LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಿಮ್ಮ ಮಗಳು ಶ್ರೀಲೀಲಾ ಮುಂಬೈ ಇಂಡಿಯನ್ಸ್‌ ಆಟಗಾರನ ಜತೆ ಲವ್‌ನಲ್ಲಿದ್ದಾರಂತೆ, ಅವರು ನಿಮ್ಮ ಅಳಿಯ ಅಂತೆ ಹೌದಾ? ಕೊನೆಗೂ ತುಟಿಬಿಚ್ಚಿದ ಶ್ರೀಲೀಲಾ ತಾಯಿ

ನಟಿ ಶ್ರೀಲೀಲಾ ಸದ್ಯ ದಕ್ಷಿಣ ಭಾರತದ ಟಾಪ್ ಒನ್ ನಟಿ. ಕನ್ನಡದ ಕಿಸ್ ಚಿತ್ರದ ಮೂಲಕ ನಟನೆ ಆರಂಭಿಸಿದ ಶ್ರೀಲೀಲಾ ತನ್ನ ಭರ್ಜರಿ ಡಾನ್ಸ್ ಹಾಗೂ ನಟನಾ ಕೌಶಲ್ಯದಿಂದ ಬೇಗನೆ ತೆಲುಗು ಚಿತ್ರರಂಗದಲ್ಲಿ ಅವಕಾಶ ಗಿಟ್ಟಿಸಿಕೊಂಡು ಬ್ಯುಸಿಯಾಗಿಬಿಟ್ಟರು.

ಮಹೇಶ್ ಬಾಬು ರೀತಿಯ ಸೂಪರ್ ಸ್ಟಾರ್‌ಗೆ ನಟಿಯಾದ ಶ್ರೀಲೀಲಾ ರೇಂಜ್ ಬೇರೆಯದ್ದೇ ಲೆವೆಲ್‌ನಲ್ಲಿದ್ದು, ನಟಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ವದಂತಿಗಳು ಸಹ ಅಷ್ಟೇ ಮಟ್ಟದಲ್ಲಿವೆ.

ನಟಿ ಶ್ರೀಲೀಲಾ ಮದುವೆ, ಬಾಯ್‌ಫ್ರೆಂಡ್ ಎಂಬ ನಾನಾ ವೈಯಕ್ತಿಕ ವಿಚಾರಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ನಡೆಯುತ್ತಲೇ ಇದ್ದು, ಇತ್ತೀಚೆಗಷ್ಟೆ ಈ ವಿಷಯಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗನ ಜತೆ ಶ್ರೀಲೀಲಾ ಹೆಸರು ತಳುಕಿಹಾಕಿಕೊಂಡಿತ್ತು.

ಹೌದು, ಮುಂಬೈ ಇಂಡಿಯನ್ಸ್ ಸ್ಪೋಟಕ ಆಟಗಾರ ತಿಲಕ್ ವರ್ಮಾ ಜತೆ ಶ್ರೀಲೀಲಾ ಲವ್‌ನಲ್ಲಿ ಇದ್ದಾರೆ ಎಂಬ ಸುದ್ದಿಗಳು ದೊಡ್ಡ ಮಟ್ಟದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಆದರೆ ಈ ಕುರಿತು ನಟಿ ಶ್ರೀಲೀಲಾ ಆಗಲಿ ಅಥವಾ ತಿಲಕ್ ವರ್ಮಾ ಆಗಲಿ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ಆದರೆ ಶ್ರೀಲೀಲಾ ತಾಯಿ ಡಾ. ಸ್ವರ್ಣಲತಾ ಈ ಕುರಿತು ಪ್ರತಿಕ್ರಿಯಿಸಿದ್ದು, ಇದೆಲ್ಲ ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆ. ಡೆಕ್ಕನ್ ಕ್ರಾನಿಕಲ್ ಜತೆ ಮಾತನಾಡಿದ ಅವರು ಶ್ರೀಲೀಲಾ ಹಾಗೂ ತಿಲಕ್ ವರ್ಮಾ ಇಷ್ಟು ವರ್ಷಗಳಲ್ಲಿ ಒಮ್ಮೆಯೂ ಪರಸ್ಪರ ಭೇಟಿಯಾಗಿಲ್ಲ, ಹೀಗಿರುವಾಗ ಡೇಟಿಂಗ್ ಎಲ್ಲ ವದಂತಿ ಅಷ್ಟೇ ಎಂದು ಸ್ಪಷ್ಟನೆ ಕೊಟ್ಟಿದ್ದು, ಎಲ್ಲ ಸುದ್ದಿಗಳನ್ನು ತಳ್ಳಿಹಾಕಿದ್ದಾರೆ.

ಇನ್ನು ಈ ರೀತಿಯ ವದಂತಿ ಹುಟ್ಟಿಕೊಳ್ಳಲು ಕಾರಣ ಇದೇ ಶ್ರೀಲೀಲಾ ತಾಯಿ ಸ್ವರ್ಣಲತಾ ಮುಂಬೈ ಇಂಡಿಯನ್ಸ್ ಪಂದ್ಯವನ್ನು ವೀಕ್ಷಿಸಲು ಕ್ರೀಡಾಂಗಣಕ್ಕೆ ತೆರಳಿದ್ದರು. ಈ ವೇಳೆ ಸ್ವರ್ಣಲತಾ ಸ್ನೇಹಿತೆಯೊಬ್ಬರು ತಿಲಕ್ ವರ್ಮಾ ಹೆಸರಿರುವ ಜೆರ್ಸಿ ಧರಿಸಿದ್ದರು, ಹೀಗಾಗಿ ಈ ವದಂತಿ ಹಬ್ಬಿತು ಎಂದು ಹೇಳಲಾಗಿತ್ತು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ