LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾನು ಬೇರೆ ಆಟಗಾರರ ಹಾಗೆ ನಟಿಸುವುದಿಲ್ಲ, ಯಾರ ನೆರಳಲ್ಲೂಇರಲ್ಲ; ನಾಯಕನಾದ ಬೆನ್ನಲ್ಲೇ ಶ್ರೇಯಸ್ ಹೀಗೆ ಹೇಳಿದ್ದು ಯಾವ ಆಟಗಾರನಿಗೆ?

ಭಾರತ ಟಿ೨೦ ಕ್ರಿಕೆಟ್ ತಂಡದ ನೂತನ ನಾಯಕನಾಗಿ ಆಯ್ಕೆಯಾಗಿರುವ ಶ್ರೇಯಸ್ ಅಯ್ಯರ್, ತಮ್ಮ ನಾಯಕತ್ವದ ಶೈಲಿ ಮತ್ತು ಸಿದ್ಧಾಂತಗಳ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ. ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅವರು, ನಾಯಕತ್ವದ ಜವಾಬ್ದಾರಿಯನ್ನು ಒಂದು ಸವಾಲಾಗಿ ಸ್ವೀಕರಿಸುವುದಾಗಿ ಹೇಳಿದ್ದಲ್ಲದೆ, ತಾವು ಯಾರ ನೆರಳಿನಲ್ಲೂ ಇರಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತಂಡಕ್ಕೆ ಮರಳಿದ ಬೆನ್ನಲ್ಲೇ ಒಲಿದ ನಾಯಕತ್ವದ ಗರಿ

ಶ್ರೇಯಸ್ ಅಯ್ಯರ್ ಕೊನೆಯದಾಗಿ ೨೦೨೩ರ ಡಿಸೆಂಬರ್‌ನಲ್ಲಿ ಭಾರತ ಪರ ಟಿ೨೦ ಪಂದ್ಯ ಆಡಿದ್ದರು. ಆ ನಂತರ ನಡೆದ ಟಿ೨೦ ವಿಶ್ವಕಪ್ ಮತ್ತು ಏಷ್ಯಾ ಕಪ್ ಸರಣಿಗಳಿಗೆ ಅವರನ್ನು ತಂಡಕ್ಕೆ ಆಯ್ಕೆ ಮಾಡಿರಲಿಲ್ಲ. ಈ ಎರಡೂ ಪ್ರಮುಖ ಟೂರ್ನಿಗಳಲ್ಲಿ ಸೂರ್ಯಕುಮಾರ್ ಯಾದವ್ ಭಾರತ ತಂಡವನ್ನು ಮುನ್ನಡೆಸಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಸೂರ್ಯಕುಮಾರ್ ಅವರ ಪ್ರದರ್ಶನ ಮಂಕಾಗಿದ್ದರೆ, ಶ್ರೇಯಸ್ ಅಯ್ಯರ್ ಮಾತ್ರ ಐಪಿಎಲ್‌ನಲ್ಲಿ ಸತತವಾಗಿ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿದ್ದಾರೆ.

ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ಮುಂಬರುವ ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಿಗಾಗಿ ಸೂರ್ಯಕುಮಾರ್ ಯಾದವ್ ಅವರ ಸ್ಥಾನಕ್ಕೆ ಶ್ರೇಯಸ್ ಅಯ್ಯರ್ ಅವರನ್ನು ಆಯ್ಕೆ ಮಾಡಿದ್ದಲ್ಲದೆ, ತಂಡದ ಚುಕ್ಕಾಣಿಯನ್ನೂ ಅವರ ಕೈಗೊಪ್ಪಿಸಿದೆ.

ನನ್ನ ವ್ಯಕ್ತಿತ್ವ ಬದಲಾಗುವುದಿಲ್ಲ ಎಂದ ಅಯ್ಯರ್

ತಮಗೆ ಸಿಕ್ಕಿರುವ ಹೊಸ ಜವಾಬ್ದಾರಿಯ ಕುರಿತು ಮಾತನಾಡಿದ ಶ್ರೇಯಸ್, “ನಾಯಕನಾಗಿ ಜವಾಬ್ದಾರಿ ಸಿಕ್ಕಿರುವುದು ದೊಡ್ಡ ಸವಾಲು. ಆದರೆ ಇದಕ್ಕಾಗಿ ನಾನು ನನ್ನ ಮೂಲ ವ್ಯಕ್ತಿತ್ವವನ್ನು ಬದಲಾಯಿಸಿಕೊಳ್ಳುವುದಿಲ್ಲ. ನಾನು ಮೊದಲಿನಿಂದಲೂ ಹೆಗಿದ್ದೇನೋ ಹಾಗೇ ಇರುತ್ತೇನೆ. ಬೇರೆಯವರಂತೆ ನಟಿಸಲು ಅಥವಾ ಯಾರದ್ದೋ ನೆರಳಿನಡಿ ಕೆಲಸ ಮಾಡಲು ನಾನು ಇಷ್ಟಪಡುವುದಿಲ್ಲ” ಎಂದು ಕಟುವಾಗಿ ಹೇಳಿದ್ದಾರೆ.

ಐಪಿಎಲ್‌ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದ ಶ್ರೇಯಸ್ ಅಯ್ಯರ್, ಕಳೆದ ಸೀಸನ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಫೈನಲ್‌ವರೆಗೂ ಮುನ್ನಡೆಸಿದ್ದರು. ಆದರೆ, ಕೆಕೆಆರ್ ತಂಡ ಗೆದ್ದಾಗ ಶ್ರೇಯಸ್ ನಾಯಕತ್ವಕ್ಕಿಂತ ಹೆಚ್ಚಾಗಿ ಅಂದಿನ ತಂಡದ ಮೆಂಟರ್ ಗೌತಮ್ ಗಂಭೀರ್ ಅವರಿಗೆ ಯಶಸ್ಸಿನ ಕ್ರೆಡಿಟ್ ನೀಡಲಾಗಿತ್ತು. ಇದೀಗ ಟಿ೨೦ ಕ್ರಿಕೆಟ್‌ನಲ್ಲಿ ಗೌತಮ್ ಗಂಭೀರ್ ಭಾರತ ತಂಡದ ಮುಖ್ಯ ಕೋಚ್ ಆಗಿ ಹಾಗೂ ಶ್ರೇಯಸ್ ಅಯ್ಯರ್ ನಾಯಕನಾಗಿ ಮತ್ತೆ ಒಂದಾಗುತ್ತಿದ್ದು, ಇವರಿಬ್ಬರ ಜುಗಲ್ಬಂದಿ ಭಾರತೀಯ ಕ್ರಿಕೆಟ್‌ನ ಭವಿಷ್ಯವನ್ನು ಹೇಗೆ ರೂಪಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಶ್ರೇಯಸ್ ಹೇಳಿದ್ದು ಯಾರ ಬಗ್ಗೆ?

ಸದ್ಯ ಶ್ರೇಯಸ್ ಐಯ್ಯರ್ ಅವರ ಈ ಹೇಳಿಕೆ ಭಾರೀ ಸಂಚಲನ ಸೃಷ್ಟಿಸಿದ್ದು, ಶ್ರೇಯಸ್ ಪರೋಕ್ಷವಾಗಿ ಈ ಕೌಂಟರ್ ಕೊಟ್ಟಿದ್ದು ಯಾರ ಬಗ್ಗೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ಆರಂಭಗೊಂಡಿವೆ. ಅದರಲ್ಲೂ ಬೇರೆಯವರಂತೆ ಎಂದು ಸ್ವತಃ ಶ್ರೇಯಸ್ ಉಲ್ಲೇಖಿಸಿರುವುದನ್ನು ನೋಡಿದರೆ ಅವರು ಯಾರನ್ನೋ ಗುರಿಯಾಗಿಸಿಕೊಂಡೇ ಈ ಹೇಳಿಕೆ ನೀಡಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿದುಬರುತ್ತದೆ ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!