LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರ ಬದಲಾವಣೆ: ಪರ್ಯಾಯ ಮಾರ್ಗದ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ದಲಿತ ಸಂಘಟನೆಗಳ ಸಮಿತಿಯಿಂದ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಪ್ರಮುಖ ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.

ಫ್ರೀಡಂ ಪಾರ್ಕ್‌ನಲ್ಲಿ ಇಂದು ಕರ್ನಾಟಕ ದಲಿತ ಸಂಘಟನೆಗಳ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತಿಭಟನೆ ನಡೆಯಲಿದ್ದು, ಸುಗಮ ವಾಹನ ಸಂಚಾರಕ್ಕಾಗಿ ಬೆಂಗಳೂರು ಸಂಚಾರ ಪೊಲೀಸರು ತಾತ್ಕಾಲಿಕ ಸಂಚಾರ ನಿರ್ಬಂಧ ಹಾಗೂ ಸಂಚಾರಕ್ಕೆ ಪರ್ಯಾಯ ಮಾರ್ಗಗಳಳನ್ನು ಸೂಚಿಸಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ

ಪ್ರತಿಭಟನೆಯಲ್ಲಿ ಭಾಗವಹಿಸುವ ಸಾರ್ವಜನಿಕರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ಸಿಟಿ ರೈಲ್ವೆ ನಿಲ್ದಾಣದಿಂದ ಫ್ಲೈಓವರ್ ರಸ್ತೆಯ ಮೂಲಕ ಫ್ರೀಡಂ ಪಾರ್ಕ್ ಕಡೆಗೆ ಕಾಲ್ನಡಿಗೆಯಲ್ಲಿ ಮೆರವಣಿಗೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಖೋಡೆ ಜಂಕ್ಷನ್‌ನಿಂದ ಕೆಆರ್ ಸರ್ಕಲ್ ಕಡೆಗೆ ಸಂಚರಿಸುವ ವಾಹನ ಸವಾರರು ಸಂಚಾರ ದಟ್ಟಣೆಯನ್ನು ತಪ್ಪಿಸಲು ಹಳೇ ಜೆಡಿಎಸ್ ಕಚೇರಿ ರಸ್ತೆಯನ್ನು ಬಳಸುವಂತೆ ಸೂಚಿಸಲಾಗಿದೆ.

ಮೈಸೂರು ಬ್ಯಾಂಕ್ ವೃತ್ತದಿಂದ ಕೆ.ಜಿ. ರಸ್ತೆ ಮೂಲಕ ಫ್ರೀಡಂ ಪಾರ್ಕ್ ಕಡೆಗೆ ಬರುವ ವಾಹನಗಳು ಕಡ್ಡಾಯವಾಗಿ ಬಲತಿರುವು ಪಡೆದು, ಮಹಾರಾಣಿ ಅಂಡರ್‌ಪಾಸ್ ರಸ್ತೆ ಹಾಗೂ ಪ್ಯಾಲೇಸ್ ಕ್ರಾಸ್ ರಸ್ತೆ ಮೂಲಕ ಮುಂದೆ ಸಾಗಬೇಕು ಎಂದು ತಿಳಿಸಲಾಗಿದೆ.

ಪ್ರತಿಭಟನೆಯ ತೀವ್ರತೆಯ ಕಾರಣದಿಂದಾಗಿ ಫ್ರೀಡಂ ಪಾರ್ಕ್ ಜಂಕ್ಷನ್‌ನಿಂದ ಕನಕದಾಸ ವೃತ್ತದ ನಡುವಿನ ರಸ್ತೆಯಲ್ಲಿ ಎರಡೂ ಕಡೆಯಿಂದಲೂ ಎಲ್ಲಾ ಮಾದರಿಯ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇನ್ನು ಗಾಂಧಿನಗರದ ಕಡೆಗೆ ತೆರಳುವ ಸವಾರರ ಅನುಕೂಲಕ್ಕಾಗಿ, ಸಾಮಾನ್ಯವಾಗಿ ಒನ್‌ವೇ (ಏಕಮುಖ ಸಂಚಾರ) ಆಗಿರುತ್ತಿದ್ದ ಸುಬ್ಬಣ್ಣ ಜಂಕ್ಷನ್‌ನಿಂದ ಎಂಟಿಆರ್ ಜಂಕ್ಷನ್ ವರೆಗಿನ ರಸ್ತೆಯನ್ನು ಇಂದು ತಾತ್ಕಾಲಿಕವಾಗಿ ಟೂ-ವೇ ಮಾರ್ಗವಾಗಿ ಪರಿವರ್ತಿಸಲಾಗಿದೆ.

ಸಂಚಾರಕ್ಕೆ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ವಹಿಸಿರುವ ಪೊಲೀಸರು, ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿ ವಾಹನ ನಿಲ್ಲಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದ್ದಾರೆ. ಖೋಡೆ ಜಂಕ್ಷನ್‌ನಿಂದ ಮಹಾರಾಣಿ ಜಂಕ್ಷನ್‌ವರೆಗೆ, ವಿ. ರಾಮಚಂದ್ರ ರಸ್ತೆ, ಕಾಳಿದಾಸ ರಸ್ತೆ, ಪ್ಯಾಲೇಸ್ ರಸ್ತೆ ಹಾಗೂ ಕೆ.ಜಿ. ರಸ್ತೆಯಲ್ಲಿ ಯಾವುದೇ ರೀತಿಯ ವಾಹನಗಳ ಪಾರ್ಕಿಂಗ್ ಮಾಡುವಂತಿಲ್ಲ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶ