ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಅಯ್ಯಪ್ಪಸ್ವಾಮಿ ಮಾಲೆ ಧರಿಸಿದ್ದು, ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.
ಇಂದು ಸೋಮವಾರ ಮುಂಜಾನೆ ಕೇರಳದ ಕೊಚ್ಚಿಯ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಪವಿತ್ರ ಮಾಲೆ ಧರಿಸುವ ಮೂಲಕ ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ತಲೆಮೇಲೆ ಇರುಮುಡಿ ಹೊತ್ತು ಕುಮಾರಸ್ವಾಮಿ ಅಯ್ಯಪ್ಪ ದರ್ಶನಕ್ಕೆ ತೆರಳಿದ್ದು, ಇಂದು ರಾತ್ರಿ 8 ಗಂಟೆಗೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಬಳಿಕ ಸುಮಾರು ಎರಡು ಗಂಟೆಗಳ ಕಾಲ ಪಡಿಪೂಜೆ ಸೇರಿ ವಿಶೇಷ ಪೂಜೆ ಸಲ್ಲಿಕೆ ಮಾಡಲಿದ್ದಾರೆ
ಕುಮಾರಸ್ವಾಮಿಯವರ ಜೊತೆಗೆ ಮಾಜಿ ಸಚಿವ ಸಾ.ರಾ. ಮಹೇಶ್, ಸಿ.ಎಸ್ ಪುಟ್ಟರಾಜು, ಜೆಡಿಎಲ್ ಪಿ ನಾಯಕ ಸುರೇಶ್ ಬಾಬು, ಎಂಎಲ್ ಸಿ ಭೋಜೇಗೌಡ ಸೇರಿ 30 ಜನ ಭಕ್ತರ ತಂಡ ಶಬರಿಮಲೆಗೆ ತೆರಳಿದೆ ಎಂದು ತಿಳಿದುಬಂದಿದೆ.