LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

KSRTC ಬಸ್ ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣ: ಒಂದೇ ತಿಂಗಳಲ್ಲಿ 4 ಸಾವಿರಕ್ಕೂ ಹೆಚ್ಚು ಪ್ರಯಾಣಿಕರಿಂದ 9 ಲಕ್ಷ ರೂ. ದಂಡ ವಸೂಲಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆ.ಎಸ್.ಆರ್.ಟಿ.ಸಿ) ಬಸ್‌ಗಳಲ್ಲಿ ಟಿಕೆಟ್ ಪಡೆಯದೇ ಪ್ರಯಾಣಿಸುವವರ ವಿರುದ್ಧ ಕೆ.ಎಸ್.ಆರ್.ಟಿ ಜಾಗೃತ ದಳ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಂದು ತಿಂಗಳಲ್ಲಿ 9 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದೆ.

ಕರ್ನಾಟಕ ಹಾಗೂ ನೆರೆಯ ರಾಜ್ಯಗಳಲ್ಲಿ ಸಂಚರಿಸುವ ಕೆ.ಎಸ್‌.ಆರ್‌.ಟಿ.ಸಿ ಬಸ್‌ಗಳಲ್ಲಿ ಜಾಗೃತ ದಳದ ಸಿಬ್ಬಂದಿ ನಡೆಸಿದ ತಪಾಸಣೆಯ ವೇಳೆ ಸಿಕ್ಕಿಬಿದ್ದ ಟಿಕೆಟ್ ರಹಿತ ಪ್ರಯಾಣಿಕರಿಂದ ಒಟ್ಟು 8.94 ಲಕ್ಷ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಸಂಸ್ಥೆಯ ಆದಾಯಕ್ಕೆ ನಷ್ಟ ಉಂಟುಮಾಡುವವರನ್ನು ಪತ್ತೆ ಹಚ್ಚಲು ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು.

ಈ ಬಗ್ಗೆ ಕೆ.ಎಸ್‌.ಆರ್‌.ಟಿ.ಸಿ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ. ಈ ಒಂದು ತಿಂಗಳ ಸುದೀರ್ಘ ಕಾರ್ಯಾಚರಣೆಯಲ್ಲಿ ಜಾಗೃತ ದಳದ ತಂಡಗಳು ಒಟ್ಟು 42,518 ಬಸ್‌ಗಳನ್ನು ತಪಾಸಣೆಗೆ ಒಳಪಡಿಸಿವೆ. ಈ ವೇಳೆ 4,353 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದ್ದು, ಟಿಕೆಟ್ ರಹಿತವಾಗಿ ಪ್ರಯಾಣಿಸುತ್ತಿದ್ದ 4,476 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಸುಮಾರು 1.52 ಲಕ್ಷ ರೂಪಾಯಿ ಮೌಲ್ಯದ ಆದಾಯ ಸೋರಿಕೆಯನ್ನು ತಡೆಗಟ್ಟಲಾಗಿದ್ದು, ಒಟ್ಟಾರೆ 8.94 ಲಕ್ಷ ರೂ. ದಂಡದ ರೂಪದಲ್ಲಿ ಸಂಗ್ರಹವಾಗಿದೆ.

ಇಂತಹ ಅಕ್ರಮಗಳಲ್ಲಿ ಭಾಗಿಯಾಗಿರುವ ಅಥವಾ ಟಿಕೆಟ್ ನೀಡುವಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವ ಸಂಸ್ಥೆಯ ನೌಕರರ ವಿರುದ್ಧವೂ ಕೆ.ಎಸ್‌.ಆರ್‌.ಟಿ.ಸಿ ಕಠಿಣ ನಿಲುವು ತಳೆದಿದೆ. ಇಂತಹ ಅಕ್ರಮಗಳಿಗೆ ಕಾರಣರಾದ ಸಿಬ್ಬಂದಿಗಳ ವಿರುದ್ಧ ಈಗಾಗಲೇ ಇಲಾಖಾ ಮಟ್ಟದ ಶಿಸ್ತು ಕ್ರಮಗಳನ್ನು ಜರುಗಿಸಲಾಗಿದೆ ಎಂದು ಸಂಸ್ಥೆ ಖಚಿತಪಡಿಸಿದೆ.

ಮುಂದಿನ ದಿನಗಳಲ್ಲೂ ಈ ಕಾರ್ಯಾಚರಣೆಗಳು ಮುಂದುವರಿಯಲಿದ್ದು, ಪದೇ ಪದೇ ನಿಯಮ ಉಲ್ಲಂಘಿಸುವವರಿಗೆ ಮತ್ತಷ್ಟು ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಇದೇ ವೇಳೆ ಪ್ರಯಾಣಿಕರು ಜವಾಬ್ದಾರಿಯಿಂದ ವರ್ತಿಸಿ, ಪ್ರಯಾಣದ ಅವಧಿಯಲ್ಲಿ ಸೂಕ್ತ ಟಿಕೆಟ್ ಅಥವಾ ಪಾಸ್‌ಗಳನ್ನು ಖರೀದಿಸಿ ಸಂಸ್ಥೆಯೊಂದಿಗೆ ಸಹಕರಿಸಬೇಕು ಎಂದು ಕೆ.ಎಸ್‌.ಆರ್‌.ಟಿ.ಸಿ ಮನವಿ ಮಾಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!