LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ, ಹಾಲಿ ಸದಸ್ಯೆ ಬಿ.ವಿ ಗೀತಾ ED ಅಧಿಕಾರಿಗಳು ವಶಕ್ಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಭಾರೀ ಕಾರ್ಯಾಚರಣೆ ನಡೆಸಿದ್ದಾರೆ. ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ವಶಕ್ಕೆ ಪಡೆದ ಬೆನ್ನಲ್ಲೇ, ಆಯೋಗದ ಹಾಲಿ ಸದಸ್ಯೆ ಬಿ.ವಿ. ಗೀತಾ ಅವರನ್ನೂ ಇಡಿ ಅಧಿಕಾರಿಗಳು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ.

ಮಾಜಿ ಅಧ್ಯಕ್ಷರ ನಿವಾಸದ ಮೇಲೆ ಇಡಿ ದಾಳಿ:

ಬೆಂಗಳೂರಿನ ಸಂಜಯನಗರ ಸಮೀಪದ ಡಾಲರ್ಸ್ ಕಾಲೋನಿಯಲ್ಲಿರುವ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ಅಪಾರ್ಟ್‌ಮೆಂಟ್‌‌ ನಿವಾಸದ ಮೇಲೆ ಮಂಗಳವಾರ ಬೆಳಗ್ಗೆ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು. ಮನೆಯಲ್ಲಿದ್ದ ನೇಮಕಾತಿಗೆ ಸಂಬಂಧಿಸಿದ ಕಡತಗಳು, ಬ್ಯಾಂಕ್ ಖಾತೆ ವಿವರಗಳು ಹಾಗೂ ಅಕ್ರಮ ಆಸ್ತಿ ಹೂಡಿಕೆಯ ದಾಖಲೆಗಳನ್ನು ಅಧಿಕಾರಿಗಳು ತೀವ್ರ ಶೋಧ ನಡೆಸಿದರು. ಹಲವು ಗಂಟೆಗಳ ಕಾಲ ಅವರ ಸಮ್ಮುಖದಲ್ಲೇ ಸುದೀರ್ಘ ವಿಚಾರಣೆ ನಡೆಸಿದ ಬಳಿಕ, ಅಧಿಕಾರಿಗಳು ಶಿವಶಂಕರಪ್ಪ ಸಾಹುಕಾರ್ ಅವರನ್ನು ವಶಕ್ಕೆ ಪಡೆದುಕೊಂಡರು.

ಐಎಎಸ್ ಅಧಿಕಾರಿ ನೀಡಿದ ಮಾಹಿತಿ ಆಧರಿಸಿ ಸದಸ್ಯೆ ಗೀತಾ ವಶಕ್ಕೆ:

ಪ್ರಕರಣದ ತನಿಖೆ ವೇಳೆ ಮತ್ತೊಂದು ಮಹತ್ವದ ತಿರುವು ಲಭಿಸಿದ್ದು, ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ಅವರು ನೀಡಿದ ಪ್ರಮುಖ ಸುಳಿವು ಹಾಗೂ ಮಹತ್ವದ ಮಾಹಿತಿಗಳನ್ನು ಆಧರಿಸಿ ಇಡಿ ಅಧಿಕಾರಿಗಳು ಮುಂದಿನ ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ಮಾಹಿತಿಯ ಬೆನ್ನತ್ತಿದ ಅಧಿಕಾರಿಗಳು, ಕೆಪಿಎಸ್‌‌ಸಿ ಸದಸ್ಯೆ ಬಿ.ವಿ. ಗೀತಾ ಅವರ ಬೆಂಗಳೂರಿನ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅವರನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.

ಪಶು ವೈದ್ಯಾಧಿಕಾರಿ ಹುದ್ದೆಗಳ ಆಯ್ಕೆ ಪಟ್ಟಿ ತಯಾರಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ, ಲಂಚದ ವ್ಯವಹಾರ ಹಾಗೂ ನಿಯಮಬಾಹಿರ ನೇಮಕಾತಿಯಲ್ಲಿ ಇಬ್ಬರ ಪಾತ್ರದ ಬಗ್ಗೆ ಅಧಿಕಾರಿಗಳು ತೀವ್ರ ವಿಚಾರಣೆ ಮುಂದುವರಿಸಿದ್ದಾರೆ. ಒಂದೇ ದಿನ ಕೆಪಿಎಸ್‌ಸಿಯ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯೆಯನ್ನು ಕೇಂದ್ರ ತನಿಖಾ ಸಂಸ್ಥೆ ವಶಕ್ಕೆ ಪಡೆದಿರುವುದು ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!