LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬರೀ ಮಹಿಳೆಯರಿಗೆ ಏಕೆ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಘೋಷಿಸಿದ ಡಿಕೆಶಿ; ಯಾವ ತರಗತಿಯವರಿಗೆ ಫ್ರೀ? ಇಲ್ಲಿದೆ ಸಂಪೂರ್ಣ ಮಾಹಿತಿ

ನಿನ್ನೆ ( ಜೂನ್ 3 ) ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಿ ಅಧಿಕಾರ ಆರಂಭಿಸಿದರು.

ಬಹಿರಂಗವಾಗಿ ಹೇಳಿಕೊಳ್ಳದಿದ್ದರೂ ಹಲವು ವರ್ಷಗಳಿಂದ ಮುಖ್ಯಮಂತ್ರಿ ಸ್ಥಾನಕ್ಕಾಗಿ ಎದುರು ನೋಡುತ್ತಾ ಕಾಂಗ್ರೆಸ್ ಎಂದಿಗೂ ತನ್ನ ಕೈಬಿಡುವುದಿಲ್ಲ ಎಂದು ಪಕ್ಷ ನಿಷ್ಠೆ ತೋರಿಸಿದ್ದ ಡಿಕೆಶಿಗೆ ಕೊನೆಗೂ ಸಿಎಂ ಕುರ್ಚಿಯಲ್ಲಿ ಕುಳಿತು ಆಡಳಿತ ನಡೆಸುವ ಕಾಲ ಬಂದಿದ್ದು, ಅವರ ಅಭಿಮಾನಿಗಳ ಪಾಲಿಗಿದು ಮರೆಯದ ದಿನವಾಗಿದೆ.

ಹೀಗೆ ಬಹು ವರ್ಷಗಳ ಆಸೆಯಂತೆ ಮುಖ್ಯಮಂತ್ರಿ ಗಾದಿಗೆ ಏರಿದ ಡಿಕೆ ಶಿವಕುಮಾರ್ ಮೊದಲ ದಿನವೇ ವಿದ್ಯಾರ್ಥಿಗಳ ವಿಚಾರವಾಗಿ ಮಹತ್ವದ ಘೋಷಣೆ ಮಾಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.

ಹೌದು, ದೇಶದಲ್ಲೇ ಮೊದಲ ಬಾರಿಗೆ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಎಂಬ ಘೋಷಣೆ ಮಾಡಿ ಹಲವು ರಾಜ್ಯಗಳಿಗೆ ಮಾದರಿಯಾಗಿದ್ದ ರಾಜ್ಯ ಕಾಂಗ್ರೆಸ್ ಇದೀಗ ಮತ್ತೊಂದು ಹೆಜ್ಜೆ ಇಟ್ಟಿದ್ದು, ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಎಂದು ಘೋಷಣೆ ಮಾಡಿದೆ.

ಈ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್ ‘ವಿದ್ಯಾರ್ಥಿ ಯುವಕರು ಅನೇಕ ಬಾರಿ ನನ್ನ ಬಳಿ ಬಸ್ ಪಾಸ್ ಬಗ್ಗೆ ಮಾತನಾಡಿದ್ದಾರೆ, ಹೆಣ್ಣುಮಕ್ಕಳಿಗೆ ಮಾತ್ರ ಫ್ರಿ ಆಗಿ ಓಡಾಡೋಕೆ ಬಿಟ್ಟಿದ್ದೀರ ನಾವೆಲ್ಲ ಏನಾಗಬೇಕು ಎಂದು ಹೇಳಿ ಗಲಾಟೆ ಮಾಡುತ್ತಿದ್ದರು. ಅದಕ್ಕೆ ನಾವು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ತೀರ್ಮಾನಿಸಿದ್ದೇವೆ. ಅದಕ್ಕೆ ಹೊಸ ಹೆಸರನ್ನು ಇಟ್ಟಿದ್ದು, ಉದ್ಘಾಟನೆ ದಿನ ಅದನ್ನು ಬಹಿರಂಗಪಡಿಸುತ್ತೇನೆ. ಶಾಲೆ, ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೂ ಸಹ ಬಸ್ ಪಾಸ್ ಉಚಿತ ಮಾಡಲಿದ್ದೇವೆ. ಅದಕ್ಕೆ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು’ ಎಂದು ಹೇಳಿಕೆ ನೀಡಿದರು.

ಈ ಮೂಲಕ ಎಲ್ಲ ವಿದ್ಯಾರ್ಥಿಗಳಿಗೂ ಬಸ್ ಪಾಸ್ ಉಚಿತ ಎಂದು ಡಿಕೆಶಿ ತಿಳಿಸಿದ್ದಾರೆ, ಪ್ರಾಥಮಿಕ ಶಾಲೆಯಿಂದ ಹಿಡಿದು ಸ್ನಾತಕೋತ್ತರ ಪದವಿವರೆಗಿನ ಎಲ್ಲ ವಿದ್ಯಾರ್ಥಿಗಳಿಗೂ ಈ ಯೋಜನೆ ಇರಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ