LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲಂಚ ಕೊಡಲು ಬಂದವರೇ ಲೋಕಾಯುಕ್ತ ಬಲೆಗೆ…!

ಕಲಬುರಗಿ: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣವೊಂದರಲ್ಲಿ ಆರೋಪಿಗಳಿಗೆ ಸಹಕರಿಸಲು ವಿಶೇಷ ಸರ್ಕಾರಿ ಅಭಿಯೋಜಕರಿಗೆ ಲಂಚ ನೀಡಲು ಯತ್ನಿಸಿದ ತಂದೆ ಹಾಗೂ ಮಗನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕಲಬುರಗಿ ಜಿಲ್ಲಾ ಕೋರ್ಟ್ ಸಂಕೀರ್ಣದ ಕಟ್ಟಡದಲ್ಲಿ ಸೋಮವಾರ ಘಟನೆ ನಡೆದಿದೆ. 5,000 ರೂ. ಲಂಚ ನೀಡಲು ಯತ್ನಿಸಿದ ಆಳಂದ ತಾಲೂಕಿನ ಕೊತನಹಿಪ್ಪರಗಾದ ಸಂಜೀವನ್ ದತ್ತಾಜಿ ಪಾಟೀಲ(80), ಅವರ ಪುತ್ರ ಸುರೇಶ್ ಸಂಜೀವನ್ ಪಾಟೀಲ(44) ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್ಸಿ ಎಸ್ಟಿ ದೌರ್ಜನ್ಯ ಪ್ರಕರಣದ ವಿಚಾರಣೆ ಕಲಬುರಗಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿದ್ದು, ಈ ಪ್ರಕರಣದಲ್ಲಿ ಆರೋಪಿಯಾದ ತಮ್ಮನಿಗೆ ಸಹಕರಿಸುವಂತೆ ಅಣ್ಣ ಸಂಜೀವನ್ ಪಾಟೀಲ್ ಅವರು ತಮ್ಮ ಮಗ ಸುರೇಶ್ ಜೊತೆಗೆ 5000 ರೂ. ಹಣವನ್ನು ಕವರ್ ನಲ್ಲಿ ಇಟ್ಟು ವಿಶೇಷ ಸರ್ಕಾರಿ ಅಭಿಯೋಜಕರಿಗೆ ನೀಡಲು ಮುಂದಾಗಿದ್ದರು.

ಕಲಬುರಗಿ ವಿಭಾಗದ ವಿಶೇಷ ಸರ್ಕಾರಿ ಅಭಿಯೋಜಕ(SPP) ಪ್ರಾಣೇಶ ಭರತನೂರ ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ನೀಡಿದ್ದರು. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ಇನ್ ಸ್ಪೆಕ್ಟರ್ ಗಳಾದ ರಾಜಶೇಖರ ಬಡದೇಸಾರ, ಅರುಣಕುಮಾರ್ ಕಾರ್ಯಾಚರಣೆ ನಡೆಸಿ ಲಂಚ ಕೊಡಲು ಬಂದಿದ್ದ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!