LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

ನವದೆಹಲಿ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರ ನಡುವಿನ ಜಗಳಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಮಹತ್ವದ ಸಲಹೆ ನೀಡಿದೆ.

ಇಬ್ಬರೂ ತಮ್ಮ ನಡುವಿನ ವಿವಾದವನ್ನು ಸಂಧಾನದ ಮೂಲಕ ಬಗೆಹರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಡಿ. ರೂಪಾ ತಮ್ಮ ವಿರುದ್ಧ ಮಾಡಿರುವ ಮಾನನಷ್ಟ ಮೊಕದ್ದಮೆ ವಿಚಾರಣೆಯನ್ನು ಎದುರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿಯವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಶುಕ್ರವಾರ ನ್ಯಾಯಮೂರ್ತಿ ಸತೀಶ್ ಚಂದ್ರಶರ್ಮಾ ಮತ್ತು ನ್ಯಾಯಮೂರ್ತಿ ಸಂಜೀವ್ ಸಚ್ ದೇವ್ ಅವರಿದ್ದ ಪೀಠದಲ್ಲಿ ನಡೆದಿದೆ.

ಅಧಿಕಾರಿಗಳ ನಡುವಿನ ಸುಧೀರ್ಘ ಜಗಳದ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಇಬ್ಬರು ಅತ್ಯುತ್ತಮ ಅಧಿಕಾರಿಗಳಾಗಿದ್ದಾರೆ. ಆದರೆ ಈ ರೀತಿ ನ್ಯಾಯಾಲಯದ ಮೆಟ್ಟಿಲೇರಿ ಜಗಳ ಮಾಡುವ ಮೂಲಕ ಪರಸ್ಪರ ತಮ್ಮ ವೃತ್ತಿ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಈ ಪ್ರಕರಣವನ್ನು ಸಂಧಾನದ ಮೂಲಕ ಬಗೆಹರಿಸಿಕೊಳ್ಳಬೇಕು. ಎಂದು ಅಭಿಪ್ರಾಯಪಟ್ಟಿದೆ.

ಇಬ್ಬರು ಅಧಿಕಾರಿಗಳ ನಡುವಿನ ದೀರ್ಘಕಾಲದ ಕಾನೂನು ಸಮರಕ್ಕೆ ಸುಪ್ರೀಂ ಕೋರ್ಟ್ ಸಂಧಾನದ ಹಾದಿ ತೋರಿಸಿದೆ. ಪ್ರಕರಣವನ್ನು ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಗೆ ವಹಿಸಿದ್ದು, ನಿವೃತ್ತ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಅವರನ್ನು ಸಂಧಾನಕಾರರನ್ನಾಗಿ ನೇಮಕ ಮಾಡಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?