LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘LPG’ ಗ್ರಾಹಕರಿಗೆ ಬಿಗ್ ಅಲರ್ಟ್ : ಜೂನ್ 30ರೊಳಗೆ e-KYC ಮಾಡದಿದ್ದರೆ ಗ್ಯಾಸ್ ಸಬ್ಸಿಡಿ ಬಂದ್ !

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಉಚಿತ LPG ಸಂಪರ್ಕ ಮತ್ತು ಗ್ಯಾಸ್ ಸಿಲಿಂಡರ್ ರಿಫಿಲ್‌ಗಳಿಗೆ ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಡಿ ಮೊದಲ ಸಿಲಿಂಡರ್ ಉಚಿತವಾಗಿದ್ದು, ನಂತರದ ರಿಫಿಲ್‌ಗಳಿಗೆ ₹300 ಸಬ್ಸಿಡಿ ನೀಡಲಾಗುತ್ತದೆ.

ಈ ಸಬ್ಸಿಡಿ ಪಡೆಯುತ್ತಿರುವ ಎಲ್ಲಾ ಫಲಾನುಭವಿಗಳು ಜೂನ್ 30ರೊಳಗೆ e-KYC ಪೂರ್ಣಗೊಳಿಸುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ನಿಗದಿತ ದಿನಾಂಕದೊಳಗೆ e-KYC ಮಾಡದಿದ್ದರೆ ಸಬ್ಸಿಡಿ ಹಣ ನಿಲ್ಲುವ ಸಾಧ್ಯತೆ ಇದೆ.

ಸರ್ಕಾರಿ ತೈಲ ಕಂಪನಿಗಳಾದ ಇಂಡೇನ್, ಭಾರತ್ ಗ್ಯಾಸ್ ಮತ್ತು HP ಗ್ಯಾಸ್ ಗ್ರಾಹಕರಿಗೆ ಈ ಬಗ್ಗೆ ಎಚ್ಚರಿಕೆ ನೀಡಿವೆ. ಸಬ್ಸಿಡಿ ನಿರಂತರವಾಗಿ ಪಡೆಯಲು e-KYC ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ತಿಳಿಸಿವೆ.

e-KYC ಹೇಗೆ ಮಾಡಬಹುದು?

  • ಸಮೀಪದ ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಿ.
  • ಡೆಲಿವರಿ ಸಿಬ್ಬಂದಿಯ ಬಯೋಮೆಟ್ರಿಕ್ ಸಾಧನದ ಮೂಲಕ.
  • ಮೊಬೈಲ್ ಆ್ಯಪ್‌ಗಳ ಮೂಲಕ ಮನೆಯಲ್ಲೇ:
    • ಇಂಡೇನ್ ಗ್ರಾಹಕರು: IndianOil One App
    • ಭಾರತ್ ಗ್ಯಾಸ್ ಗ್ರಾಹಕರು: Hello BPCL App
    • HP ಗ್ಯಾಸ್ ಗ್ರಾಹಕರು: HP Pay App

ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗೆ ಬರುವ OTP ಹಾಗೂ Face Authentication ಮೂಲಕ e-KYC ಪೂರ್ಣಗೊಳಿಸಬಹುದು.

ಗಮನಿಸಿ: ಈಗಾಗಲೇ e-KYC ಪೂರ್ಣಗೊಳಿಸಿರುವ ಗ್ರಾಹಕರು ಮತ್ತೆ ಮಾಡುವ ಅಗತ್ಯವಿಲ್ಲ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?