LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

KRS ಬೃಂದಾವನದಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ದಿನಾಂಕ ಬದಲಾವಣೆ

ಮಂಡ್ಯ,: ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಕೆಆರ್‌ಎಸ್ ಬೃಂದಾವನ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಕಾವೇರಿ ಆರತಿ’ ಕಾರ್ಯಕ್ರಮದ ದಿನಾಂಕವನ್ನು ಅನಿವಾರ್ಯ ಕಾರಣಗಳಿಂದ ಬದಲಾವಣೆ ಮಾಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಮೊದಲು ಅಕ್ಟೋಬರ್ 11ರಿಂದ 16ರವರೆಗೆ ನಿಗದಿಯಾಗಿದ್ದ ಕಾವೇರಿ ಆರತಿ ಕಾರ್ಯಕ್ರಮವನ್ನು ಇದೀಗ ಅಕ್ಟೋಬರ್ 16ರಿಂದ 21ರವರೆಗೆ ಕೆಆರ್‌ಎಸ್ ಬೃಂದಾವನ ಆವರಣದಲ್ಲಿ ಆಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ

ಕಾರ್ಯಕ್ರಮ ನಡೆಯುವ ಸ್ಥಳವಾದ ಕೆಆರ್‌ಎಸ್ ಬೃಂದಾವನದಲ್ಲಿ ನಡೆಯಲಿರುವ ಧಾರ್ಮಿಕ ಪೂಜಾ ಕೈಂಕರ್ಯಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕರು, ಪ್ರವಾಸಿಗರು ಹಾಗೂ ಭಕ್ತಾದಿಗಳು ಬದಲಾದ ದಿನಾಂಕವನ್ನು ಗಮನಿಸಿ, ಅಕ್ಟೋಬರ್ 16ರಿಂದ 21ರವರೆಗೆ ನಡೆಯಲಿರುವ ಕಾವೇರಿ ಆರತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಕೋರಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!