LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

'ಪತ್ರಕರ್ತರಿಗೆ ರೈಲ್ವೆ ಪಾಸ್' ಮರುಜಾರಿಗೊಳಿಸಲು ಕೇಂದ್ರ ಸಚಿವ ವಿ.ಸೋಮಣ್ಣಗೆ KUWJ ಮನವಿ

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ಅವರನ್ನು ಇಂದು ಸಂಜೆ ಭೇಟಿ ಮಾಡಿ, ಬೀದರ್‌ನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಸ್ಮರಣ ಸಂಚಿಕೆಯನ್ನು ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಪತ್ರಕರ್ತರಿಗೆ ಈ ಹಿಂದೆ ನೀಡಲಾಗುತ್ತಿದ್ದ ರೈಲ್ವೆ ಪಾಸ್ ಸೌಲಭ್ಯವನ್ನು ಮರುಪ್ರಾರಂಭಿಸುವಂತೆ ಕೆಯುಡಬ್ಲ್ಯೂಜೆ ವತಿಯಿಂದ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಪತ್ರಕರ್ತರು ರಾಜ್ಯದ ವಿವಿಧ ಭಾಗಗಳಿಗೆ ತೆರಳಿ ತಮ್ಮ ವೃತ್ತಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ರೈಲ್ವೆ ಪಾಸ್ ಸೌಲಭ್ಯ ಬಹಳ ಅನುಕೂಲವಾಗಿತ್ತು. ಆದ್ದರಿಂದ ಈ ಸೌಲಭ್ಯವನ್ನು ಪುನಃ ಜಾರಿಗೆ ತರಲು ಕ್ರಮ ಕೈಗೊಳ್ಳುವಂತೆ ಶಿವಾನಂದ ತಗಡೂರು ಮನವಿ ಮಾಡಿದರು.

ಮನವಿಗೆ ಸ್ಪಂದಿಸಿದ ಸಚಿವ ವಿ.ಸೋಮಣ್ಣ ಅವರು, ಪತ್ರಕರ್ತರ ರೈಲ್ವೆ ಪಾಸ್ ಬೇಡಿಕೆ ಪರಿಶೀಲನೆಯಲ್ಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಸೋಮಶೇಖರ ಗಾಂಧಿ ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!