LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಸಭೆಗೆ ಬಿಜೆಪಿ ಪರಿಗಣಿಸದ ಬಗ್ಗೆ ರಾಜಕೀಯದಲ್ಲಿ ಭಾರಿ ಚರ್ಚೆ: ವದಂತಿಗಳಿಗೆ ತೆರೆ ಎಳೆಯಲು ಇಂದು ದೇವೇಗೌಡರಿಂದ ಮಹತ್ವದ ಸುದ್ದಿಗೋಷ್ಠಿ

ಬೆಂಗಳೂರು: ರಾಜ್ಯಸಭೆಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಹೆಸರನ್ನು ಮೈತ್ರಿ ಪಕ್ಷ ಬಿಜೆಪಿ ಪರಿಗಣಿಸದ ಬಗ್ಗೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದೇ ವೇಳೆ ಇಂದು ದೇವೇಗೌಡರು ಪತ್ರಿಕಾಗೋಷ್ಠಿ ಕರೆದಿರುವುದು ಕುತೂಹಲ ಮೂಡಿಸಿದೆ.

ಬೆಳಿಗ್ಗೆ 11:30ಕ್ಕೆ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ದೇವೇಗೌಡರು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ರಾಜ್ಯಸಭೆಗೆ ತಮ್ಮನ್ನು ಪರಿಗಣಿಸದಿರುವ ಕುರಿತು ಕೇಳಿ ಬರುತ್ತಿರುವ ವದಂತಿ ಮತ್ತು ಊಹಾಪೋಹಗಳಿಗೆ ತೆರೆ ಎಳೆಯುವ ಸಾಧ್ಯತೆ ಇದೆ.

ರಾಜ್ಯಸಭೆಗೆ ದೇವೇಗೌಡರ ಹೆಸರನ್ನು ಪರಿಗಣಿಸದಿರುವ ಬಗ್ಗೆ ಕಾಂಗ್ರೆಸ್ ನಾಯಕರು ಬಿಜೆಪಿಯನ್ನು ಟೀಕಿಸಿ ದೇವೇಗೌಡರ ಬಗ್ಗೆ ಕಾಳಜಿಯ ಮಾತುಗಳನ್ನು ಆಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೇವೇಗೌಡರು ಸುದ್ದಿಗೋಷ್ಠಿಯಲ್ಲಿ ಎಲ್ಲಾ ವಿಚಾರಗಳಿಗೆ ಉತ್ತರಿಸಿ ಗೊಂದಲಕ್ಕೆ ತೆರೆಯಲಿದ್ದಾರೆ.

ರಾಜ್ಯಸಭೆಗೆ ಸ್ಪರ್ಧಿಸಲು ಜೆಡಿಎಸ್ ಬಳಿ ಸಂಖ್ಯಾಬಲವಿಲ್ಲ. ಮೈತ್ರಿ ಪಕ್ಷ ಬಿಜೆಪಿಗೆ ಒಂದು ಸ್ಥಾನ ಗೆಲ್ಲಲು ಅಗತ್ಯವಿರುವ ಮತಗಳಿವೆ. ಅಂತೆಯೇ ಅವರು ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದಾರೆ. ರಾಜ್ಯಸಭೆ ಸದಸ್ಯ ಸ್ಥಾನ ಬಿಟ್ಟು ಕೊಡುವಂತೆ ಮೈತ್ರಿ ಪಕ್ಷ ಬಿಜೆಪಿಯನ್ನು ಜೆಡಿಎಸ್ ಕೇಳಿಲ್ಲ. ಹೀಗಾಗಿ ತಮಗೆ ಅನ್ಯಾಯವಾಗಿಲ್ಲ. ಪ್ರಧಾನಿ ಮೋದಿಯವರೊಂದಿಗೆ ಉತ್ತಮ ಬಾಂಧವ್ಯವಿದೆ. ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲವೆಂದು ದೇವೇಗೌಡರು ಸ್ಪಷ್ಟಪಡಿಸುವ ಸಾಧ್ಯತೆ ಇದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!