LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಠ್ಯಪುಸ್ತಕ ವಿವಾದ: ಕೃಷ್ಣ ಪುಸ್ತಕದ ಬಗ್ಗೆ NCERT ಸ್ಪಷ್ಟನೆ

ಬೆಂಗಳೂರು: 6ನೇ ತರಗತಿಯ ಕನ್ನಡ R3 ಪಠ್ಯಪುಸ್ತಕಕ್ಕೆ ಇಡಲಾದ ಹೆಸರಿನ ವಿಚಾರವಾಗಿ ಎನ್.ಸಿ.ಇ.ಆರ್.ಟಿ (NCERT) ಮತ್ತು ಸಿ.ಬಿ.ಎಸ್.ಇ (CBSE) ಪಠ್ಯಪುಸ್ತಕಗಳಲ್ಲಿ ಕೇಸರೀಕರಣ ಆರೋಪ ಕೇಳಿಬಂದಿದ್ದು, ಬಿಜೆಪಿ ಸರಕಾರವು ಮಕ್ಕಳ ಮನಸ್ಸಿನ ಮೇಲೆ ಸೈದ್ಧಾಂತಿಕ ವಿಚಾರಗಳನ್ನು ಹೇರಿಕೆ ಮಾಡಲು ಪ್ರಯತ್ನಿಸುತ್ತಿದೆ ಎಂದು ಮಾಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆರೋಪಿಸಿದ್ದರು. ವಿವಾದ ತೀವ್ರಗೊಳ್ಳುತ್ತಿದ್ದಂತೆ ಸ್ವತಃ ಎನ್.ಸಿ.ಇ.ಆರ್.ಟಿ ಸ್ಪಷ್ಟನೆ ನೀಡಿದೆ.

6ನೇ ತರಗತಿ ಕನ್ನಡ R3 ಪಠ್ಯಪುಸ್ತಕಕ್ಕೆ ಇಡಲಾದ ಕೃಷ್ಣ ಎಂಬ ಹೆಸರು ದೇವರಿಗೆ ಸಂಬಂಧಿಸಿದ್ದಲ್ಲ. ಬದಲಾಗಿ ಕರ್ನಾಟಕದ ಪ್ರಮುಖ ನದಿಯಾದ ಕೃಷ್ಣಾ ನದಿಯ ಹೆಸರಾಗಿದೆ. ಎಲ್ಲಾ ಭಾಷಾ ಪಠ್ಯಪುಸ್ತಕಗಳಿಗೂ ಭಾರತದ ಪ್ರಮುಖ ನದಿಗಳ ಹೆಸರನ್ನೇ ಇಡಲಾಗಿದೆ. ಹಿಂದಿಗೆ ಗಂಗಾ, ಇಂಗ್ಲಿಷ್​​ಗೆ ಕಾವೇರಿ, ಉರ್ದುವಿಗೆ ಜಮುನಾ ಮತ್ತು ಕನ್ನಡಕ್ಕೆ ಕೃಷ್ಣ ಹೆಸರನ್ನು ಪಠ್ಯ ಪುಸ್ತಕಗಳಿಗೆ ಇಟ್ಟಿದ್ದೇವೆ ಎಂದು ಎನ್.ಸಿ.ಇ.ಆರ್.ಟಿ ತಿಳಿಸಿದೆ.

6ನೇ ಅಧ್ಯಾಯ ‘Health is Wealth’ನಲ್ಲಿ ಸಮತೋಲನ ಆಹಾರ (Balanced Diet) ಕುರಿತು ಮಾತ್ರ ಪಾಠವಿದೆ. ಹೀಗಾಗಿ ಹಾಲು, ಹಸಿರು ಸೊಪ್ಪು, ತರಕಾರಿಗಳು, ಹಣ್ಣುಗಳು ಸೇರಿದಂತೆ ವಿವಿಧ ಆಹಾರ ಪದಾರ್ಥಗಳನ್ನು ಉಲ್ಲೇಖಿಸಲಾಗಿದೆ. ಪುಟ 63ರಲ್ಲಿ ಸಸ್ಯಾಹಾರ ಹಾಗೂ ಮಾಂಸಾಹಾರ ಎರಡನ್ನೂ ಒಳಗೊಂಡ ಚಿತ್ರವಿದೆ. ಪಠ್ಯದಲ್ಲಿ ಸಸ್ಯಾಹಾರವನ್ನು ಸಮರ್ಥಿಸಿಲ್ಲ, ಮಾಂಸಾಹಾರವನ್ನು ವಿರೋಧಿಸಿಲ್ಲ. ವಿದ್ಯಾರ್ಥಿಗಳಿಗೆ ಆರೋಗ್ಯಕರ ಆಹಾರದ ಬಗ್ಗೆ ಅರಿವು ಮೂಡಿಸುವುದೇ ಅಧ್ಯಾಯದ ಉದ್ದೇಶ ಎಂದೂ ಎಂದು ಸ್ಪಷ್ಟಪಡಿಸಲಾಗಿದೆ.

ಅಲ್ಲದೆ ಪಠ್ಯಪುಸ್ತಕವು NEP 2020 ಮತ್ತು NCF-SE 2023ರ ಸ್ಥಳೀಯತೆ ಹಾಗೂ ಸಾಂಸ್ಕೃತಿಕ ಸಂಪರ್ಕದ ಉದ್ದೇಶಕ್ಕೆ ಅನುಗುಣವಾಗಿದೆ. ಎನ್.ಸಿ.ಇ.ಆರ್.ಟಿ ಗುಣಮಟ್ಟದ ಪಠ್ಯಪುಸ್ತಕಗಳನ್ನು ನೀಡಲು ಬದ್ಧವಾಗಿದ್ದು, ಶಿಕ್ಷಣ ತಜ್ಞರು ಹಾಗೂ ಸಾರ್ವಜನಿಕರಿಂದ ಬರುವ ರಚನಾತ್ಮಕ ಸಲಹೆಗಳನ್ನು ಸ್ವಾಗತಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!