ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್ ವ್ಯೂವ್ ಅನ್ನು ಜೂನ್ 18 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಪಿಯುಸಿ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವವರು ವಾಕ್ ಇನ್ ಇಂಟರ್ ವ್ಯೂವ್ ನಲ್ಲಿ ಭಾಗವಹಿಸಬಹುದು. ಆಸಕ್ತ 18 ರಿಂದ 28 ವರ್ಷದೊಳಗಿನ ನಿರುದ್ಯೋಗಿ ಯುವಕ/ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 3 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ(ರೆಜುಮ್) ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.