LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವೀಕೆಂಡ್ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: KSRTCಯಿಂದ 850 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ

ಬೆಂಗಳೂರು: ದಿನಾಂಕ 02.10.2026 (ಶುಕ್ರವಾರ) ಗಾಂಧಿ ಜಯಂತಿ ಹಾಗೂ ದಿನಾಂಕ 03.10.2026 ಮತ್ತು 04.10.2026 ವಾರಾಂತ್ಯದ ದಿನಗಳಾಗಿರುವುದರಿಂದ, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಬರೋಬ್ಬರಿ 850 ಹೆಚ್ಚುವರಿ ವಿಶೇಷ ಬಸ್‌ಗಳ ಕಾರ್ಯಾಚರಣೆ ವ್ಯವಸ್ಥೆ ಮಾಡಿದೆ.

ದಿನಾಂಕ 01.10.2026 ಮತ್ತು 02.10.2026 ರಂದು ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯದ ವಿವಿಧ ಸ್ಥಳಗಳಿಗೆ ಈ ವಿಶೇಷ ಬಸ್‌ಗಳು ಸಂಚರಿಸಲಿವೆ. ಬಳಿಕ, ರಜೆ ಮುಗಿಸಿ ಹಿಂದಿರುಗುವ ಪ್ರಯಾಣಿಕರಿಗಾಗಿ ದಿನಾಂಕ 04.10.2026 ರಂದು ರಾಜ್ಯ ಮತ್ತು ಅಂತರರಾಜ್ಯದ ವಿವಿಧ ಊರುಗಳಿಂದ ಬೆಂಗಳೂರಿಗೆ ವಿಶೇಷ ವಾಹನಗಳ ಕಾರ್ಯಾಚರಣೆ ನಡೆಯಲಿದೆ ಎಂದು ನಿಗಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಯಾವ ನಿಲ್ದಾಣದಿಂದ ಯಾವ ಊರುಗಳಿಗೆ ಬಸ್‌ ಸೌಲಭ್ಯ?

  • ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್): ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ ಹಾಗೂ ಹೈದರಾಬಾದ್ ಮುಂತಾದ ಸ್ಥಳಗಳಿಗೆ ಇಲ್ಲಿಂದ ವಿಶೇಷ ಬಸ್‌ಗಳು ಹೊರಡಲಿವೆ.

  • ಮೈಸೂರು ರಸ್ತೆ ಬಸ್ ನಿಲ್ದಾಣ: ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಹಾಗೂ ಮಡಿಕೇರಿ ಮಾರ್ಗವಾಗಿ ಸಂಚರಿಸುವ ಬಸ್‌ಗಳು ಇಲ್ಲಿಂದ ಕಾರ್ಯಾಚರಣೆ ನಡೆಸಲಿವೆ.

  • ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣ: ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕ್ಕೋಡ್ ಮುಂತಾದ ಊರುಗಳಿಗೆ ತೆರಳುವ ಪ್ರತಿಷ್ಠಿತ ಸಾರಿಗೆ ಬಸ್‌ಗಳು ಇಲ್ಲಿಂದ ನಿರ್ಗಮಿಸಲಿವೆ.

  • ಜಿಲ್ಲಾ/ತಾಲ್ಲೂಕು ಕೇಂದ್ರಗಳು: ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿರುವ ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾ ಬಸ್ ನಿಲ್ದಾಣಗಳಿಂದಲೂ ಸಂಚಾರದ ದಟ್ಟಣೆಗೆ ಅನುಗುಣವಾಗಿ ವಿಶೇಷ ಸಾರಿಗೆ ಬಸ್‌ಗಳನ್ನು ಓಡಿಸಲಾಗುತ್ತದೆ.

ಟಿಕೆಟ್ ದರದಲ್ಲಿ ರಿಯಾಯಿತಿ ಸೌಲಭ್ಯಗಳು

  • ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಆಸನ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ಸಿಗಲಿದೆ.

  • ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ಗಳನ್ನು ಒಟ್ಟಿಗೆ (Round Trip) ಕಾಯ್ದಿರಿಸಿದರೆ, ಮರಳಿ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ಲಭ್ಯವಾಗಲಿದೆ.

ಮುಂಗಡ ಬುಕಿಂಗ್ ಮತ್ತು ಇತರ ವಿವರಗಳು

ಸಾರ್ವಜನಿಕರ ಸುಲಭ ಪ್ರಯಾಣಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡ ಆಸನ ಕಾಯ್ದಿರಿಸುವ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರು ನಿಗಮದ ಅಧಿಕೃತ ವೆಬ್‌ಸೈಟ್ www.ksrtc.karnataka.gov.in ಮೂಲಕ ಇ-ಟಿಕೆಟ್ ಬುಕಿಂಗ್ ಮಾಡಿಕೊಳ್ಳಬಹುದು. ಅಲ್ಲದೆ, ಕರ್ನಾಟಕ ಸೇರಿದಂತೆ ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯ ಪ್ರಮುಖ ನಗರಗಳಲ್ಲಿರುವ ಕೌಂಟರ್‌ಗಳ ಮುಖಾಂತರವೂ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ಹೆಚ್ಚುವರಿ ಸಾರಿಗೆಗಳ ವಿವರ, ಹೊರಡುವ ಸ್ಥಳ ಹಾಗೂ ಸಮಯದ ಮಾಹಿತಿಯನ್ನು ಮುಂಗಡ ಆಸನ ಕಾಯ್ದಿರಿಸುವ ಅಂತರ್ಜಾಲ ವ್ಯವಸ್ಥೆ ಮತ್ತು ನಿಗಮದ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ. ಪ್ರಯಾಣಿಕರು ನಿಲ್ದಾಣಗಳಿಗೆ ತೆರಳುವ ಮುನ್ನ, ತಾವು ಮುಂಗಡವಾಗಿ ಕಾಯ್ದಿರಿಸಿರುವ ಟಿಕೆಟ್‌ಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ ಹಾಗೂ ಪಿಕ್‌ಅಪ್ ಪಾಯಿಂಟ್ ಹೆಸರನ್ನು ಸರಿಯಾಗಿ ಪರಿಶೀಲಿಸಿಕೊಂಡು ಪ್ರಯಾಣಿಸುವಂತೆ ಕೆಎಸ್‌ಆರ್‌ಟಿಸಿ ಮನವಿ ಮಾಡಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು..

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!CJP ಪ್ರತಿಭಟನೆ: 3,000ಕ್ಕೂ ಹೆಚ್ಚು ಜನರ ಬಂಧನ; ದೇಶದಲ್ಲೀಗ ಅಘೋಷಿತ ತುರ್ತು ಪರಿಸ್ಥಿತಿ ಎಂದ ಸೋನಮ್ ವಾಂಗ್ ಚುಕ್