LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಖಾತೆ ಹಂಚಿಕೆ ಬೆನ್ನಲ್ಲೇ ಬಿಗ್ ಟ್ವಿಸ್ಟ್: ನಗರಾಭಿವೃದ್ಧಿ ಖಾತೆ ಕ್ಯಾತೆ, ಮತ್ತೆ ಕಂದಾಯ ಇಲಾಖೆ ಕೇಳಿದ್ರಾ ಕೃಷ್ಣ ಭೈರೇಗೌಡ?ದೆಹಲಿ ಭೇಟಿಯ ಅಸಲಿ ರಹಸ್ಯ ಇಲ್ಲಿದೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹೈ-ವೋಲ್ಟೇಜ್ ಬೆಳವಣಿಗೆಯೊಂದು ನಡೆದಿದ್ದು, ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಖಾತೆ ಕ್ಯಾತೆ ಮುಗಿಯುವ ಲಕ್ಷಣಗಳೇ ಕಾಣಿಸುತ್ತಿಲ್ಲ ಹೈಕಮಾಂಡ್ ಸೂಚನೆಯಂತೆ ತಮಗೆ ಹಂಚಿಕೆಯಾಗಿರುವ ಬೆಂಗಳೂರು ನಗರಾಭಿವೃದ್ಧಿ ಖಾತೆಯ ಅಧಿಕಾರ ವ್ಯಾಪ್ತಿಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಸಚಿವ ಕೃಷ್ಣ ಬೈರೇಗೌಡ (Krishna Byre Gowda), ಹೈಕಮಾಂಡ್‌ನಿಂದ ಸ್ಪಷ್ಟತೆ ಸಿಗುವವರೆಗೂ ಅಧಿಕಾರ ಸ್ವೀಕಾರ ಮಾಡುವುದಿಲ್ಲ ಎಂದು ಜಿದ್ದಿಗೆ ಬಿದ್ದಿದ್ದಾರೆ. ಅಷ್ಟೇ ಅಲ್ಲದೆ, ತಡರಾತ್ರಿಯೇ ಶಾಸಕ ರಿಜ್ವಾನ್ ಅರ್ಷದ್ ಅವರೊಂದಿಗೆ ನವದೆಹಲಿಗೆ ದೌಡಾಯಿಸಿದ್ದಾರೆ

ಬೆಂಗಳೂರು ನಗರಾಭಿವೃದ್ಧಿ ಖಾತೆಯ ಮಹತ್ವದ ವಿಭಾಗಗಳೇ ಕೈತಪ್ಪಿರುವುದಕ್ಕೆ ಬೇಸತ್ತಿರುವ ಕೃಷ್ಣ ಬೈರೇಗೌಡ, ಈಗ ನೇರವಾಗಿ ದೆಹಲಿ ಅಂಗಳದಲ್ಲೇ ಸಚಿವ ಸ್ಥಾನದ ವ್ಯಾಪ್ತಿಯ ಹಕ್ಕು ಮಂಡಿಸಲು ಮುಂದಾಗಿದ್ದಾರೆ.

KBG ಅಸಮಾಧಾನಕ್ಕೆ ಅಸಲಿ ಕಾರಣವೇನು?

ಹೈಕಮಾಂಡ್ ಸೂಚನೆಯ ಮೇರೆಗೆ ಕೃಷ್ಣ ಬೈರೇಗೌಡ ಅವರಿಗೆ ಬೆಂಗಳೂರು ಅಭಿವೃದ್ಧಿ ಇಲಾಖೆಯ ಜವಾಬ್ದಾರಿಯನ್ನು ನೀಡಲಾಗಿತ್ತು ನಿಜ. ಆದರೆ, ಈ ಇಲಾಖೆಯ ಅಸಲಿ ಪವರ್ ಹಾಗೂ ಪ್ರಮುಖ ಅಂಗಗಳಾದ:

ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ – BDA)

ಬಿಎಂಆರ್‌ಡಿಎ (ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ – BMRDA)

ಸೇರಿದಂತೆ ಪ್ರಮುಖ ಹಾಗೂ ಆಯಕಟ್ಟಿನ ವಿಭಾಗಗಳನ್ನು ಕೃಷ್ಣ ಬೈರೇಗೌಡ ಅವರಿಗೆ ವಹಿಸಿಕೊಟ್ಟಿಲ್ಲ ಇಲಾಖೆಯ ಮೇನ್ ವಿಭಾಗಗಳೇ ಕೈತಪ್ಪಿ ಬರೀ ಅರ್ಧ ಖಾತೆ ಸಿಕ್ಕಿರುವುದರಿಂದ ಅಸಮಾಧಾನಗೊಂಡಿರುವ ಅವರು, ಈವರೆಗೆ ಬೆಂಗಳೂರು ಅಭಿವೃದ್ಧಿ ಸಚಿವ ಸ್ಥಾನದ ಜವಾಬ್ದಾರಿಯನ್ನು ಅಧಿಕೃತವಾಗಿ ವಹಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ.

ಪೂರ್ಣ ಖಾತೆ ಕೊಡಿ, ಇಲ್ಲ ಕಂದಾಯವೇ ಇರಲಿ

ಖಾತೆ ಹಂಚಿಕೆಯಾದ ಬೆನ್ನಲ್ಲೇ ಸಚಿವ ಕೃಷ್ಣ ಬೈರೇಗೌಡ ಅವರು ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ಖಾಸಗಿ ಹೋಟೆಲ್‌ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಮ್ಮುಖದಲ್ಲಿ ನಡೆದ ಹೈ-ಲೆವೆಲ್ ಮೀಟಿಂಗ್‌ನಲ್ಲೂ ಕೃಷ್ಣ ಬೈರೇಗೌಡ ತಮ್ಮ ಅಸಮಾಧಾನವನ್ನು ಬಹಿರಂಗವಾಗಿಯೇ ಹೊರಹಾಕಿದ್ದರು.

ಡಿಕೆಶಿಗೆ ನೀಡಿದಂತೆ ತಮಗೂ ಪೂರ್ಣ ಅಧಿಕಾರವಿರುವ ಖಾತೆ ನೀಡಬೇಕು ಎಂಬುದು ಕೆಬಿಜಿ ವಾದ. “ಕೊಡುವುದಾದ್ರೆ ಬಿಡಿಎ ಒಳಗೊಂಡ ಪೂರ್ಣ ಖಾತೆ ಕೊಡಿ, ಇಲ್ಲವಾದರೆ ನನ್ನ ಹಳೆಯ ಕಂದಾಯ ಇಲಾಖೆಯನ್ನೇ ಮುಂದುವರಿಸಿ” ಎಂದು ಹೈಕಮಾಂಡ್ ಮುಂದೆ ಪಟ್ಟು ಹಿಡಿಯಲು ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಭೇಟಿ

ಇಂದೇ ಎಐಸಿಸಿ (AICC) ವರಿಷ್ಠರನ್ನು ಭೇಟಿಯಾಗಲಿರುವ ಕೃಷ್ಣ ಬೈರೇಗೌಡ ಹಾಗೂ ರಿಜ್ವಾನ್ ಅರ್ಷದ್, ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾಗಿ ತಮಗಾಗಿರುವ ಅನ್ಯಾಯದ ಬಗ್ಗೆ ಮನವಿ ಸಲ್ಲಿಸಲಿದ್ದಾರೆ. ಸಚಿವರ ಈ ದಿಢೀರ್ ದೆಹಲಿ ದೌಡು ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೊಂದು ಸುತ್ತಿನ ಆಂತರಿಕ ಬೇಗುದಿಗೆ ಕಾರಣವಾಗಿದ್ದು, ಹೈಕಮಾಂಡ್ ಈ ‘ಖಾತೆ ಕ್ಯಾತೆ’ಯನ್ನು ಹೇಗೆ ತಣ್ಣಗಾಗಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ