LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದ ಮತ್ತೊಂದು ಅವಾಂತರ: ಏರ್ ಪೋರ್ಟ್ ರಸ್ತೆಯಲ್ಲಿ ಕಾರ್ ರೇಸಿಂಗ್ ಮಾಡಿ ಪುಂಡಾಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳುರಿನ ರಸ್ತೆಗಳಲ್ಲಿ ಮಾಜಿ ಡಾನ್ ದಿ.ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮತ್ತೆ ಐಷಾರಾಮಿ ಲ್ಯಾಂಬೋರ್ಗಿನಿ ಕಾರ್ ರೇಸ್ ಮಾಡಿ ಪುಂಡಾಟ ಮೆರೆದಿದ್ದಾರೆ.

ರಿಕ್ಕಿ ರೈ ಒಡೆತನದ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಏರ್ ಪೋರ್ಟ್ ರಸ್ತೆಯಲ್ಲಿ ಭಾರಿ ಸದ್ದು ಮಾಡಿದೆ. ಕೆಲವು ತಿಂಗಳುಗಳ ಹಿಂದಷ್ಟೇ ನಗರದ ಹೃದಯಭಾಗದಲ್ಲಿ ರೇಸಿಂಗ್ ಸ್ಟಂಟ್ (ಡ್ರಿಫ್ಟಿಂಗ್) ಮಾಡಿ ಸಿಕ್ಕಿಬಿದ್ದಿದ್ದ ಇದೇ ಕಾರು, ಇದೀಗ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಅತಿವೇಗದ ಚಾಲನೆ ಮತ್ತು ಕರ್ಕಶ ಶಬ್ದದ ಮೂಲಕ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿ ಮತ್ತೊಂದು ವಿವಾದವನ್ನು ಸೃಷ್ಟಿಸಿದೆ.

ರಿಕ್ಕಿ ರೈ ಅವರಿಗೆ ಸೇರಿದ KA 05 NR 0009 ನೋಂದಣಿ ಸಂಖ್ಯೆಯ ಲ್ಯಾಂಬೋರ್ಗಿನಿ ಕಾರನ್ನು ಏರ್ಪೋರ್ಟ್ ರಸ್ತೆಯಲ್ಲಿ ಅತ್ಯಂತ ಅಪಾಯಕಾರಿ ಹಾಗೂ ಅತಿ ವೇಗವಾಗಿ ಚಾಲನೆ ಮಾಡಲಾಗಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿ ಕಾರಿನ ಸೈಲೆನ್ಸರ್ ಅನ್ನು ಮಾಡಿಫೈ ಮಾಡಿರುವುದು ಸ್ಪಷ್ಟವಾಗಿ ಕಾಣಿಸುತ್ತಿದ್ದು, ಕಾರು ವೇಗವಾಗಿ ಚಲಿಸುವಾಗ ಸೈಲೆನ್ಸರ್‌ನಿಂದ ಕರ್ಕಶ ಶಬ್ದದೊಂದಿಗೆ ಬೆಂಕಿ ಉಗುಳುವ ದೃಶ್ಯಗಳು ಸೆರೆಯಾಗಿವೆ. ಈ ಪುಂಡಾಟದ ವೀಡಿಯೋ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವೀಡಿಯೋವನ್ನು ಆಧರಿಸಿ ಸಂಚಾರಿ ಪೊಲೀಸರು ಮತ್ತು ಕಾನೂನು ಸುವ್ಯವಸ್ಥೆ ಪೊಲೀಸರು ಜಂಟಿ ಪರಿಶೀಲನೆಗೆ ಮುಂದಾಗಿದ್ದಾರೆ. ಈ ಘಟನೆ ನಿಖರವಾಗಿ ಯಾವಾಗ ನಡೆದಿದೆ? ಆ ಸಮಯದಲ್ಲಿ ಕಾರಿನೊಳಗೆ ಯಾರ್ಯಾರು ಇದ್ದರು? ಕಾರನ್ನು ಸ್ವತಃ ರಿಕ್ಕಿ ರೈ ಚಲಾಯಿಸುತ್ತಿದ್ದರೇ ಅಥವಾ ಅವರ ಡ್ರೈವರ್ ಚಲಾಯಿಸುತ್ತಿದ್ದರೇ? ಎಂಬಿತ್ಯಾದಿ ಮಾಹಿತಿಗಳನ್ನು ಕಲೆಹಾಕಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಪ್ರಾಥಮಿಕ ತನಿಖೆ ನಡೆಸಿ, ಶೀಘ್ರದಲ್ಲೇ ಅತಿವೇಗದ ಚಾಲನೆ ಹಾಗೂ ಸೈಲೆನ್ಸರ್ ಮಾರ್ಪಾಡು ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕಠಿಣ ಕ್ರಮ ಕೈಗೊಳ್ಳಲು ಸಾರಿಗೆ ಮತ್ತು ಪೊಲೀಸ್ ಅಧಿಕಾರಿಗಳು ನಿರ್ಧರಿಸಿದ್ದಾರೆ.

ಇದೇ ಕಾರು ಮಾರ್ಚ್ 21 ರಂದು ಬೆಂಗಳೂರಿನ ಕುಂಬ್ಳೆ ಸರ್ಕಲ್ ಹಾಗೂ ಕಬ್ಬನ್ ರಸ್ತೆಯಲ್ಲಿ ಅಪಾಯಕಾರಿ ರೀತಿಯಲ್ಲಿ ಕಾರ್ ಡ್ರೈವಿಂಗ್ ಮಾಡಿ ‘ಡ್ರಿಫ್ಟಿಂಗ್’ ಪ್ರಕರಣದಲ್ಲಿ ಸಿಲುಕಿತ್ತು. ಘಟನೆ ನಡೆದ ಆರಂಭದಲ್ಲಿ ಅಲ್ಲಿ ಇದ್ದದ್ದು ನಾನಲ್ಲ ಎಂದು ರಿಕ್ಕಿ ರೈ ವಾದಿಸಿದ್ದರು. ಆದರೆ ಕಬ್ಬನ್ ಪಾರ್ಕ್ ಪೊಲೀಸರು ಸಿಸಿಟಿವಿ ಪರಿಶೀಲಿಸಿದಾಗ ರಿಕ್ಕಿ ರೈ ಅವರೇ ಕಾರು ಓಡಿಸುತ್ತಿರುವುದು ಪತ್ತೆಯಾಗಿ ಎಫ್‌ಐಆರ್ ದಾಖಲಾಗಿತ್ತು.

ಆ ಸಮಯದಲ್ಲಿ ರಿಕ್ಕಿ ರೈ ಪರ ವಕೀಲರು, ರಸ್ತೆ ಸರಿಯಿರಲಿಲ್ಲ, ಹಾಗಾಗಿ ಕಾರು ಸ್ಕಿಡ್ ಆಗಿದೆ. ಈ ವೇಳೆ ನಮ್ಮ ಕಕ್ಷಿದಾರರು ತಮ್ಮ ಚಾಲನಾ ನೈಪುಣ್ಯತೆ ಮೆರೆದು ಅಪಘಾತ ತಪ್ಪಿಸಿದ್ದಾರೆ ಎಂದು ಕೋರ್ಟ್‌ನಲ್ಲಿ ವಾದಿಸಿದ್ದು ಭಾರಿ ಅಪಹಾಸ್ಯ ಹಾಗೂ ಟ್ರೋಲ್‌ಗೆ ಒಳಗಾಗಿತ್ತು. ನಂತರ ತಪ್ಪು ಒಪ್ಪಿಕೊಂಡು ಕೋರ್ಟ್ ಮುಂದೆ ದಂಡ ಕಟ್ಟಿದ್ದ ರಿಕ್ಕಿ ರೈ, ಈಗ ಮತ್ತೊಮ್ಮೆ ಅದೇ ಕಾರಿನೊಂದಿಗೆ ಸಂಚಾರ ನಿಯಮ ಉಲ್ಲಂಘಿಸಿ ಪುಂಡಾಟ ಮೆರೆದಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶ