಗಳಿಗೆ ಬೋಧನೆಗೂ ಅವಕಾಶ:

ಈ ನೇಮಕಾತಿಯಲ್ಲಿ ಮತ್ತೊಂದು ಪ್ರಮುಖ ತಿದ್ದುಪಡಿ ತರಲಾಗಿದ್ದು, 9 ಮತ್ತು 10 ನೇ ತರಗತಿಗಳ ವಿದ್ಯಾರ್ಥಿಗಳಿಗೂ ಪದವಿ ಪೂರ್ವ ಉಪನ್ಯಾಸಕರಿಂದ ಬೋಧನಾ ಕ್ರಮ ಕೈಗೊಳ್ಳಲು ಅನುಕೂಲವಾಗುವಂತೆ ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತಂದು ಅಧಿಸೂಚನೆ ಹೊರಡಿಸಲಾಗಿದೆ.

ಉಪನ್ಯಾಸಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ಅಧಿಕಾರ ನೀಡಲಾಗಿದ್ದು, ಶೀಘ್ರದಲ್ಲೇ ಕೆಇಎ ವತಿಯಿಂದ ನೇಮಕಾತಿ ಪ್ರಕಟಣೆ ಮತ್ತು ಅರ್ಜಿ ಸಲ್ಲಿಕೆ ಕುರಿತು ಅಧಿಕೃತ ಅಧಿಸೂಚನೆ ಹೊರಬೀಳಲಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು..

news_1790006007_1_132.webp

 

news_1790006007_0_211.webp

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?