LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಸ್ ಚಿತ್ರದ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ಬೆಂಗಳೂರು: ಬಾಸ್ ಚಿತ್ರಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಜೂನ್ 19ರಂದು ರಾಜ್ಯಾದ್ಯಂತ ಬಿಡುಗಡೆ ಆಗಬೇಕಿದ್ದ ಬಾಸ್ ಚಲನಚಿತ್ರಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮೀ ದರ್ಶನ್ ಅವರು ಚಿತ್ರದ ಬಿಡುಗಡೆಗೆ ತಡೆ ನೀಡುವಂತೆ ಕೋರಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯವು ಈ ಹಿಂದೆ ಚಿತ್ರದ ಬಿಡುಗಡೆಗೆ ವಿಧಿಸಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿ ಬಿಡುಗಡೆಗೆ ಅವಕಾಶ ನೀಡಿತ್ತು. ಅದರ ಬೆನ್ನಲ್ಲೇ ಚಿತ್ರತಂಡವು ಜೂನ್ 19ರಂದು ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುವುದಾಗಿ ಘೋಷಿಸಿತ್ತು. ಇದೀಗ ಸಿವಿಲ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮೀ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಚಿತ್ರದ ಬಿಡುಗಡೆಗೆ ತಕ್ಷಣದ ಮಧ್ಯಂತರ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ. ಚಿತ್ರದ ಕಥಾವಸ್ತು, ಪಾತ್ರಗಳ ನಿರೂಪಣೆ ಹಾಗೂ ಇತರ ವಿವಾದಿತ ಅಂಶಗಳಿಗೆ ಸಂಬಂಧಿಸಿದಂತೆ ಗಂಭೀರ ಆಕ್ಷೇಪಣೆಗಳನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಬಾಸ್ ಸಿನಿಮಾದ ಕಥೆಯು ರೇಣುಕಾಸ್ವಾಮಿ ಕೊಲೆಯ ಹಿನ್ನೆಲೆಯಾಗಿ ಬಂದಿರುವ ಸಿನಿಮಾ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದಾಗಿಯೇ ದರ್ಶನ್ ಕುಟುಂಬ ಸಿನಿಮಾಗೆ ತಡೆಯಾಜ್ಞೆ ನೀಡುವಂತೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!