LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ ; ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : 2026-27ನೇ ಸಾಲಿನ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಇಲಾಖಾ ವೆಬ್‍ಸೈಟ್ w.w.w.ssp.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳು ದಾಖಲಾತಿಗಳೊಂದಿಗೆ ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ (ಮೆಟ್ರಿಕ್ ಪೂರ್ವ ಆದಾಯ ಮಿತಿ 1 ರಿಂದ 8 ತರಗತಿಗೆ 6 ಲಕ್ಷ ಮತ್ತು 9 ರಿಂದ 10ನೇ ತರಗತಿಗೆ 2.50 ಲಕ್ಷ), ವಿದ್ಯಾರ್ಥಿಯ ಬ್ಯಾಂಕ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ (ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್‍ಪಿಸಿಐ ಮ್ಯಾಪಿಂಗ್ ಮಾಡಿಸಿರತಕ್ಕದು). ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ (ಕಡ್ಡಾಯ), ಇತ್ತೀಚಿನ ಭಾವಚಿತ್ರ, ತಂದೆ/ತಾಯಿ/ಪೆÇೀಷಕರ ಆಧಾರ್ ದಾಖಲಾತಿ ಪ್ರತಿ,

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಬೇಕಾದ ಇಲಾಖಾ ವೆಬ್‍ಸೈಟ್ w.w.w.ssp.karnataka.gov.in. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 080-44554455 ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ ಅವರ ಕಚೇರಿ ದೂ.ಸಂ. 9480843156, 08276-281115 ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

2026-27ನೇ ಸಾಲಿನ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ (ssp.postmatric karnataka.gov.in) ನಲ್ಲಿ ಅರ್ಜಿ ಸಲ್ಲಿಸಲು ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ದಾಖಲಾತಿಗಳೊಂದಿಗೆ ವೆಬ್‍ಸೈಟ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ (ಆದಾಯ ಮಿತಿ 2.50 ಲಕ್ಷ), ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಪ್ರತಿ (ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್‍ಪಿಸಿಐ ಮ್ಯಾಪಿಂಗ್ ಮಾಡಿಸಿರತಕ್ಕದು), ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ (ಕಡ್ಡಾಯ), ಹಿಂದಿನ ವರ್ಷದ ಮಾಕ್ರ್ಸ್ ಕಾರ್ಡ್ ಪ್ರತಿ, ಇತ್ತೀಚಿನ ಭಾವಚಿತ್ರ, ಅಧ್ಯಯನ/ಬೋನಾಫೈಡ್ ಪ್ರಮಾಣ ಪತ್ರ, (ಮೆಟ್ರಿಕ್ ನಂತರದ ಕೋರ್ಸ್‍ಗಳಿಗೆ), ಶುಲ್ಕ ರಶೀದಿ(ಮೆಟ್ರಿಕ್ ನಂತರದ ಕೋರ್ಸ್‍ಗಳಿಗೆ), ತಂದೆ/ತಾಯಿ/ಪೆÇೀಷಕರ ಆಧಾರ್ ಪ್ರತಿ, ಆದಾಯ ಮಿತಿ 2.50 ಲಕ್ಷಕ್ಕಿಂತ ಒಳಗಿರುವ ಸಿಇಟಿ ಮೂಲಕ ಎಂಬಿಬಿಎಸ್, ಬಿಡಿಎಸ್, ಬಿಇ, ಬಿಟೆಕ್, ಬಿ.ಆರ್‍ಕೆ ಕೋರ್ಸ್‍ಗಳಿಗೆ ಆಯ್ಕೆಯಾಗುವ ವಿದ್ಯಾರ್ಥಿಗಳು ಮಾತ್ರ ಸರ್ಕಾರಿ, ಅನುದಾನಿತ, ಅನುದಾನರಹಿತ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾನಿಲಯದ ಕಾಲೇಜು/ಸಂಸ್ಥೆಗಳಲ್ಲಿ ಪ್ರವೇಶ ಪಡೆದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಶೇ.100 ರಷ್ಟು ಆಯಾಯ ಸಂಸ್ಥೆಗಳಿಗೆ ನಿಗದಿಪಡಿಸಿದ ಶುಲ್ಕ ಪಡೆಯಲು ಅರ್ಹರಿರುತ್ತಾರೆ.

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ (ssp.postmatric.karnataka.gov.in). ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 080-44554455 ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆರವರ ಕಚೇರಿ ದೂರವಾಣಿ 9480843156, 08276-281115 ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!