LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಸ್ಟ್ರೇಲಿಯಾದ ಮ್ಯಾರಥಾನ್ ನಲ್ಲಿ ಗಮನಸೆಳೆದ ಪೊಲೀಸ್ ಅಧಿಕಾರಿ ಸಂದೀಪ್ ಪಾಟೀಲ್, ಸದಾನಂದ ಅಮ್ರಾಪುರ

ಆಸ್ಟ್ರೇಲಿಯಾದ ಮ್ಯಾರಥಾನ್ ಓಟದಲ್ಲಿ ಕರ್ನಾಟಕದ ಪೊಲೀಸ್ ಅಧಿಕಾರಿ ಸಂದೀಪ್ ಪಾಟೀಲ್ ಮತ್ತು ವೃಕ್ಷಥಾನ್ ನ ಸದಾನಂದ ಅಮ್ರಾಪುರ ಭಾಗಿಯಾಗಿ ಗಮನಸೆಳೆದಿದ್ದಾರೆ. ಅವರಿಗೆ ಸಚಿವ ಎಂ.ಬಿ. ಪಾಟೀಲ್ ಅಭಿನಂದನೆ ಸಲ್ಲಿಸಿದ್ದಾರೆ.

ಆಸ್ಟ್ರೇಲಿಯಾದ ಮ್ಯಾರಥಾನ್ ಓಟದಲ್ಲಿ  ಗಮನ ಸೆಳೆದ ವೃಕ್ಷಥಾನ್ ನ ಬ್ರಾಂಡ್ ಅಂಬಾಸೆಡರ್ಸ್!

ನಾಡಿನ ಹೆಸರಾಂತ ಪೊಲೀಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರು ಆಸ್ಟ್ರೇಲಿಯಾದ ಪಶ್ಚಿಮ ಸಿಡ್ನಿಯಲ್ಲಿ ಇದೇ ಮೇ 17ರಂದು ನಡೆದ ಐರನ್‌ಮ್ಯಾನ್ 70.3 ಸ್ಪರ್ಧೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ತಮ್ಮ ಆರನೇ ಐರನ್‌ ಮ್ಯಾನ್ ಸಾಧನೆಯನ್ನು ದಾಖಲಿಸಿ, ಅದರೊಂದಿಗೆ ಕರ್ನಾಟಕದ ಕೀರ್ತಿಯನ್ನು ಮತ್ತಷ್ಟು ಬೆಳಗಿಸಿದ್ದಾರೆ.

ಅದೇ ರೀತಿ ಸದಾನಂದ ಅಮ್ರಾಪುರ ಅವರು ಮ್ಯಾರಥಾನ್ ಓಟದಲ್ಲಿ ಭಾಗವಹಿಸಿ, 4 ಗಂಟೆ 50 ನಿಮಿಷಗಳಲ್ಲಿ ಸ್ಪರ್ಧೆಯನ್ನು ಪೂರ್ಣಗೊಳಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಈ ಇಬ್ಬರು ಹೆಮ್ಮೆಯ ಕನ್ನಡಿಗರಿಗೆ ಹಾಗೂ ಅವರ ಅಪೂರ್ವ ಸಾಧನೆಗೆ ಹೃದಯಪೂರ್ವಕ ಅಭಿನಂದನೆಗಳು ಎಂದು ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಸದಾನಂದ ಅಮ್ರಾಪುರ ಅವರು ಕಳೆದ ವೃಕ್ಷಥಾನ್ ಹೆರಿಟೇಜ್ ರನ್ ನಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಯಿಂದ ಸೈಕಲ್ ಮೂಲಕವೇ ವಿಜಯಪುರಕ್ಕೆ ಬಂದು, ಗಮನ ಸೆಳೆದಿದ್ದರು. ಈಗ ಆಸ್ಟ್ರೇಲಿಯಾದಲ್ಲಿ ಈ ಓಟದಲ್ಲಿ ಕೂಡ ವೃಕ್ಷಥಾನ್ ಹೆರಿಟೇಜ್ ರನ್ ಟಿ ಶರ್ಟ್ ಧರಿಸಿ ಓಡಿರುವುದು ವಿಜಯಪುರದ ಹೆಸರಿನ ಕುರಿತಾದ ಅವರ ಅಭಿಮಾನವನ್ನು ವ್ಯಕ್ತಪಡಿಸುತ್ತದೆ.

ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರು ಪೊಲೀಸ್ ಇಲಾಖೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಯಾವ ರೀತಿ ಫಿಟ್ನೆಸ್ ಕಾಯ್ದುಕೊಳ್ಳಬೇಕು ಎಂಬುದರ ಕುರಿತು ಮಾದರಿಯಾಗಿದ್ದಾರೆ. ಈ ಹಿಂದೆ ಕೊಪನ್ ಹೇಗನ್ ನಲ್ಲಿ ನಡೆದ ಐರನ್ ಮೆನ್ ನಲ್ಲಿ ಕೂಡ ಭಾಗವಹಿಸಿ, ವಿಜೇತರಾಗಿದ್ದರು. ಈಗ ಅವರ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಮೂಡಿದೆ.

ಮುಂದಿನ ದಿನಗಳಲ್ಲಿ ಇವರುಗಳು ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಿ, ನಮ್ಮ ಬಸವನಾಡು ಹಾಗೂ ಕರ್ನಾಟಕದ ಕೀರ್ತಿಯನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಸಚಿವ ಎಂ.ಬಿ. ಪಾಟೀಲ್ ಹಾರೈಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ