LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ದಾಳಿ

ಬೆಂಗಳೂರು :ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಕಬಂಧ ಬಾಹುಗಳಿಗೆ ಬ್ರೇಕ್ ಹಾಕಲು ಲೋಕಾಯುಕ್ತ ಹಂಟಿಂಗ್ ಮುಂದುವರಿದಿದೆ ಇಂದು ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಸಿಂಹಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ಅನಿರೀಕ್ಷಿತ ದಾಳಿ ನಡೆಸಿ, ಕೋಟಿ ಕೋಟಿ ಲೂಟಿ ಹೊಡೆದಿದ್ದ ಭ್ರಷ್ಟ ಅಧಿಕಾರಿಗಳ ನಿದ್ದೆಗೆಡಿಸಿದ್ದಾರೆ ಸದ್ಯ ಕಲಬುರಗಿ, ಚಿಕ್ಕಮಗಳೂರು ಹಾಗೂ ಬೀದರ್ ಸೇರಿದಂತೆ ಹಲವು ಜಿಲ್ಲೆಗಳ ಹೈಪ್ರೊಫೈಲ್ ಕಚೇರಿ ಮತ್ತು ನಿವಾಸಗಳಲ್ಲಿ ಲೋಕಾಯುಕ್ತ ಪೊಲೀಸರು ಬೀಡುಬಿಟ್ಟಿದ್ದು, ತೀವ್ರ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ವಿವಿಧ ಇಲಾಖೆಗಳಲ್ಲಿ ಅಧಿಕಾರಿಗಳು ಅಕ್ರಮ ಆಸ್ತಿ (Illegal property) ಗಳಿಸಿದ ಬಗ್ಗೆ ಸಾಲು ಸಾಲು ಆರೋಪಗಳು ಕೇಳಿಬಂದ ಹಿನ್ನೆಲೆ ಕಲಬುರಗಿ, ದಾವಣೆಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದೆ

ದಾವಣಗೆರೆ ಜಿಲ್ಲೆ: ಕೆಎಸ್‌ಆರ್‌ಟಿಸಿ ಚೀಫ್ ಮೆಕ್ಯಾನಿಕ್ ಮನೆಯಲ್ಲಿ ಬರೋಬ್ಬರಿ ₹40 ಲಕ್ಷ ಕ್ಯಾಶ್

ದಾವಣಗೆರೆ: ಜಿಲ್ಲಾ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ನೇತೃತ್ವದಲ್ಲಿ ಮೂರು ಅಧಿಕಾರಿಗಳ ಒಟ್ಟು 12 ಸಿಂಹದಂತಹ ತಂಡಗಳು ಏಕಕಾಲಕ್ಕೆ 12 ಕಡೆ ಭರ್ಜರಿ ಹಂಟಿಂಗ್ ನಡೆಸಿವೆ ಹುಬ್ಬಳ್ಳಿಯಲ್ಲಿ ಕೆಎಸ್‌ಆರ್‌ಟಿಸಿ (ವಾಯವ್ಯ) ಚೀಫ್ ಮೆಕ್ಯಾನಿಕ್ ಆಗಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಿದ್ದೇಶ್ವರ ಹೆಬ್ಬಾಳ್ ಅವರಿಗೆ ಲೋಕಾಯುಕ್ತ ಪೊಲೀಸರು ಸರಿಯಾದ ಶಾಕ್ ನೀಡಿದ್ದಾರೆ ಇವರಿಗೆ ಸೇರಿದ ದಾವಣಗೆರೆ ನಗರದ ಆಂಜನೇಯ ಬಡಾವಣೆ ನಿವಾಸ, ಹುಬ್ಬಳ್ಳಿ ಕಚೇರಿ ಸೇರಿದಂತೆ 4 ಪ್ರಮುಖ ಅಡಗುತಾಣಗಳ ಮೇಲೆ ದಾಳಿ ನಡೆದಿದ್ದು, ಪರಿಶೀಲನೆ ವೇಳೆ ಸಿದ್ದೇಶ್ವರ ಹೆಬ್ಬಾಳ್ ಮನೆಯಲ್ಲಿ ಕಂತೆ ಕಂತೆ ನೋಟುಗಳ ರೂಪದಲ್ಲಿದ್ದ ಬರೋಬ್ಬರಿ ₹40 ಲಕ್ಷ ನಗದು ಪತ್ತೆಯಾಗಿದ್ದು, ಅಧಿಕಾರಿಗಳೇ ದಂಗಾಗಿದ್ದಾರೆ

ಚಿತ್ರದುರ್ಗ ಮತ್ತು ಬೆಳಗಾವಿ ಅಧಿಕಾರಿಗಳ ಬೇಟೆ: 5 ಕಡೆ ಏಕಕಾಲಕ್ಕೆ ರೇಡ್

ಇದೇ ವೇಳೆ ಚಿತ್ರದುರ್ಗ ಬಯಲು ಸೀಮೆ ಪ್ರಾಧಿಕಾರದ ಕಾರ್ಯದರ್ಶಿಯಾಗಿರುವ ಕೃಷ್ಣ ನಾಯ್ಕ್ ಅವರ ಮನೆ ಮತ್ತು ಕಚೇರಿಗಳ ಮೇಲೂ ಲೋಕಾಯುಕ್ತ ಹೈ-ವೋಲ್ಟೇಜ್ ರೇಡ್ ಮಾಡಿದೆ ದಾವಣಗೆರೆ ನಗರದ ಪ್ರತಿಷ್ಠಿತ ಸಿದ್ದವೀರಪ್ಪ ಬಡಾವಣೆಯ ನಿವಾಸ ಹಾಗೂ ಚಿತ್ರದುರ್ಗದ ಕಚೇರಿ ಸೇರಿದಂತೆ ಒಟ್ಟು 5 ಕಡೆ ಅಧಿಕಾರಿಗಳು ಇಂಚಿಂಚು ದಾಖಲೆಗಳನ್ನು ಜಾಲಾಡುತ್ತಿದ್ದಾರೆ ಇದರ ಬೆನ್ನಲ್ಲೇ ಬೆಳಗಾವಿ ಕೆಆರ್‌ಐಡಿಎಲ್ (KRIDL) ಅಧೀಕ್ಷಕ ಇಂಜಿನಿಯರ್ ಸಣ್ಣ ಕೆಂಚಪ್ಪ ಅವರಿಗೂ ಲೋಕಾಯುಕ್ತ ಬಿಸಿ ತಟ್ಟಿದ್ದು, ಅವರಿಗೆ ಸೇರಿದ ಚಿತ್ರದುರ್ಗ, ದಾವಣಗೆರೆ ಮತ್ತು ಬೆಳಗಾವಿಯಲ್ಲಿರುವ ಐಷಾರಾಮಿ ಮನೆಗಳು ಸೇರಿದಂತೆ 5 ಕಡೆ ಏಕಕಾಲಕ್ಕೆ ದಾಳಿ ನಡೆಸಿ ಲಾಕರ್‌ಗಳನ್ನು ತಪಾಸಣೆ ನಡೆಸಲಾಗುತ್ತಿದೆ

ಕಲಬುರಗಿ ಮತ್ತು ಬೀದರ್: ನಿವೃತ್ತ ಇಂಜಿನಿಯರ್ ತೋಟದ ಮನೆ, ಕಾಂಪ್ಲೆಕ್ಸ್‌ಗಳ ಮೇಲೆ ದಾಳಿ

ಕಲಬುರಗಿ: ಇತ್ತ ಕಲ್ಯಾಣ ಕರ್ನಾಟಕ ಭಾಗದಲ್ಲೂ ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದ ಹಿರಿಯ ಅಧಿಕಾರಿಗಳ ತಂಡ ಭರ್ಜರಿ ಆಪರೇಷನ್ ಕೈಗೊಂಡಿದೆ . ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಇಂಜಿನಿಯರಿಂಗ್ ಸೂಪರಿಂಟೆಂಡೆಂಟ್ ನಿವಾಸದ ಮೇಲೆ ದಾಳಿಯಾಗಿದ್ದು, ನಗರದ ಗೋದುತಾಯಿ ನಗರದ ಮನೆ ಸೇರಿದಂತೆ ಒಟ್ಟು ಐದು ಕಡೆ ಪೊಲೀಸರು ಬೀಡುಬಿಟ್ಟಿದ್ದಾರೆ ಅಷ್ಟೇ ಅಲ್ಲದೆ, ಇದೇ ಅಧಿಕಾರಿಗೆ ಸೇರಿದ ಬೀದರ್ ಜಿಲ್ಲೆಯ ಹಳ್ಳಿಖೇಡ ಗ್ರಾಮದ ನಿವಾಸ, ಹುಮ್ನಾಬಾದ್‌ನಲ್ಲಿರುವ ಎರಡು ದೊಡ್ಡ ವಾಣಿಜ್ಯ ಕಾಂಪ್ಲೆಕ್ಸ್ ಹಾಗೂ ಹಳ್ಳಿಖೇಡ ಗ್ರಾಮದ ಐಷಾರಾಮಿ ತೋಟದ ಮನೆಯ ಮೇಲೂ ಏಕಕಾಲಕ್ಕೆ ದಾಳಿ ನಡೆಸಿ ಬೇನಾಮಿ ಆಸ್ತಿಯ ಸೀಕ್ರೆಟ್ ಫೈಲ್‌ಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ

ಚಿಕ್ಕಮಗಳೂರು: ಅರಣ್ಯಾಧಿಕಾರಿ (ACF) ಮೋಹನ್‌ಗೆ ಬೆಳ್ಳಂಬೆಳಗ್ಗೆ ಬಿಗ್ ಶಾಕ್

ಚಿಕ್ಕಮಗಳೂರು: ಕಾಫಿ ನಾಡಿನಲ್ಲೂ ಭ್ರಷ್ಟರ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಸಮರ ಸಾರಿದ್ದಾರೆ ಆಸ್ತಿ ಗಳಿಕೆ ಹಾಗೂ ಕರ್ತವ್ಯ ಲೋಪದ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದ ತಂಡ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಮೋಹನ್ ಅವರ ಮನೆ ಮತ್ತು ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಶಾಕ್ ನೀಡಿದೆ ಇದರೊಂದಿಗೆ ಲಿಂಕ್ ಹೊಂದಿರುವ ಕಡೂರಿನಲ್ಲಿರುವ ಶ್ರೀನಿವಾಸ್ ಎಂಬುವವರ ಸಹೋದರಿ ಮನೆಯ ಮೇಲೂ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆ ಹಾಗೂ ಹೂಡಿಕೆ ಪತ್ರಗಳ ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?