LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೊಡಗು ಜಿಲ್ಲೆಯಲ್ಲಿ ವಿಪತ್ತು ಎದುರಿಸಲು ಪರಿಕರ ಸಹಿತ ಸಜ್ಜಾದ NDRF

ಮಡಿಕೇರಿ: ನಗರದ ಜಿಲ್ಲಾ ಸಹಕಾರ ತರಬೇತಿ ಸಂಸ್ಥೆಯ ವಸತಿ ನಿಲಯದಲ್ಲಿ ವ್ಯಾಸ್ತವ್ಯ ಹೂಡಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ(ಎನ್‍ಡಿಆರ್‍ಎಫ್) ಅಧಿಕಾರಿಗಳು ಹಾಗೂ ಸಿಬ್ಬಂಧಿಯನ್ನು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಂಗಳವಾರ ಭೇಟಿ ಮಾಡಿ ಮಾಹಿತಿ ಪಡೆದರು.

ಜಿಲ್ಲೆಯ ಸೂಕ್ಷ್ಮ ಹಾಗೂ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿ, ತುರ್ತು ಸಂದರ್ಭದಲ್ಲಿ ಜನ-ಜಾನುವಾರು ರಕ್ಷಣೆ ಮಾಡುವಲ್ಲಿ ಎನ್‍ಡಿಆರ್‍ಎಫ್ ತಂಡ ಕರ್ತವ್ಯ ನಿರ್ವಹಿಸಲಿದೆ.

ಬೆಂಗಳೂರಿನ ರೀಜನಲ್ ರೆಸ್ಪಾನ್ಸ್ ಸೆಂಟರ್(ಆರ್‍ಆರ್‍ಸಿ) 10ನೇ ಬೆಟಾಲಿಯನ್‍ನ ಇನ್ಸ್‍ಪೆಕ್ಟರ್ ರಾಮ್ ಭಜ್ ಅವರ ನೇತೃತ್ವದಲ್ಲಿ ಎನ್‍ಡಿಆರ್‍ಎಫ್ ತಂಡ ಆಗಮಿಸಿದ್ದು, ಬೋಟ್ ಗಳು, ಮರ ಕತ್ತರಿಸುವ ಯಂತ್ರ, ರ್ಯಾಪ್ಟ್, ಹಗ್ಗ, ಟೆಂಟ್, ಜೀವರಕ್ಷಕ ಜಾಕೆಟ್, ಸರ್ಚ್ ಲೈಟ್, ಆಕ್ಸಿಜನ್ ಜನರೇಟರ್, ಜೀವರಕ್ಷಕ ಔಷಧಗಳ ಸಿಗ್ನಲ್ ಯೂನಿಟ್‍ಗಳು ಹೀಗೆ ಪರಿಕರಗಳ ಜೊತೆ ಎನ್‍ಡಿಆರ್‍ಎಫ್ ತಂಡ ಒಳಗೊಂಡಿದೆ.

ಈಗಾಗಲೇ ಜಿಲ್ಲೆಯಲ್ಲಿ ಮುಂಗಾರು ಆರಂಭವಾಗಿದ್ದು, ಸಾಧಾರಣ ಮಳೆಯಾಗುತ್ತಿದೆ. ಈ ಹಿನ್ನೆಲೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಪ್ರತೀ ವರ್ಷದಂತೆ ಈ ವರ್ಷವೂ ಎನ್‍ಡಿಆರ್‍ಎಫ್ ತಂಡ ಕೊಡಗು ಜಿಲ್ಲೆಗೆ ಆಗಮಿಸಿದ್ದು, ಸೂಕ್ಷ್ಮ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಮಾಹಿತಿ ಪಡೆಯಲಿದೆ.

ಈ ಬಾರಿ ಶ್ವಾನವು ಸಹ ಆಗಮಿಸಿದ್ದು, ಹೆಚ್ಚಿನ ಮಳೆಯಿಂದ ಯಾವುದಾದರೂ ಅವಘಡಗಳು ಸಂಭವಿಸಿದಲ್ಲಿ ಪತ್ತೆ ಹಚ್ಚಲು ಶ್ವಾನ ಸಹಾಯಕವಾಗಲಿದೆ. ಈಗಾಗಲೇ ಆಗಮಿಸಿರುವ 10ನೇ ಬೆಟಾಲಿಯನ್ ತಂಡವು ಕೇರಳದ ವಯನಾಡು ಸೇರಿದಂತೆ ಹಲವು ಕಡೆಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.

ತಂಡದಲ್ಲಿ 30 ಮಂದಿ ಸಿಬ್ಬಂದಿಗಳು ಇದ್ದು, ವಿವಿಧ ರಾಜ್ಯಗಳಿಂದ ಆಗಮಿಸಿದ್ದಾರೆ. ಪ್ರವಾಹ ಹಾಗೂ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ, ಪ್ರಾಕೃತಿಕ ವಿಕೋಪ ಉಂಟಾದಲ್ಲಿ ರಕ್ಷಣಾ ಕಾರ್ಯ ಕೈಗೊಳ್ಳುವ ಸಂಬಂಧ ತಂಡ ಸಿದ್ದವಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸಹಕಾರ ತರಬೇತಿ ಸಂಸ್ಥೆಯ ವಸತಿ ನಿಲಯದಲ್ಲಿ ಎನ್‍ಡಿಆರ್‍ಎಫ್ ತಂಡ ವಾಸ್ತವ್ಯ ಹೂಡಿದ್ದು, ಹೆಚ್ಚಿನ ಮಳೆಯಿಂದ ಅವಘಡಗಳು ಸಂಭವಿಸಿದಲ್ಲಿ ಎನ್‍ಡಿಆರ್‍ಎಫ್ ತಂಡ ತುರ್ತಾಗಿ ಧಾವಿಸಿ ರಕ್ಷಣಾ ಕಾರ್ಯಚರಣೆ ಕೈಗೊಳ್ಳಲಿದೆ ಎಂದರು.

ಸೂಕ್ಷ್ಮ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಲಿದ್ದಾರೆ. ಹಾಗೆಯೇ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಮಳೆಗಾಲದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!