ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಮಾಸ್ಕ್ ಮ್ಯಾನ್ ಚಿನ್ನಯ್ಯ ದೂರು ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ ನಂತರ ತನಗೆ ಬೆದರಿಕೆ ಮತ್ತು ಮಾನಸಿಕ ಒತ್ತಡ ಹಾಕಲಾಗಿದೆ ಎಂದು ಚೆನ್ನಯ್ಯ ಆರೋಪಿಸಿದ್ದು, ವಿಶೇಷ ತನಿಖಾ ತಂಡ(ಎಸ್ಐಟಿ)ಗೆ ದೂರು ನೀಡಿದ್ದಾರೆ.
ರಿಟ್ ಅರ್ಜಿ ನೀಡಿರುವುದರ ಹಿಂದೆ ಯಾರು ಇದ್ದಾರೆ? ನಿಮಗೆ ಯಾರು ಸಹಾಯ ಮಾಡುತ್ತಿದ್ದಾರೆ? ಯಾರ ಪ್ರೇರಣೆಯಿಂದ ಈ ಕೆಲಸ ಮಾಡುತ್ತಿದ್ದೀರಿ ಎನ್ನುವ ಪ್ರಶ್ನೆಯನ್ನು ಪದೇ ಪದೇ ಕೇಳಲಾಗಿದೆ. ತನ್ನ ಮೊಬೈಲ್ ನಂಬರ್ ಪಡೆದು ಮಾತನಾಡಲು ಒತ್ತಾಯಪಡಿಸುತ್ತಿದ್ದಾರೆ. ಕುಟುಂಬದವರ ಮಾಹಿತಿ ಕಲೆ ಹಾಕಲು ಪ್ರಯತ್ನಿಸಲಾಗಿದೆ. ಗಿರೀಶ್ ಮಟ್ಟಣ್ಣನವರ್ ಪರೋಕ್ಷವಾಗಿ ಬೆದರಿಕೆ ಹಾಕುವ ಮತ್ತು ಮಾನಸಿಕ ಒತ್ತಡ ಹೇರುವ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಚೆನ್ನಯ್ಯ ಎಸ್ಐಟಿಗೆ ದೂರು ನೀಡಿದ್ದಾರೆ.
ಯೂಟ್ಯೂಬರ್ ಅಭಿಷೇಕ್ ನನಗೆ ಫೋನ್ ಮಾಡುತ್ತಿದ್ದಾರೆ. ಪತ್ನಿ, ಅಕ್ಕ, ಅಳಿಯನಿಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ರಿಟ್ ಅರ್ಜಿ ವಾಪಸ್ ಪಡೆಯುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಚಿನಯ್ಯ ಆರೋಪಿಸಿದ್ದು, ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.