LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮನೆಯ ಆವರಣಕ್ಕೆ ಹಾವು ಬಿಟ್ಟು ಯುವತಿ ಕೊಲೆ ಯತ್ನ: ಇಬ್ಬರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಮನೆಯ ಆವರಣಕ್ಕೆ ವಿಷಪೂರಿತ ಹಾವನ್ನು ಬಿಟ್ಟು ಯುವತಿ ಕೊಲೆ ಯತ್ನಕ್ಕೆ ಯತ್ನಿಸಿದ ಇಬ್ಬರನ್ನು ಬಂಧಿಸಲಾಗಿದೆ,

ಯುವತಿ ಮನೆಯಲ್ಲಿದ್ದಾಗ ಇಬ್ಬರು ಅಪರಿಚಿತ ಯುವಕರು ವಿಷಪೂರಿತ ಹಾವನ್ನು ಮನೆಯ ಆವರಣದಲ್ಲಿ ಬಿಟ್ಟು ಹೋಗಿದ್ದಾರೆ. ಭದ್ರಾವತಿಯ ನ್ಯೂ ಕಾಲೋನಿ ನಿವಾಸಿಗಳಾದ ಕಿಶೋರ್ ಮತ್ತು ಜಯಂತ್ ಅವರನ್ನು ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ನ್ಯೂಟೌನ್ ಪೊಲೀಸರು ಬಲೆ ಬೀಸಿದ್ದಾರೆ.

ಕಾರ್ಪೊರೇಟ್ ಕಂಪನಿ ಉದ್ಯೋಗಿಯಾಗಿರುವ ಯುವತಿ ಭದ್ರಾವತಿ ಜನ್ನಾಪುರದ ಮನೆಯಿಂದಲೇ ವರ್ಕ್ ಫ್ರಮ್ ಹೋಂ ಮಾಡುತ್ತಿದ್ದರು. ಸೋಮವಾರ ಬೆಳಗ್ಗೆ ಇಬ್ಬರು ಮುಸುಕುಧಾರಿಗಳು ಮನೆಯ ಕಾಂಪೌಂಡ್ ಒಳಗೆ ಪ್ರವೇಶಿಸುವುದನ್ನು ಕಿಟಕಿ ಮೂಲಕ ಗಮನಿಸಿದ್ದಾರೆ. ಕಾಂಪೌಂಡ್ ಒಳಗೆ ಹಾವು ಬಿಟ್ಟಿರುವುದನ್ನು ನೋಡಿ ಕಿರುಚಾಡಿದ್ದಾರೆ. ಈ ವೇಳೆ ಮುಸುಕು ದಾರಿಗಳು ಬೈಕ್ ಹತ್ತಿ ಸ್ಥಳದಿಂದ ಪರಾರಿಯಾಗಿದ್ದಾರೆ.

ನಂತರ ಅಕ್ಕಪಕ್ಕದವರು ಯುವತಿ ನೆರವಿಗೆ ಧಾವಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿದ ಪೊಲೀಸರು ಇಬ್ಬರನ್ನು ಮಂಗಳವಾರ ಬಂದಿಸಿದ್ದಾರೆ. ಪ್ರೀತಿ ನಿರಾಕರಿಸಿದರಿಂದ ಕೋಪಗೊಂಡಿದ್ದ ಆರೋಪಿ ಯುವತಿಯನ್ನು ಕೊಲೆ ಮಾಡಲು ಸಂಚು ರೂಪಿಸಿ ಸ್ನೇಹಿತರಿಗೆ ಆಕೆಯ ಮನೆಯ ಕಾಂಪೌಂಡ್ ಒಳಗೆ ಹಾವು ಬಿಡುವಂತೆ ಹೇಳಿದ್ದ ಎನ್ನಲಾಗಿದೆ.

ಯುವಕರು ಚೀಲದಲ್ಲಿ ತಂದಿದ್ದ ದೊಡ್ಡ ವಿಷಕಾರಿ ಹಾವನ್ನು ಮನೆಯ ಆವರಣದೊಳಗೆ ಬಿಟ್ಟು ಹೋಗಿದ್ದಾರೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಕೊಲ್ಲುವ ಉದ್ದೇಶದಿಂದ ಈ ಕೃತ್ಯ ನಡೆಸಿದ್ದಾರೆ ಎಂದು ಪೋಷಕರು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?