LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೋಂ ಸ್ಟೇಗಳಲ್ಲಿ ಗ್ಯಾಸ್ ಗೀಸರ್ ಬಳಸುವಂತಿಲ್ಲ, ನೋಂದಣಿ ಕಡ್ಡಾಯ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹೋಂ-ಸ್ಟೇ ನಡೆಸುವ ಮಾಲೀಕರು ಕಡ್ಡಾಯವಾಗಿ ಪ್ರವಾಸೋದ್ಯಮ ಇಲಾಖೆಯಲ್ಲಿ ನಿಯಮಾನುಸಾರ ಹೋಂ-ಸ್ಟೇ ನೋಂದಣಿ ಮಾಡಿಕೊಳ್ಳಲು ಸರ್ಕಾರದ ಪ್ರವಾಸೋದ್ಯಮ ನೀತಿ ಹಾಗೂ ಮಾರ್ಗಸೂಚಿಗಳಿಗೆ ಬದ್ಧರಿದ್ದಲ್ಲಿ ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ನಿರಾಕ್ಷೇಪಣಾ ಪತ್ರಗಳನ್ನು ಪಡೆದುಕೊಂಡಿರುವ ಮಾಲೀಕರಿಗೆ ಪ್ರವಾಸೋದ್ಯಮ ಇಲಾಖೆಯಿಂದ 5 ವರ್ಷದ ಅವಧಿಗೆ ಪರವಾನಿಗೆಯನ್ನು ನೀಡಲಾಗಿದೆ.

ಹೋಂ-ಸ್ಟೇ ನಡೆಸುವ ಮಾಲೀಕರು ಪ್ರವಾಸಿಗರ ಮನೋರಂಜನೆಗಾಗಿ ಹೋಂ-ಸ್ಟೇಗಳಲ್ಲಿ ಈಜುಕೊಳ, ಜಿಪ್‍ಲೈನ್, ಕಾಯಾಕಿಂಗ್ ಮತ್ತು ಇತರೆ ಸಾಹಸ ಚಟುವಟಿಕೆ ಅಳವಡಿಸಿಕೊಂಡಿರುತ್ತಾರೆ. ಈ ಚಟುವಟಿಕೆಗಳನ್ನು ನಡೆಸುವ ಸಂಬಂಧ ಸರಿಯಾದ ಮಾರ್ಗಸೂಚಿ ಅನುಸರಿಸುವುದು ಹಾಗೂ ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರ ಪಡೆಯುವುದು. ಇವುಗಳಿಂದ ಪ್ರವಾಸಿಗರಿಗೆ ತೊಂದರೆಗಳು ಉಂಟಾದಲ್ಲಿ ಮಾಲೀಕರೇ ನೇರ ಹೊಣೆಗಾರರಾಗಿರುತ್ತಾರೆ.

ಹೋಂ-ಸ್ಟೇಗಳಲ್ಲಿ ಗ್ಯಾಸ್ ಗೀಸರ್ ಬಳಸುವಂತಿಲ್ಲ ಎಂದು ಈಗಾಗಲೇ ತಿಳಿಸಿದರೂ ಸಹ, ಹಲವು ಹೋಂ-ಸ್ಟೇಗಳಲ್ಲಿ ಗ್ಯಾಸ್ ಗೀಸರ್ ಬಳಕೆಯಲ್ಲಿರುವುದು ಕಂಡು ಬಂದಿರುತ್ತದೆ. ಗ್ಯಾಸ್ ಗೀಸರ್ ಬಳಕೆಯಿಂದ ಅನಾಹುತಗಳು ಸಂಭವಿಸಿದಲ್ಲಿ ಹೋಂ-ಸ್ಟೇ ಮಾಲೀಕರೇ ನೇರ ಹೊಣೆಗಾರರಾಗಿರುತ್ತಾರೆ. ಇಲಾಖೆಯು ನೀಡುವ ಮಾರ್ಗಸೂಚಿ ಪಾಲಿಸುವುದರೊಂದಿಗೆ ಪ್ರವಾಸಿಗರಿಗೆ ಕೊಡಗು ಜಿಲ್ಲೆಯ ಪ್ರವಾಸವನ್ನು ಸ್ಮರಣೀಯವಾಗಿರುವಂತೆ ಸಹಕರಿಸುವಂತೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಶಶಿಧರ ಅವರು ತಿಳಿಸಿದ್ದಾರೆ.

ಚಿತ್ರಕೃಪೆ: ಎಐ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶ