ಬೆಂಗಳೂರು: ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ(KSIIDC) ವತಿಯಿಂದ ರೂ. 143 ಕೋಟಿ 12 ಲಕ್ಷ ಮೊತ್ತದ ಲಾಭಾಂಶದ ಚೆಕ್ ಅನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹಸ್ತಾಂತರಿಸಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ. 3 ಕೋಟಿ ಮೊತ್ತದ ಚೆಕ್ ಕೂಡ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್ ನಿಗಮವು 2024- 25ರಲ್ಲಿ ಒಟ್ಟು ತೆರಿಗೆ ಕಡಿತದ ನಂತರ 188.41 ಕೋಟಿ ರೂ. ಲಾಭ ಗಳಿಸಿತ್ತು. 2025- 26 ನೇ ಸಾಲಿನಲ್ಲಿ ಸಂಸ್ಥೆಗೆ 19.34 ಕೋಟಿ ರೂ. ವಿಶೇಷ ಡಿವಿಡೆಂಟ್ ಲಾಭದಲ್ಲಿ ಬಂದಿತ್ತು ಎಂದು ತಿಳಿಸಿದ್ದಾರೆ. ಕೆ.ಎಸ್.ಐ.ಐ.ಡಿ.ಸಿ. ಗೆ ಕ್ಯಾಮ್ಕೋ, ಕ್ಯಾಟ್ಕೋ, ಎಂಎಸ್ಐಎಲ್, ಹೆಚ್.ಜಿ.ಎಂ.ಎಲ್. ಮತ್ತಿತರ ಉದ್ದಿಮೆಗಳಿಂದ ಈ ಆದಾಯ ಬಂದಿದೆ ಎಂದು ಹೇಳಲಾಗಿದೆ.
ಈ ಸಂದರ್ಭಧಲ್ಲಿ KSIIDC ವ್ಯವಸ್ಥಾಪಕ ನಿರ್ದೇಶಕಿ ಖುಷ್ಬೂ ಗೋಯಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.