LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಸಿಎಫ್ ಮನೆಯಲ್ಲಿ ಕಂತೆ ಕಂತೆ ಹಣ, ಚಿನ್ನಾಭರಣಗಳ ಖಜಾನೆ ಕಂಡು ಲೋಕಾಯುಕ್ತ ಅಧಿಕಾರಿಗಳೇ ಶಾಕ್

ಚಿಕ್ಕಮಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ದಾಳಿ ವೇಳೆ ಸರ್ಕಾರಿ ಅಧಿಕಾರಿಗಳ ಮನೆ, ಮನೆಯಲ್ಲಿರುವ ಅಪ್ರಾಪ ಪ್ರಮಾಣದ ಹಣ, ಚಿನ್ನಾಭರಣ ಕಂಡು ಅಧಿಕಾರಿಗಳೇ ಶಾಲ್ ಆಗಿದ್ದಾರೆ.

ಚಿಕ್ಕಮಗಳೂರಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಮೋಹನ್ ಅವರ ನಿವಾಸ, ಕಚೇರಿ ಹಾಗೂ ನಿರ್ಮಾಣ ಹಂತದ ಮನೆ ಸೇರಿದಂತೆ ಐದು ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಭ್ರಷ್ಟಾಚಾರದ ಆರೋಪ ಹಾಗೂ ಆಸ್ತಿ ದುರ್ಬಳಕೆ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಚಿಕ್ಕಮಗಳೂರಿನ ಮೋಹನ್ ಅವರ ನಿವಾಸದಲ್ಲಿ ಲೋಕಾಯುಕ್ತ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ದಾಳಿ ವೇಳೆ ಲಕ್ಷಾಂತರ ರೂಪಾಯಿ ಕಂತೆ ಕಂತೆ ಹಣ, ಚಿನ್ನಾಭರಣಗಳು ಪತ್ತೆಯಾಗಿವೆ. ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಅಧಿಕಾರಿಯ ಆಸ್ತಿಪಾಸ್ತಿಗಳ ಕುರಿತು ಕೂಲಂಕಷ ತನಿಖೆ ನಡೆಸಲಾಗುತ್ತಿದೆ.

ಬೆಂಗಳೂರು, ದಾವಣಗೆರೆ, ಚಿಕ್ಕಮಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ಕುರಿತ ಮಾಹಿತಿ ಇಲ್ಲಿದೆ:
ಬೆಂಗಳೂರು:

ಬೆಂಗಳೂರಿನ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕರ್ನಾಟಕ ಹೌಸಿಂಗ್ ಬೋರ್ಡ್​ ಅಡಿಷನಲ್ ಡೈರೆಕ್ಟರ್ ರಾಜಣ್ಣ ಮತ್ತು ಬೆಸ್ಕಾಂ ಯಲಹಂಕ ವಲಯದ ಎಇಇ ಉದಯ್ ಕುಮಾರ್ ನಿವಾಸಗಳ ಮೇಲೆ ರೇಡ್​​ ಮಾಡಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರುವ ಮಾಹಿತಿ ಇದೆ.

ಕಲಬುರಗಿ:

ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಪಂಚಾಯತ್​​ರಾಜ್​​ ನಿವೃತ್ತ ಸೂಪರಿಡೆಂಟ್ ಇಂಜಿನಿಯರ್ ಎಸ್​.ಇ.ಮಾಣಿಕ್ ಕನಕಟ್ಟಿ ನಿವಾಸದ ಮೇಲೆ ರೇಡ್​​ ನಡೆದಿದೆ. ಗೋದುತಾಯಿ ನಗರದ ಮನೆ ಸೇರಿ ಐದು ಕಡೆ ದಾಳಿ ನಡೆಸಲಾಗಿದೆ. ಬೀದರ್ ಜಿಲ್ಲೆಯ ಹಳ್ಳಿಖೇಡ ಗ್ರಾಮದ ನಿವಾಸ, ತೋಟದ ಮನೆ, ಹುಮ್ನಾಬಾದ್​ನ ಎರಡು ಕಾಂಪ್ಲೆಕ್ಸ್ ಮೇಲೆ ಲೋಕಾಯುಕ್ತ ಎಸ್​ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

ದಾವಣಗೆರೆ:
ದಾವಣಗೆರೆಯ ಹಲವೆಡೆಯೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೂವರು ಅಧಿಕಾರಿಗಳ ಮನೆ, ಕಚೇರಿಗಳು ಸೇರಿ 12 ಕಡೆ ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪುರೆ ನೇತೃತ್ವದಲ್ಲಿ ರೇಡ್​​ ನಡೆದಿದೆ.

ಹುಬ್ಬಳ್ಳಿಯ KSRTC(ವಾಯವ್ಯ) ಚೀಫ್​ ಮೆಕ್ಯಾನಿಕ್ ಸಿದ್ದೇಶ್ವರ ಅವರ ಆಂಜನೇಯ ಬಡಾವಣೆಯ ಮನೆ, ಹುಬ್ಬಳ್ಳಿ ಕಚೇರಿ ಸೇರಿದಂತೆ ನಾಲ್ಕು ಕಡೆ ದಾಳಿ ನಡೆದಿದೆ. ದಾಳಿ ವೇಳೆ ಸಿದ್ದೇಶ್ವರ ಮನೆಯಲ್ಲಿ 40 ಲಕ್ಷ ರೂ. ಪತ್ತೆಯಾದ ಮಾಹಿತಿ ಇದೆ. ಚಿತ್ರದುರ್ಗ ಬಯಲು ಸೀಮೆ ಪ್ರಾಧಿಕಾರದ ಕಾರ್ಯದರ್ಶಿ ಕೃಷ್ಣ ನಾಯ್ಕ್​​ ಅವರ ಸಿದ್ದವೀರಪ್ಪ ಬಡಾವಣೆಯ ಕೃಷ್ಣನಾಯ್ಕ್​ ಮನೆ, ಕಚೇರಿ ಸೇರಿದಂತೆ ಐದು ಕಡೆ ದಾಳಿ ನಡೆದಿದ್ದು, ಬೆಳಗಾವಿ KRIDL ಅಧೀಕ್ಷಕ ಇಂಜಿನಿಯರ್ ಸಣ್ಣ ಕೆಂಚಪ್ಪಗೆ ಸೇರಿದ ಮನೆ ಸೇರಿದಂತೆ ಐದು ಕಡೆಯೂ ದಾಳಿ ನಡೆದಿದೆ.

ಚಿಕ್ಕಮಗಳೂರು:

ಚಿಕ್ಕಮಗಳೂರು ACF ಮೋಹನ್​ಗೆ ಸೇರಿದ ಮನೆ, ಕಚೇರಿ, ನಿರ್ಮಾಣ ಹಂತದ ಮನೆ ಸೇರಿದಂತೆ 5 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಕಲ್ಯಾಣನಗರದ ನಿವಾಸದಲ್ಲಿ ದಾಖಲೆ ಪರಿಶೀಲನೆ ನಡೆಸಲಾಗಿದ್ದು, ACF ಮೋಹನ್ ವಿರುದ್ಧ ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಡಿವೈಎಸ್ ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ​ ನಡೆದಿದೆ.

……..

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?