LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

JOB ALERT: 'ಡಿಗ್ರಿ, SSLC ಪಾಸ್' ಆದವರಿಗೆ ಭರ್ಜರಿ ಸಿಹಿಸುದ್ದಿ: ಕಾರಾಗೃಹ ಇಲಾಖೆಯ '869 ಹುದ್ದೆ'ಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಸರ್ಕಾರದ ಗೃಹ ಇಲಾಖೆ ವ್ಯಾಪ್ತಿಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಸೂಚನೆ ಹೊರಡಿಸಿದೆ. ಒಟ್ಟು 869 ಜೈಲರ್, ವಾರ್ಡರ್, ಇನ್‌ಸ್ಟ್ರಕ್ಟರ್ ಗ್ರೇಡ್-2 ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಭಾರತೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ ಹಾಗೂ ವರ್ಗೀಕರಣ

ನೇಮಕಾತಿಯನ್ನು ಉಳಿಕೆ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ವೃಂದಗಳಾಗಿ ವಿಂಗಡಿಸಲಾಗಿದೆ. ಉಳಿಕೆ ಕರ್ನಾಟಕ ವೃಂದದಲ್ಲಿ ಒಟ್ಟು 576 ಹುದ್ದೆಗಳಿದ್ದು, ಇದರಲ್ಲಿ 560 ವಾರ್ಡರ್ ಹಾಗೂ 16 ಸೆಕೆಂಡ್ ಗ್ರೇಡ್ ಟೀಚರ್ / ಇನ್‌ಸ್ಟ್ರಕ್ಟರ್ ಗ್ರೇಡ್-2 ಹುದ್ದೆಗಳಿವೆ. ಕಲ್ಯಾಣ ಕರ್ನಾಟಕ ವೃಂದದಲ್ಲಿ ಒಟ್ಟು 293 ಹುದ್ದೆಗಳಿದ್ದು, 5 ಜೈಲರ್, 275 ವಾರ್ಡರ್, 5 ವಾರ್ಡರ್ ಕಮ್ ನರ್ಸಿಂಗ್ ಹಾಗೂ 8 ಇನ್‌ಸ್ಟ್ರಕ್ಟರ್ ಗ್ರೇಡ್-2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಅರ್ಹತೆ ಮತ್ತು ವಯೋಮಿತಿ ಸಡಿಲಿಕೆ

ಜೈಲರ್ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪೂರ್ಣಗೊಳಿಸಿರಬೇಕು. ವಾರ್ಡರ್ ಹುದ್ದೆಗೆ ಎಸ್‌ಎಸ್‌ಎಲ್‌ಸಿ (10ನೇ ತರಗತಿ) ತೇರ್ಗಡೆಯಾಗಿರಬೇಕು. ಇನ್‌ಸ್ಟ್ರಕ್ಟರ್ ಗ್ರೇಡ್-2 ಹುದ್ದೆಗೆ ಎಸ್‌ಎಸ್‌ಎಲ್‌ಸಿ ಜೊತೆಗೆ ಸಂಬಂಧಪಟ್ಟ ಟ್ರೇಡ್‌ನಲ್ಲಿ ಡಿಪ್ಲೊಮಾ ಅಥವಾ ಪ್ರಮಾಣಪತ್ರ ಹೊಂದಿರಬೇಕು. ಹಾಗೆಯೇ ವಾರ್ಡರ್ ಕಮ್ ನರ್ಸಿಂಗ್ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಜೊತೆಗೆ ಪ್ರಥಮ ಚಿಕಿತ್ಸೆ (First Aid) ಪ್ರಮಾಣಪತ್ರ ಇರುವುದು ಕಡ್ಡಾಯ. ಅರ್ಜಿ ಸಲ್ಲಿಸಲು 01.01.2026 ಕ್ಕೆ ಅನ್ವಯಿಸುವಂತೆ ಕನಿಷ್ಠ 20 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 31 ವರ್ಷ ಹಾಗೂ ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಶುಲ್ಕ

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಸೆಪ್ಟೆಂಬರ್ 19, 2026 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 15, 2026 ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ಪಾವತಿಸಲು ಅಕ್ಟೋಬರ್ 16, 2026 ರವರೆಗೆ ಕಾಲಾವಕಾಶ ನೀಡಲಾಗಿದೆ. ಲಿಖಿತ ಪರೀಕ್ಷೆಯು ನವೆಂಬರ್ 21, 2026 ರಂದು ಮಧ್ಯಾಹ್ನ 3:00 ರಿಂದ 4:30 ರವರೆಗೆ ನಡೆಯಲಿದೆ. ಸಾಮಾನ್ಯ ಹಾಗೂ ಇತರ ವರ್ಗದ ಅಭ್ಯರ್ಥಿಗಳಿಗೆ ₹750/-, ಹಾಗೂ ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹500/- ಶುಲ್ಕ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ವಿಧಾನ

ಲಿಖಿತ ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ (PST/ET), ದಾಖಲಾತಿ ಪರಿಶೀಲನೆ ಹಾಗೂ ವೈದ್ಯಕೀಯ ತಪಾಸಣೆ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್ cetonline.karnataka.gov.in/kea/ ಅಥವಾ ಇಲಾಖೆಯ ವೆಬ್‌ಸೈಟ್ prisons.karnataka.gov.in ಮೂಲಕವೇ ಅರ್ಜಿ ಸಲ್ಲಿಸಬೇಕಾಗಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು...

news_1790067022_0_846.webp

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!