LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

KPSC ನೇಮಕಾತಿ ಲಂಚದ ಹಣದಲ್ಲಿ 'ಲವರ್‌'ಗೆ ಗೋಲ್ಡ್ ಗಿಫ್ಟ್: IAS ಅಧಿಕಾರಿಯ ಸೀಕ್ರೆಟ್ ಬಯಲು!

ಬೀದರ್/ಬೆಂಗಳೂರು: ರಾಜ್ಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿರುವ ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆ ತೀವ್ರಗೊಂಡಿದ್ದು, ಆರೋಪಿಗಳು ಲಂಚದ ಕಪ್ಪುಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಸ್ಫೋಟಕ ಸತ್ಯಗಳು ಬಯಲಿಗೆ ಬಂದಿವೆ. ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ತನ್ನ ಪ್ರೇಯಸಿಗೆ ಉಡುಗೊರೆಯಾಗಿ ನೀಡಿದ್ದ ದುಬಾರಿ ಒಡವೆಗಳ ಹಣವನ್ನು ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಸಹಕಾರಿ ಬ್ಯಾಂಕ್ ಅಧ್ಯಕ್ಷನ ಖಾತೆಯಿಂದಲೇ ಪಾವತಿಸಿರುವುದು ಸಿಐಡಿ ತನಿಖೆಯಲ್ಲಿ ಬಹಿರಂಗವಾಗಿದೆ.

ಸಿಐಡಿ ಕಣ್ಗಾವಲಿನಲ್ಲಿ ಭಾಲ್ಕಿಯ ಸೌಹಾರ್ದ ಬ್ಯಾಂಕ್

ಹಗರಣದ ಜಾಡು ಹಿಡಿದು ಹೊರಟ ಸಿಐಡಿ ಅಧಿಕಾರಿಗಳ ಚಿತ್ತ ಈಗ ಭಾಲ್ಕಿಯ ಓಂ ಲಕ್ಷ್ಮೀ ಸೌಹಾರ್ದ ಸಹಕಾರಿ ಬ್ಯಾಂಕ್‌ನತ್ತ ನೆಟ್ಟಿದೆ. ಬ್ಯಾಂಕ್‌ನಲ್ಲಿ ನಡೆದಿರುವ ಅನುಮಾನಾಸ್ಪದ ಹಣಕಾಸು ವಹಿವಾಟುಗಳ ದಾಖಲೆಗಳನ್ನು ತನಿಖಾ ತಂಡ ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ. ಬೆಂಗಳೂರಿನ ಪ್ರಸಿದ್ಧ ಚಿನ್ನದ ಮಳಿಗೆಯೊಂದಕ್ಕೆ ತಮ್ಮ ವೈಯಕ್ತಿಕ ಖಾತೆಯಿಂದ ₹15 ಲಕ್ಷ ಆನ್‌ಲೈನ್ ವರ್ಗಾವಣೆ ಮಾಡಿರುವುದನ್ನು ಬ್ಯಾಂಕ್ ಅಧ್ಯಕ್ಷ ಓಂಕಾರ ಕನಶೆಟ್ಟಿ ಒಪ್ಪಿಕೊಂಡಿದ್ದಾರೆ. ತಮಗೆ ಜ್ಞಾನೇಂದ್ರ ಕುಮಾರ್ ಪರಿಚಯವಿಲ್ಲದಿದ್ದರೂ, ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆ ಸೂಚನೆಯಂತೆ ಈ ಹಣವನ್ನು ಜ್ಯುವೆಲ್ಲರಿ ಮಳಿಗೆಯ ಖಾತೆಗೆ ಜಮೆ ಮಾಡಿದ್ದಾಗಿ ಕನಶೆಟ್ಟಿ ಸ್ಪಷ್ಟಪಡಿಸಿದ್ದಾರೆ.

ಖಾತೆ ಇಲ್ಲದಿದ್ದರೂ ಅಧ್ಯಕ್ಷನ ಅಕೌಂಟ್‌ಗೆ ₹70 ಲಕ್ಷ ಜಮೆ!

ಬ್ಯಾಂಕ್ ಅಧ್ಯಕ್ಷ ಓಂಕಾರ ಕನಶೆಟ್ಟಿ ನೀಡಿರುವ ಹೇಳಿಕೆ ಪ್ರಕರಣದ ಆಳವನ್ನು ಬಿಚ್ಚಿಟ್ಟಿದೆ. "ನಮ್ಮ ಸಹಕಾರಿ ಬ್ಯಾಂಕ್‌ನಲ್ಲಿ ಬಸವರಾಜ ಕನ್ನಾಳೆಗೆ ಯಾವುದೇ ಅಧಿಕೃತ ಖಾತೆ ಇಲ್ಲ. ಆದರೆ ಆತ ನನ್ನ ವೈಯಕ್ತಿಕ ಖಾತೆಗೆ ₹70 ಲಕ್ಷ ಹಣ ಜಮೆ ಮಾಡಿದ್ದ. ಜಮೀನು ವ್ಯವಹಾರ ಮತ್ತು ಕಮಿಷನ್‌ ಸಂಬಂಧ ಈ ಹಣ ಬಂದಿತ್ತು. ಈ ಕುರಿತು ಬೆಂಗಳೂರಿನ ಸಿಐಡಿ ಕಚೇರಿಗೆ ಹಾಜರಾಗಿ ಸಂಪೂರ್ಣ ವಿವರ ಹಾಗೂ ದಾಖಲೆ ಒದಗಿಸಿದ್ದೇನೆ. ನಮ್ಮ ಬ್ಯಾಂಕ್ ಮೇಲೆ ಯಾವುದೇ ದಾಳಿ ನಡೆದಿಲ್ಲ, ಗ್ರಾಹಕರು ಆತಂಕಪಡುವ ಅಗತ್ಯವಿಲ್ಲ" ಎಂದು ಕನಶೆಟ್ಟಿ ತಿಳಿಸಿದ್ದಾರೆ.

ಪ್ರೇಯಸಿ ಬಳಿಯಿದ್ದ ₹23 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ

ನೇಮಕಾತಿ ಅಕ್ರಮದ ಲಂಚದ ಹಣದಿಂದ ಜ್ಞಾನೇಂದ್ರ ಕುಮಾರ್ ತನ್ನ ಗೆಳತಿಗೆ ಬೆಂಗಳೂರಿನ ಡಿಕನ್ಸನ್ ರಸ್ತೆಯಲ್ಲಿರುವ ಚಿನ್ನಾಭರಣ ಮಳಿಗೆಯಿಂದ ಬರೋಬ್ಬರಿ ₹23 ಲಕ್ಷ ಮೌಲ್ಯದ ಆಭರಣಗಳನ್ನು ಖರೀದಿಸಿಕೊಟ್ಟಿದ್ದರು. ಈ ಮಳಿಗೆಗೆ ಖುದ್ದು ಭೇಟಿ ನೀಡಿದ್ದ ಸಿಐಡಿ ತಂಡ, ಸಿಸಿಟಿವಿ ದೃಶ್ಯಾವಳಿ ಹಾಗೂ ಖರೀದಿ ರಸೀದಿಗಳನ್ನು ವಶಪಡಿಸಿಕೊಂಡಿತ್ತು. ಇದರ ಬೆನ್ನಲ್ಲೇ ಅಧಿಕಾರಿಯ ಗೆಳತಿಯ ಬಳಿಯಿದ್ದ ₹23 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ತನಿಖಾಧಿಕಾರಿಗಳು ಅಧಿಕೃತವಾಗಿ ಜಪ್ತಿ ಮಾಡಿದ್ದಾರೆ.

₹5 ಕೋಟಿ ಅಕ್ರಮ ವಹಿವಾಟು: 273 ಮಂದಿಯ ವಿಚಾರಣೆ

ಪ್ರಾಥಮಿಕ ತನಿಖೆಯ ಪ್ರಕಾರ ನೇಮಕಾತಿ ಅಕ್ರಮದಲ್ಲಿ ಬರೋಬ್ಬರಿ ₹5 ಕೋಟಿಗೂ ಅಧಿಕ ಕಪ್ಪುಹಣದ ವಹಿವಾಟು ನಡೆದಿದ್ದು, ವಿವಿಧ ಬ್ಯಾಂಕ್ ಖಾತೆಗಳ ಮೂಲಕ ₹85 ಲಕ್ಷ ಕೈಬದಲಾಗಿರುವುದು ಖಚಿತಪಟ್ಟಿದೆ. ಇದುವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 273 ಮಂದಿಯನ್ನು ಸಿಐಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದು, 12 ಅಭ್ಯರ್ಥಿಗಳು ಸೇರಿದಂತೆ ಕೆಲವರು ಅಕ್ರಮ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಬಸವರಾಜ್ ಕನ್ನಾಳೆ ಸಹಚರರಿಗೆ ಸಿಐಡಿ ಬಲೆ ಬೀಸಿದ್ದು, ತನಿಖೆಗೆ ಗೈರುಹಾಜರಾಗಿರುವ ಕೆಪಿಎಸ್‌ಸಿ ಮಾಜಿ ಸದಸ್ಯೆ ಶಾಂತಾ ಹೊಸಮನಿ ಅವರಿಗೆ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಲು ಅಧಿಕಾರಿಗಳು ಸಜ್ಜಾಗಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!