LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚಿಸಲು ನಮ್ಮ ಸಹಾಯ ಬೇಕೆಂದು ಮನವಿ ಮಾಡಿಕೊಂಡಿದ್ದಾರೆ ಎಂದು ಬಾಂಬ್ ಸಿಡಿಸಿದ ಕಾಂಗ್ರೆಸ್ ನಾಯಕ; ವಿಡಿಯೊ

ಮೇ 4ರಂದು ಹೊರಬಿದ್ದ ತಮಿಳುನಾಡು ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಸದ್ಯ ಭಾರೀ ಚರ್ಚೆಗಳನ್ನು ಹುಟ್ಟುಹಾಕಿದೆ.

ಟಿವಿಕೆ 108 ಸೀಟುಗಳನ್ನು ಪಡೆದುಕೊಂಡು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಸಹ ಸರ್ಕಾರ ರಚಿಸಲು ಇನ್ನೂ 10 ಶಾಸಕರ ಬೆಂಬಲ ಅಗತ್ಯವಿದೆ. ಇನ್ನು ವಿಜಯ್ ಪೆರಂಬೂರು ಹಾಗೂ ತಿರುಚಿರಪಲ್ಲಿ ಪೂರ್ವ ಈ ಎರಡೂ ಕ್ಷೇತ್ರಗಳಲ್ಲಿ ಗೆದ್ದಿದ್ದು, ಈ ಪೈಕಿ ಒಂದು ಕ್ಷೇತ್ರವನ್ನು ಬಿಟ್ಟುಕೊಡಲಿದ್ದಾರೆ. ಅಲ್ಲದೇ ಸ್ಪೀಕರ್ ನೇಮಕ ಸಹ ಆಗಲಿದ್ದು, ಈ ಎರಡು ಕಾರಣಗಳಿಂದ ಟಿವಿಕೆ ಶಾಸಕರ ಬಲ 106ಕ್ಕೆ ಕುಸಿಯಲಿದೆ.

ಹೀಗಾಗಿ ಟಿವಿಕೆ ಸರ್ಕಾರ ರಚಿಸಲು ಇನ್ನೂ 12 ಶಾಸಕರ ಅಗತ್ಯವಿದ್ದು, ಇತರೆ ಪಕ್ಷಗಳ ಸಹಾಯ ಕೋರದೇ ಬೇರೆ ವಿಧಿ ಇಲ್ಲದಂತಾಗಿದೆ.

ಹೀಗಿರುವಾಗಲೇ ಕಾಂಗ್ರೆಸ್‌ನ ನಾಯಕ ಕೆಸಿ ವೇಣುಗೋಪಾಲ್ ಈ ಕುರಿತು ಮಾತನಾಡಿದ್ದು, ಟಿವಿಕೆ ಮುಖ್ಯಸ್ಥ ವಿಜಯ್ ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್‌ಗೆ ಬೆಂಬಲ ಸೂಚಿಸುವಂತೆ ಮನವಿ ಮಾಡಿಕೊಂಡಿದ್ದಾರೆ, ಅಲ್ಲದೇ ಪೆರುಮ್‌ತಲೈವರ್ ಕಾಮರಾಜು ಅವರ ಸಿದ್ಧಾಂತವನ್ನೂ ಸಹ ಅಳವಡಿಸಿಕೊಳ್ಳುವುದಾಗಿ ಅವರು ಹೇಳಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್‌ಗೆ ತಮಿಳುನಾಡಿನಲ್ಲಿ ಸಂವಿಧಾನ ಉಳಿಸುವ ಸರ್ಕಾರ ನಡೆಯಬೇಕೆಂಬ ಇಂಗಿತ ಮುಂಚಿನಿಂದಲೂ ಇದೆ, ಬಿಜೆಪಿ ಬೆಂಬಲದಿಂದ ತಮಿಳುನಾಡಿನಲ್ಲಿ ಸರ್ಕಾರ ನಡೆಯಬಾರದು ಎಂಬುದು ಸಹ ಅದರ ಧ್ಯೇಯವಾಗಿದೆ, ತಮಿಳುನಾಡು ಕಾಂಗ್ರೆಸ್‌ಗೆ ವಿಜಯ್ ಮನವಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಆಯ್ಕೆಯನ್ನು ಬಿಡಲಾಗಿದೆ ಎಂದೂ ಸಹ ವೇಣುಗೋಪಾಲ್ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?