LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ/ರಿಯಾಯಿತಿ ‘KSRTC’ ಬಸ್ ಪಾಸ್ ವಿತರಣೆ ಆರಂಭ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‌ಪಾಸ್ ವಿತರಣಾ ಕಾರ್ಯವನ್ನು ಮೇ.29 ರಿಂದ ಆರಂಭಿಸಿದ್ದು, ಪ್ರಸಕ್ತ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್‌ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್ ಲೈನ್ ಅರ್ಜಿ ಸಲ್ಲಿಸಬೇಕಿರುತ್ತದೆ. ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲಾಗುವುದು. ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು URL-https://sevasindhu.karnataka.gov.in/buspassservices ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಕೆಳಕಂಡ ಕ್ರಮಗಳನ್ನು ಅನುಸರಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿರುತ್ತದೆ. ನೆರೆ ರಾಜ್ಯದ ವಿರ್ಧ್ಯಾಥಿನಿಯರು ಕರ್ನಾಟಕ ರಾಜ್ಯದ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಈ ಕ್ರಮಗಳನ್ನು ಅನುಸರಿಸಿ ವಿದ್ಯಾರ್ಥಿ ಪಾಸುಗಳನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ.

ಆನ್ ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ವಿದ್ಯಾರ್ಥಿಗಳು, ಕರ್ನಾಟಕ-ಒನ್ ಮತ್ತು ಗ್ರಾಮ-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸ ಬಹುದಾಗಿದೆ. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ.30/- ಸೇವಾ ಶುಲ್ಕವನ್ನು ಆ ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶವಿರುತ್ತದೆ. ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು / ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮುಖೇನ ಕಳುಹಿಸಲಾಗುವುದು. ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‌ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್‌ಕಾರ್ಡ್ / ಡೆಬಿಟ್ ಕಾರ್ಡ್/UPI ಮುಖೇನ ಪಾವತಿಸಿ ಪಾಸನ್ನು ಪಡೆಯಬಹುದಾಗಿದೆ. ಪಾಸ್ ವಿತರಣಾ ಕೌಂಟರ್‌ಗಳ ವಿವರಗಳನ್ನು ಹಾಗೂ ಪಾಸಿನ ದರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://ksrtc.karnataka.gov.in / student pass ನಲ್ಲಿ ಒದಗಿಸಲಾಗಿದೆ.

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ವಿಧ್ಯಾರ್ಥಿಗಳು ಆನ್‌ಲೈನ್ ಅಥವಾ ಗ್ರಾಮ ಒನ್/ಕರ್ನಾಟಕ ಒನ್‌ನಲ್ಲಿ ಅರ್ಜಿ ಸಲ್ಲಿಸಿ ಪಾಸ್ (ಸ್ಮಾರ್ಟ್ಕಾರ್ಡ್) ಪಡೆಯಲು ಕರ್ನಾಟಕಒನ್, ಶಿವಮೊಗ್ಗ, 01 ನೇ ಮಹಡಿ, ಖಾಸಗಿ ಬಸ್ ನಿಲ್ದಾಣ, ಶಿವಮೊಗ್ಗ-577201. ಶಿಕಾರಿಪುರ- ಕರ್ನಾಟಕ ಒನ್, ತಾಲೂಕು ಕಚೇರಿ ಹಿಂಭಾಗ, ಶಿಕಾರಿಪುರ-577427. ಭದ್ರಾವತಿ- ಕರ್ನಾಟಕ ಒನ್, ಅಜೀಜ್ ಡಿಜಿಟಲ್ ಸರ್ವಿಸ್, ಓಲ್ಡ್ ಟೌನ್, ಕೋರ್ಟ್ ರಸ್ತೆ, ತಾಲ್ಲೂಕು ಕಛೇರಿ ಎದುರು, ಭದ್ರಾವತಿ. ಸಾಗರ-ಕರ್ನಾಟಕ ಒನ್, ಜ್ಯೋತಿ ಕಂಪ್ಯೂಟರ‍್ಸ್, ಕೋರ್ಟ್ ರಸ್ತೆ, ತಾಲ್ಲೂಕು ಕಛೇರಿ ಎದುರು, ಸಾಗರ-577401. ಹೊನ್ನಾಳಿ-ಕರ್ನಾಟಕ ಒನ್, ಟಿ.ಎಸ್ ಕಾಂಪ್ಲೆಕ್ಸ್, ಟಿ.ಎಂ ರಸ್ತೆ, ತಾಲ್ಲೂಕು ಕಛೇರಿ ಎದುರು, ಹೊನ್ನಾಳಿ-577217. ಸೊರಬ-ಕರ್ನಾಟಕ ಒನ್, ಮೈಕಾ ಕಂಪ್ಯೂಟರ‍್ಸ್, ನೂರ್ ಕಾಂಪ್ಲೆಕ್ಸ್, ಎಸ್.ಎಸ್ ರಸ್ತೆ, ಸೊರಬ-577429. ಈ ಕರ್ನಾಟಕ ಒನ್ ಕೇಂದ್ರಗಳನ್ನು ಸಂಪರ್ಕಿಸಲು ಕೋರಿದೆ.

ಹೆಚ್ದಿನ ಮಾಹಿತಿಗಾಗಿ ಹಾಗೂ ದೂರುಗಳಿದ್ದಲ್ಲಿ ದೂ.ಸಂ.: 080-24410574/ 8904082030/ 080-49203888/ 080-26252625, ಇ-ಮೇಲ್ : [email protected], [email protected], [email protected] ಗಳನ್ನು ಸಂಪರ್ಕಿಸುವುದು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!