LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

KPSC ಅಕ್ರಮಗಳ ಬಗ್ಗೆ ಕಾಕ್ರೋಚ್ ಜನತಾ ಪಾರ್ಟಿ ಮೌನ ಏಕೆ?: HDK ಪ್ರಶ್ನೆ

ಬೆಂಗಳೂರು:  ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಯಲ್ಲಿ ನಡೆದಿರುವ ಅವ್ಯಾಹತ ಅಕ್ರಮಗಳ ಬಗ್ಗೆ ಕಾಕ್ರೋಚ್ ಜನತಾ ಪಾರ್ಟಿ ಏಕೆ ಮೌನವಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.

ಕರ್ನಾಟಕ ವಿಧಾನಪರಿಷತ್ತಿಗೆ ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳಿಂದ ನಡೆಯಲಿರುವ ಸಂಬಂಧಿಸಿದಂತೆ ಎನ್‌ಡಿಎ ಮೈತ್ರಿಕೂಟದ ಮಿತ್ರ ಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿಯ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಕೇಂದ್ರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಆಯಿತು ಎಂದು ನವದೆಹಲಿಯಲ್ಲಿ ಇನ್ನಿಲ್ಲದ ಗಲಾಟೆ ಎಬ್ಬಿಸಿದ ಕಾಕ್ರೋಚ್ ಜನತಾ ಪಾರ್ಟಿ ಮತ್ತು ಜೆನ್ ಜಿ ಗಳು ಈಗೆಲ್ಲಿ ಹೋಗಿದ್ದಾರೆ? ಅವರಿಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಮಿತಿಮೀರಿದ ಭ್ರಷ್ಟಾಚಾರ ಮತ್ತು ಕೆಪಿಎಸ್ಸಿಯಲ್ಲಿ ನಡೆದಿರುವ ಸಹಾಯಕ ಎಕ್ಸಿಕ್ಯೂಟಿವ್ ಇಂಜಿನಿಯರ್ ಗಳ ನೇಮಕಾತಿ ಅಕ್ರಮ ಹಾಗೂ ಪಶು ವೈದ್ಯರ ನೇಮಕಾತಿ ಅಕ್ರಮ ಸೇರಿದಂತೆ ಕಾಸಿಗಾಗಿ ಉದ್ಯೋಗಗಳನ್ನು ಮಾಡಿಕೊಳ್ಳುತ್ತಿರುವ ಭ್ರಷ್ಟಾಚಾರವನ್ನು ಪ್ರಶ್ನಿಸುತ್ತಿಲ್ಲ ಏಕೆ ಎಂದು ಸಚಿವ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಕರ್ನಾಟಕದಲ್ಲಿ ಕಡುಭ್ರಷ್ಟ ಸರ್ಕಾರ ಆಡಳಿತ ನಡೆಸುತ್ತಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕಕ್ಕೆ ದೊಡ್ಡಮಟ್ಟದ ಕೆಟ್ಟ ಹೆಸರು ಬರುತ್ತಿದೆ ವಾಗ್ದಾಳಿ ನಡೆಸಿದ ಸಚಿವರು; ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ಮಾಡಿ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ. ಆದರೆ ಅವರದೇ ಸರ್ಕಾರ ಎಸುಗುತ್ತಿರುವ ಅಕ್ರಮಗಳ ಬಗ್ಗೆ ಅವರು ಜಾಣಮೌನ ವಹಿಸಿದ್ದಾರೆ ಎಂದು ಕಟುವಾಗಿ ಟೀಕಿಸಿದರು.

ಬರ ನಿರ್ವಹಣೆಯಲ್ಲಿ ಈ ಸರ್ಕಾರ ಸಂಪೂರ್ಣವಾಗಿ ವೈಫಲ್ಯವಾಗಿದೆ. ಒಂದು ಕಡೆ ಖಜಾನೆಯನ್ನು ಖಾಲಿ ಮಾಡಿಕೊಂಡು ಇನ್ನೊಂದು ಕಡೆ ಜನರಿಗೆ ಮಂಕು ಬೂದಿ ಹಚ್ಚಲು ಯೋಜನೆಗಳ ಮೇಲೆ ಯೋಜನೆಗಳನ್ನು ಘೋಷಣೆ ಮಾಡುವ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಹಾಗಿದ್ದರೂ ಕೆಪಿಎಸ್ಸಿಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಕಡಿವಾಣ ಹಾಕಲು ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಕೈಚಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಪಿಎಸ್ಸಿ ಅಕ್ರಮಗಳ ತನಿಖೆ ನಡೆಸಲು ರಾಜ ಹೈಕೋರ್ಟ್ ಎಸ್ಐಟಿ ರಚಿಸಿ ಅಧಿಕಾರಿಗಳನ್ನು ನೇಮಕ ಮಾಡಿದೆ. ಆದರೆ ಆ ಅಧಿಕಾರಿಗಳು ಬೇಡವೆಂದು ಈ ಸರ್ಕಾರ ನಾಟಕ ಆಡುತ್ತಿದೆ. ಒಬ್ಬ ಅಧಿಕಾರಿಯನ್ನು ವರ್ಗಾವಣೆಯನ್ನು ಮಾಡಿದೆ. ಹೆಬ್ಬಟ್ಟು ಒತ್ತುವ ಅಧಿಕಾರಿಗಳು ಇವರಿಗೆ ಬೇಕಾಗಿದೆ. ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳು ಇವರಿಗೆ ಆಗಿ ಬರುವುದಿಲ್ಲ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣಾ ಆಯೋಗದ ವಿರುದ್ಧದ ಪ್ರತಿಭಟನೆಗೆ ಪ್ರಶ್ನೆ:

ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ದೇಶವ್ಯಾಪಿ ಪ್ರತಿಭಟನೆಯನ್ನು ಕಟುವಾಗಿ ಟೀಕಿಸಿದ ಕೇಂದ್ರ ಸಚಿವರು; "ಯಾವ ಪುರುಷಾರ್ಥಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ? ಚುನಾವಣಾ ಆಯೋಗ ಒಂದು ಜವಾಬ್ದಾರಿಯುತ ಸಂಸ್ಥೆ. ಕಳೆದ 78 ವರ್ಷಗಳಿಂದ ಈ ದೇಶದಲ್ಲಿ ಪ್ರಜಾಪ್ರಭುತ್ವ ಉಳಿದುಕೊಂಡು ಬಂದಿದ್ದರೆ ಅದು ಚುನಾವಣಾ ಆಯೋಗದ ಜವಾಬ್ದಾರಿಯಿಂದಲೇ. ಆಯೋಗದ ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರ ನಡುವೆ ಇರುವ ಅಭಿಪ್ರಾಯ ಭೇದದ ಬಗ್ಗೆ ಮಾಧ್ಯಮಗಳಲ್ಲಿ ಬಂದ ವರದಿಯನ್ನು ಇಟ್ಟುಕೊಂಡು ಅದನ್ನೇ ದೊಡ್ಡ ಅಪರಾಧದಂತೆ ಬಿಂಬಿಸಿ ದೇಶದಾದ್ಯಂತ ಪ್ರತಿಭಟನೆ ಮಾಡುತ್ತಿದ್ದಾರೆ. ಇವರು ಅಧಿಕಾರದಲ್ಲಿದ್ದಾಗ ಏನೇನು ಮಾಡಿದ್ದಾರೆ ಎಂದು ನಾನು ಚರ್ಚೆ ಮಾಡುವುದಿಲ್ಲ. ಆದರೆ, ಈ ಭಿನ್ನಾಭಿಪ್ರಾಯ ಯಾವ ಕಾರಣಕ್ಕೆ ಬಂದಿದೆ, ಸತ್ಯಾಸತ್ಯತೆ ಏನು ಎಂಬುದನ್ನು ಆಯೋಗವೇ ದೇಶದ ಜನತೆಯ ಮುಂದೆ ಹೇಳಬೇಕು ಮತ್ತು ತನ್ನ ಸಂಸ್ಥೆಯ ಗೌರವವನ್ನು ಕಾಪಾಡಿಕೊಳ್ಳಬೇಕು" ಎಂದು ಹೇಳಿದರು.

ಕಾಂಗ್ರೆಸ್ ಪಕ್ಷವು ನಿರಂತರವಾಗಿ ರಾಷ್ಟ್ರದ ಸಾಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿ ನಡೆಸುತ್ತಲೇ ಇದೆ. ಅವುಗಳ ಚಾರಿತ್ಯವುದೇ ಮಾಡುವುದಲ್ಲದೆ ತನ್ನ ವೈಫಲ್ಯಗಳನ್ನು ಆ ಸಂಸ್ಥೆಗಳ ಮೇಲೆ ಹೇರುವ ಪ್ರಯತ್ನ ಮಾಡಿಕೊಂಡೆ ಬರುತ್ತಿದೆ. ಚುನಾವಣಾ ಆಯೋಗದ ಮೇಲೆ ಕಾಂಗ್ರೆಸ್ ನಡೆಸುತ್ತಿರುವ ದಾಳಿ ಇದೇ ಮೊದಲಲ್ಲ. ರಾಹುಲ್ ಗಾಂಧಿಯವರು ಜನತೆಯ ದಿಕ್ಕು ತಪ್ಪಿಸಲು ಆಗಾಗ ಇಂತ ಕೆಲಸಗಳಿಗೆ ಕುಮ್ಮಕ್ಕು ಕೊಡುತ್ತಾರೆ ಎಂದು ಅವರು ನೇರವಾಗಿ ಆರೋಪಿಸಿದರು.

ರೈತರಿಗೆ ₹2500; ರೈತನೇನು ಭಿಕ್ಷುಕನೇ ಎಂದು ಎಚ್ಡಿಕೆ ಕಿಡಿ:

ರಾಜ್ಯ ಸರಕಾರ ಘೋಷಿಸಿರುವ ₹2500 ಬರ ಪರಿಹಾರದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು; "ಇವರ ಯೋಗ್ಯತೆಗೆ ಇಷ್ಟೇ. ಹಿಂದಿನ ಮುಖ್ಯಮಂತ್ರಿ ಕಚೇರಿಯಲ್ಲಿ ಕಾಫಿ-ಟೀ ಕುಡಿಯಲು ₹200 ಕೋಟಿ ಖರ್ಚು ಮಾಡಿದ್ದರು. ನಿಮ್ಮ ಯೋಗ್ಯತೆಗೆ ರೈತರಿಗೆ ₹2500 ಕೊಟ್ಟಿದ್ದೀರಲ್ಲ, ನಿಮಗೆ ಮಾನ ಮರ್ಯಾದೆ ಇದೆಯಾ? ರೈತ ಏನು ಭಿಕ್ಷುಕನಾ? ರೈತರನ್ನು ಈ ಮಟ್ಟಕ್ಕೆ ಇಳಿಸಿದ್ದೀರಲ್ಲಾ? ತಮ್ಮನ್ನು ತಾವು ರೈತನ ಮಗ ಎಂದು ಹೇಳಿಕೊಳ್ಳುತ್ತಾರೆ ಈ ಮುಖ್ಯಮಂತ್ರಿ! ರೈತನ ಮಗನಾದರೆ ಈ ರೀತಿ ಮಾಡುತ್ತಾರಾ? ಯಾವ ರೈತನ ಕೆಲಸ ಮಾಡಿದ್ದಾರೆ ಎಂದು ನನಗೆ ಗೊತ್ತಿಲ್ಲ" ಎಂದು ವಾಗ್ದಾಳಿ ನಡೆಸಿದರು.

ಸಿಎಂ ಎರಡು ಮದುವೆ ಹೇಳಿಕೆಗೆ ಸಚಿವರ ಕಿಡಿ:

ಕೆಲ ಶಾಸಕರು ಎರಡು ಮದುವೆಯಾಗಿದ್ದಾರೆ ಎಂಬ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಯನ್ನು ಖಂಡಿಸಿದ ಕುಮಾರಸ್ವಾಮಿ, "ಸದನದಲ್ಲಿ ಮುಖ್ಯಮಂತ್ರಿ ಸ್ಥಾನದಲ್ಲಿರುವ ವ್ಯಕ್ತಿ ಈ ರೀತಿ ಮಾತನಾಡುತ್ತಾರಾ? ಇಂತಹ ಮುಖ್ಯಮಂತ್ರಿಯನ್ನು ಇಟ್ಟುಕೊಂಡಿರುವ ಕಾಂಗ್ರೆಸ್ ಪಕ್ಷವನ್ನು ದೇವರೇ ಕಾಪಾಡಬೇಕು. ಈ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ 224 ಶಾಸಕರೂ ಪ್ರತಿಭಟನೆ ಮಾಡಬೇಕಿತ್ತು. ಕಾಂಗ್ರೆಸ್ ನವರೇ ಇದಕ್ಕೆ ಪ್ರತಿಭಟನೆ ಮಾಡಬೇಕಿತ್ತು" ಎಂದು ಹೇಳಿದರು.

ಕೆಆರ್‌ಐಡಿಎಲ್ AEE ನಾಪತ್ತೆ ಪ್ರಕರಣ:

ಕೆಆರ್‌ಐಡಿಎಲ್ ನ AEE ನಾಪತ್ತೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು; "ಇಂತಹ ಘಟನೆ ಒಂದಲ್ಲ, ಇನ್ನು ಮುಂದೆ ಇಂತಹ ಘಟನೆಗಳು ಪ್ರತಿದಿನ ಪ್ರಾರಂಭವಾಗುತ್ತವೆ" ಎಂದು ಎಚ್ಚರಿಕೆ ನೀಡಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!