LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶವಗಳ ಖಾಸಗಿ ಅಂಗಗಳ ಬಗ್ಗೆ ಪೋಲಿ ಜೋಕ್ ಮಾಡಿ ನಕ್ಕು ಪಜೀತಿಗೆ ಸಿಲುಕಿದ ವೈದ್ಯೆ!

ಕಾಮಿಡಿ ಶೋ ಒಂದರಲ್ಲಿ ಮೃತದೇಹಗಳ ಖಾಸಗಿ ಅಂಗಗಳ ಬಗ್ಗೆ ವಿವಾದಾತ್ಮಕ ಕಾಮೆಂಟ್ ಮಾಡಿ ಭಾರಿ ಆಕ್ರೋಶಕ್ಕೆ ಈಡಾಗಿದ್ದ ಮುಂಬೈ ಕೆಇಎಂ ಆಸ್ಪತ್ರೆಯ ವೈದ್ಯೆ ಸೇಜಲ್ ಪವಾರ್ ಕೊನೆಗೂ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ನಾನು ನನ್ನ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಹಾಸ್ಯನಟ ಪ್ರಣೀತ್ ಮೋರೆ ಅವರ ಸ್ಟ್ಯಾಂಡ್ ಅಪ್ ಕಾಮಿಡಿ ಶೋ ವೇಳೆ ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ಸೇಜಲ್ ಪವಾರ್ ಅವರೊಂದಿಗೆ ಸಂವಾದ ನಡೆದಿತ್ತು. ಈ ವೇಳೆ ವೈದ್ಯಕೀಯ ಶಿಕ್ಷಣದ ಸಂದರ್ಭದಲ್ಲಿ ಬಳಸಲಾಗುವ ಶವಗಳ ಅಂಗರಚನಾ ಶಾಸ್ತ್ರದ ಅಧ್ಯಯನ ನೆನಪಿಸಿಕೊಂಡಿದ್ದ ಅವರು, ತಾವು ಮತ್ತು ತಮ್ಮ ಸಹೋದ್ಯೋಗಿಗಳು ಪುರುಷ ಶವಗಳ ಖಾಸಗಿ ಅಂಗಗಳ ಗಾತ್ರವನ್ನು ಹೋಲಿಕೆ ಮಾಡುತ್ತಿದ್ದೆವು ಎಂದು ಹಾಸ್ಯ ಮಾಡಿದ್ದರು. ಶವಪರೀಕ್ಷೆ ಮತ್ತು ಮೃತದೇಹಗಳೊಂದಿಗೆ ಕೆಲಸ ಮಾಡುವಾಗ ವೈದ್ಯರು ಗಂಭೀರವಾಗಿರುತ್ತಾರಾ ಅಥವಾ ಜೋಕ್ ಮಾಡುತ್ತಾರಾ ಎಂಬ ಹಾಸ್ಯನಟನ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದ್ದರು.

ಇದರ ವಿಡಿಯೋ ತುಣುಕುಗಳು ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ವೈದ್ಯಕೀಯ ವಲಯ ಮತ್ತು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ವೈದ್ಯಕೀಯ ಸಂಶೋಧನೆ ಮತ್ತು ಶಿಕ್ಷಣಕ್ಕಾಗಿ ಜನರು ತಮ್ಮ ದೇಹವನ್ನು ದಾನ ಮಾಡುತ್ತಾರೆ. ಅಂತಹ ಶವಗಳಿಗೆ ಕನಿಷ್ಠ ಗೌರವ ನೀಡದೇ ಈ ರೀತಿ ಸಾರ್ವಜನಿಕವಾಗಿ ಅವಹೇಳನ ಮಾಡುವುದು ವೈದ್ಯಕೀಯ ನೈತಿಕತೆಗೆ ವಿರುದ್ಧವಾದುದು ಎಂದು ಹಲವು ವೈದ್ಯರು ಮತ್ತು ವಿದ್ಯಾರ್ಥಿಗಳು ಕಿಡಿಕಾರಿದ್ದರು. ಇಂತಹ ಬೇಜವಾಬ್ದಾರಿ ಹೇಳಿಕೆಗಳು ಅಂಗಾಂಗ ಮತ್ತು ದೇಹ ದಾನ ಮಾಡುವ ಸಾರ್ವಜನಿಕರ ನಂಬಿಕೆಯನ್ನು ಹುಸಿಗೊಳಿಸುತ್ತವೆ ಎಂಬ ಆತಂಕವೂ ವ್ಯಕ್ತವಾಗಿತ್ತು.

ವಿವಾದ ತಾರಕಕ್ಕೇರುತ್ತಿದ್ದಂತೆ ಎಚ್ಚೆತ್ತುಕೊಂಡ ವೈದ್ಯೆ ಸೇಜಲ್ ಪವಾರ್, ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಸ್ಪಷ್ಟನೆ ನೀಡಿ ಕ್ಷಮೆ ಕೇಳಿದ್ದಾರೆ. ವಿಡಿಯೋವನ್ನು ಮತ್ತೊಮ್ಮೆ ನೋಡಿದಾಗ ಜನರು ಯಾಕೆ ಕೋಪಗೊಂಡಿದ್ದಾರೆ ಎಂಬುದು ನನಗೆ ಅರ್ಥವಾಯಿತು. ವಿಷಯವು ಅತ್ಯಂತ ಸೂಕ್ಷ್ಮವಾಗಿದ್ದು, ನನ್ನ ಮಾತುಗಳು ತಪ್ಪು ಸಂದೇಶ ರವಾನಿಸಿವೆ. ಯಾರಿಗೂ ಅಗೌರವ ತೋರುವ ಉದ್ದೇಶ ನನಗಿರಲಿಲ್ಲ. ಆದರೂ ನನ್ನ ಮಾತುಗಳಿಂದ ಉಂಟಾದ ಪರಿಣಾಮಕ್ಕೆ ನಾನು ಹೊಣೆಯಾಗುತ್ತೇನೆ. ಇದನ್ನು ಒಂದು ಪಾಠವಾಗಿ ಸ್ವೀಕರಿಸಿದ್ದು, ಇದರಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.

ಇದೇ ವೇಳೆ, ಇತ್ತೀಚೆಗೆ ಹಿಮಾಂಶು ಜಾಗ್ರಾ ಎಂಬುವವರು ಡೇಟಿಂಗ್ ವಿಚಾರವಾಗಿ ಮಾಡಿದ್ದ ಮಹಿಳಾ ವಿರೋಧಿ ಕಾಮೆಂಟ್ ಗೂ ಮತ್ತು ಈ ಘಟನೆಗೂ ಸಾಮಾಜಿಕ ಜಾಲತಾಣಗಳಲ್ಲಿ ಹೋಲಿಕೆ ಮಾಡಲಾಗುತ್ತಿದ್ದು, ಲಿಂಗಭೇದವಿಲ್ಲದೆ ತಪ್ಪು ಮಾಡಿದಾಗ ಜವಾಬ್ದಾರಿ ಮತ್ತು ನೈತಿಕತೆ ಎಲ್ಲರಿಗೂ ಒಂದೇ ಆಗಿರಬೇಕು ಎಂಬ ಚರ್ಚೆಗಳು ಆರಂಭವಾಗಿವೆ. ಇನ್ನು ವಿವಾದಕ್ಕೆ ಕಾರಣವಾದ ವಿಡಿಯೋ ಕ್ಲಿಪ್‌ಗಳನ್ನು ಹಂಚಿಕೊಂಡಿದ್ದ ಹಾಸ್ಯನಟ ಪ್ರಣೀತ್ ಮೋರೆ ಕೂಡ ಸಾರ್ವಜನಿಕರ ಆಕ್ರೋಶಕ್ಕೆ ಹೆದರಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯನ್ನು ತಾತ್ಕಾಲಿಕವಾಗಿ ನಿಷ್ಕ್ರಿಯಗೊಳಿಸಿದ್ದಾರೆ ಎನ್ನಲಾಗಿದೆ.

ಒಟ್ಟಾರೆಯಾಗಿ, ಕಾಮಿಡಿ ಶೋ ನೆಪದಲ್ಲಿ ಆರಂಭವಾದ ಈ ಘಟನೆಯು ಈಗ ವೈದ್ಯಕೀಯ ವೃತ್ತಿಪರ ನೈತಿಕತೆ, ದೇಹ ದಾನಿಗಳ ಮೇಲಿನ ಗೌರವ ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಹಾಸ್ಯದ ಮಿತಿಗಳ ಬಗ್ಗೆ ದೇಶಾದ್ಯಂತ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟುಹಾಕಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶ