LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು, ಪ್ರೀತಿಯಿಂದ ಕೊಟ್ಟಿರುವ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟೋಕ್ತಿ

ಬೆಂಗಳೂರು: ಆದಾಯ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು, ನಮ್ಮ ಸರ್ಕಾರ ಪ್ರೀತಿಯಿಂದ ಕೊಟ್ಟಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಪ್ರಚಾರ ಮಾಡುತ್ತಿವ ವಿಚಾರವಾಗಿ , ವಿಪಕ್ಷಗಳಿರುವುದೇ ಟೀಕೆ ಮಾಡಲು. ನಾವು ಏನೇ ಒಳ್ಳೆಯದು ಮಾಡಲು ಮುಂದಾದರೂ ಅದಕ್ಕೆ ಅಡ್ಡಗಾಲು ಹಾಕುವುದಕ್ಕೆ ವಿರೋಧ ಪಕ್ಷಗಳಿರುವುದು. ಅವರ ಕೈಯಲ್ಲಿ ಆಗದಿದ್ದ ಕೆಲಸ ನಾವು ಮಾಡುತ್ತಿದ್ದೇವೆ. ಗ್ಯಾರಂಟಿ ಯೋಜನೆ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಲು ಸರ್ಕಾರ ಮುಂದಾಗಿದೆ. ಆರಂಭದಲ್ಲಿ ಕೆಲವು ಫಲಾನುಭವಿಗಳು ಬೇರೆಯವರ ದೂರವಾಣಿ ಸಂಖ್ಯೆ ಹಾಗೂ ಇತರೆ ಮಾಹಿತಿ ನೀಡಿದ್ದಾರೆ. ಬೇರೆಯವರ ಖಾತೆಗೆ ಹಣ ಹೋಗುತ್ತಿರುವ ಬಗ್ಗೆ ನಮಗೆ ಮಾಹಿತಿ ಇದೆ. ಫಲಾನುಭವಿಗಳ ಖಾತೆಗೆ ಹಣ ಹೋಗುವಂತೆ ಮಾಡುವುದು ಸರ್ಕಾರದ ಉದ್ದೇಶ ಎಂದು ತಿಳಿಸಿದರು.

ಸರ್ಕಾರವು ಕರ್ನಾಟಕದವರಿಗೆ ಈ ಯೋಜನೆ ನೀಡುತ್ತಿದ್ದು, ಅನ್ಯ ರಾಜ್ಯದವರಿಗೆ ಈ ಯೋಜನೆ ನೀಡುವುದಿಲ್ಲ. ಉಚಿತ ವಿದ್ಯುತ್ ಅನ್ನು ನಮ್ಮ ರಾಜ್ಯದ ಮತದಾರರಿಗೆ ನೀಡಬೇಕೇ ಹೊರತು, ಬೇರೆ ರಾಜ್ಯದವರಿಗೆ ಯಾಕೆ ಕೊಡಬೇಕು? ಹೀಗಾಗಿ ಫಲಾನುಭವಿಗಳಿಗೆ ಗುರುತಿನ ಚೀಟಿ ನೀಡಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದ್ದೇವೆ. ಆ ಪ್ರಕ್ರಿಯೆ ನಡೆಯುತ್ತಿದೆ. ಯೋಜನೆ ನಿಲ್ಲಿಸುವುದು ನಮ್ಮ ಉದ್ದೇಶವಲ್ಲ. ನಮ್ಮ ಗ್ಯಾರಂಟಿ ದೇಶಕ್ಕೆ ಮಾದರಿ. ಮಹಾರಾಷ್ಟ್ರ, ಮಧ್ಯಪ್ರದೇಶ, ಆಂಧ್ರಪ್ರದೇಶ ಸೇರಿದಂತೆ ಬೇರೆ ರಾಜ್ಯಗಳು ನಮ್ಮ ಮಾದರಿ ಅನುಸರಿಸಿವೆ ಎಂದು ತಿಳಿಸಿದರು.

ಯೋಜನೆ ಹಣ ನಕಲಿ ಫೈನಾನ್ಸ್ ಯೋಜನೆಗಳಿಗೆ ಬಳಕೆಯಾಗದಂತೆ ನೋಡಿಕೊಳ್ಳುತ್ತೇವೆ

ಕೆಲವರು ಗೃಹಲಕ್ಷ್ಮಿ ಹಣವನ್ನು ನಕಲಿ ಫೈನಾನ್ಸ್ ವ್ಯವಹಾರಕ್ಕೆ ಬಳಸುತ್ತಿದ್ದಾರೆ. ಬೆಳಗಾವಿಯ ಪ್ರಕರಣವನ್ನು ನೋಡಿದ್ದೇವಲ್ಲ. ಇದಕ್ಕಾಗಿ ಗ್ರಾಮ ಪಂಚಾಯ್ತಿಯಿಂದ ತಾಲ್ಲೂಕು ಪಂಚಾಯ್ತಿವರೆಗೆ ಎಲ್ಲೆಲ್ಲಿ ಇಂತಹ ಸ್ಕೀಂಗಳಿವೆ ಅವುಗಳಿಗೆ ಕಡಿವಾಣ ಹಾಕಲು ನಾವು ನಿರ್ದೇಶನ ನೀಡಿದ್ದೇವೆ. ನಮ್ಮ ಹೃದಯದಿಂದ ಕೊಟ್ಟ ಯೋಜನೆಗಳಿವು. ಹೆಣ್ಣು ಕುಟುಂಬದ ಕಣ್ಣು ಎಂದು ಅವರಿಗೆ ಆರ್ಥಿಕ ಶಕ್ತಿ ಸಿಗಬೇಕು, ಅವರ ಮನೆಗಳು ಬೆಳಗಬೇಕು ಎಂದು ನೀಡಲಾಗಿದೆ. ವಿರೋಧ ಪಕ್ಷಗಳು ಹೀಗೆ ಮಾತನಾಡುತ್ತಿರಲಿ ಎಂದು ಕಿಡಿ ಕಾರಿದರು.

ಬಿಜೆಪಿ ಸರ್ಕಾರ 1 ಸಾವಿರ ಎಕರೆ ಸ್ವಾಧೀನ ಮಾಡಿಕೊಂಡಾಗ ಯಾಕೆ ಸುಮ್ಮನಿದ್ದರು?

ಬಿಡದಿ ಪಾದಯಾತ್ರೆ ವಿಚಾರವಾಗಿ, ನಾನು ಯಾರ್ಯಾರೋ ಮಾತಿಗೆ ಉತ್ತರ ನೀಡಲು ಆಗುವುದಿಲ್ಲ. ಮಹಾರಾಷ್ಟ್ರದಲ್ಲಿ 90 ಸಾವಿರ ಎಕರೆ, ತೆಲಂಗಾಣದಲ್ಲಿ 40 ಸಾವಿರ ಎಕರೆಯಲ್ಲಿ ಟೌನ್ ಶಿಪ್ ಮಾಡುತ್ತಿದ್ದಾರೆ. ಬಿಡದಿಯದು ನನ್ನ ಯೋಜನೆಯಲ್ಲ. ಕುಮಾರಸ್ವಾಮಿ ಅವರು ಈ ಯೋಜನೆಗೆ ಅಧಿಸೂಚನೆ ಹೊರಡಿಸಿದ್ದರು. ಹಿಂದಿನ ಬಿಜೆಪಿ ಸರ್ಕಾರ ಈ ಜಾಗದಲ್ಲಿ 1 ಸಾವಿರ ಎಕರೆಯನ್ನು ಕೆಐಎಡಿಬಿಗೆ ಸ್ವಾಧೀನ ಪಡಿಸಿಕೊಟ್ಟಾಗ ಇವರು ಯಾಕೆ ಯಾಕೆ ಸುಮ್ಮನಿದ್ದರು? ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಮಾಡಿದ್ದು ಯಾರು? ಆಗ ರೈತರನ್ನು ಕಳುಹಿಸಲಿಲ್ಲವೇ? ಇಲ್ಲಿ ರೈತರು ಜಮೀನು ನೀಡಲು ಮುಂದಾಗಿದ್ದಾರೆ. ಆದರೆ ಇವರಿಗೆ ರಾಜಕಾರಣ ಮಾಡಬೇಕು, ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?