LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಂಧ್ರಪ್ರದೇಶ ಎಫ್‌ಡಿಸಿ ನೂತನ ಅಧ್ಯಕ್ಷರಾಗಿ ಭರತ್ ಭೂಷಣ್ ನೇಮಕ: ಚಿತ್ರರಂಗದ ಸಮಸ್ಯೆಗಳಿಗೆ ಸಿಗಲಿದೆಯೇ ಪರಿಹಾರ?

ಅಮರಾವತಿ: ಕಳೆದ ಎರಡು ವರ್ಷಗಳಿಂದ ಖಾಲಿಯಿದ್ದ ಆಂಧ್ರಪ್ರದೇಶ ರಾಜ್ಯ ಚಲನಚಿತ್ರ, ದೂರದರ್ಶನ ಮತ್ತು ರಂಗಭೂಮಿ ಅಭಿವೃದ್ಧಿ ನಿಗಮದ (FDC) ಅಧ್ಯಕ್ಷ ಸ್ಥಾನಕ್ಕೆ ಅಂತಿಮವಾಗಿ ಚಾಲನೆ ಸಿಕ್ಕಿದೆ. ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್‌ನ ಮಾಜಿ ಅಧ್ಯಕ್ಷ ಭರತ್ ಭೂಷಣ್ ಅವರನ್ನು ಈ ಪ್ರಮುಖ ಹುದ್ದೆಗೆ ನೇಮಕ ಮಾಡಿ ಆಂಧ್ರ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ಚಲನಚಿತ್ರ ರಂಗದಲ್ಲಿ ದಶಕಗಳ ಅನುಭವ ಹೊಂದಿರುವ ಭರತ್ ಭೂಷಣ್, ಕಳೆದ ಎರಡು ದಶಕಗಳಿಂದ ಚಿತ್ರ ವಿತರಣಾ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿರುವ ಇವರು, ಚಿತ್ರರಂಗದ ಕಾರ್ಮಿಕರು, ವಿತರಕರು ಮತ್ತು ನಿರ್ಮಾಪಕರ ಸಮಸ್ಯೆಗಳಿಗೆ ಸದಾ ಸ್ಪಂದಿಸುವ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಭರತ್ ಇನ್ಫ್ರಾ ಎಂಬ ಸಂಸ್ಥೆಯ ಮೂಲಕ ಹಲವರಿಗೆ ಉದ್ಯೋಗಾವಕಾಶವನ್ನೂ ಕಲ್ಪಿಸಿದ್ದಾರೆ.

ಭರತ್ ಭೂಷಣ್ ನೇಮಕದಿಂದಾಗಿ ತೆಲುಗು ಚಿತ್ರರಂಗಕ್ಕೆ ಸರ್ಕಾರವನ್ನು ಸಂಪರ್ಕಿಸಲು ಈಗ ಅಧಿಕೃತವಾದ ಒಂದು ವೇದಿಕೆ ಸಿಕ್ಕಂತಾಗಿದೆ. ಈ ಹಿಂದೆ ಸಿನಿಮಾ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸಚಿವರು ಅಥವಾ ಅಧಿಕಾರಿಗಳನ್ನು ನೇರವಾಗಿ ಭೇಟಿ ಮಾಡಬೇಕಿತ್ತು. ಆದರೆ ಈಗ ಎಫ್‌ಡಿಸಿ ಅಧ್ಯಕ್ಷರ ಮೂಲಕ ಚರ್ಚೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಇದು ರಾಜ್ಯದಲ್ಲಿ ಸಿನಿಮಾ, ಟಿವಿ ಮತ್ತು ನಾಟಕ ರಂಗದ ಬೆಳವಣಿಗೆಗೆ ಸರ್ಕಾರದ ಹೊಸ ಆಶಾದಾಯಕ ಕ್ರಮ ಎಂದು ವಿಶ್ಲೇಷಿಸಲಾಗುತ್ತಿದೆ.

ನೆರೆಯ ತೆಲಂಗಾಣದಲ್ಲಿ ನಿರ್ಮಾಪಕ ದಿಲ್ ರಾಜು ಅವರು ಎಫ್‌ಡಿಸಿ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ‘ಗದ್ದರ್ ತೆಲುಗು ಫಿಲ್ಮ್ ಅವಾರ್ಡ್ಸ್’ ಆರಂಭಿಸಲಾಗಿದೆ. ಅದೇ ಮಾದರಿಯಲ್ಲಿ ಈಗ ಆಂಧ್ರ ಸರ್ಕಾರವು ಕಳೆದ ಕೆಲವು ವರ್ಷಗಳಿಂದ ಸ್ಥಗಿತಗೊಂಡಿರುವ ಪ್ರತಿಷ್ಠಿತ ‘ನಂದಿ ಚಲನಚಿತ್ರ ಪ್ರಶಸ್ತಿ’ಗಳನ್ನು ಮತ್ತೆ ಆರಂಭಿಸುತ್ತದೆಯೇ ಎಂಬ ಕುತೂಹಲ ಚಿತ್ರರಂಗದಲ್ಲಿ ಮೂಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!