LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೀರಿನ ಗುಣಮಟ್ಟ ಪರೀಕ್ಷೆ ಕಡ್ಡಾಯ, ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಸೂಚನೆ

ಬೆಳಗಾವಿ: ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಬುಧವಾರ ಸವದತ್ತಿ ತಾಲೂಕಿನ ವಿವಿಧೆಡೆ ಭೇಟಿ ನೀಡಿ, ವಿವಿಧ ಇಲಾಖೆಯ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು.

ತಾಲೂಕಿನ ಉಗರಗೋಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ಭೇಟಿ ನೀಡಿ, ವಿವಿಧ ಯೋಜನೆಗಳಡಿ ಕೈಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿದರು. ಯಲ್ಲಮ್ಮ ತಾಂಡೆ ಗ್ರಾಮದಲ್ಲಿ 2025-26ನೇ ಸಾಲಿನ CMIDP ಯೋಜನೆಯಡಿ ಕೈಗೊಂಡಿರುವ ರಸ್ತೆ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿ, ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಳಿಕ “ಯಲ್ಲಮ್ಮಗುಡ್ಡ/ಉಗರಗೋಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆ”ಯ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕಡ್ಡಾಯವಾಗಿ ನೀರಿನ ಗುಣಮಟ್ಟದ ಪರೀಕ್ಷೆಯನ್ನು ಮಾಡಿ ಸಾವ೯ಜನಿಕರಿಗೆ ಶುದ್ದ ಕುಡಿಯುವ ನೀರನ್ನು ಪೂರೈಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಫಲಾನುಭವಿಗಳೊಂದಿಗೆ ಚರ್ಚೆ:

‘ಬುದ್ಧ,-ಬಸವ-ಅಂಬೇಡ್ಕರ್ ನಿವೇಶನ ಹಂಚಿಕೆ ಯೋಜನೆ’ಯಡಿ ಬಡಾವಣೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ, ಯೋಜನೆಯ ಫಲಾನುಭವಿಗಳಾದ ಸುಡುಗಾಡು ಸಿದ್ದ ಸಮುದಾಯದ ಜನರ ಕುಂದುಕೊರತೆಗಳನ್ನು ಜಿಪಂ ಸಿಇಒ ರವರು ಆಲಿಸಿದರು. ಸ್ಥಳದಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಗತಿ ಪರಿಶೀಲನಾ ಸಭೆ:

ನಂತರ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲೂಕಾ ಪಂಚಾಯತ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕಾಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ ಆಡಳಿತ ಅಧಿಕಾರಿಗಳಿಗೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಸಭೆಯಲ್ಲಿ ಮಾತನಾಡಿದ ಅವರು, ಮಳೆ ವಿಳಂಬವಾಗಿರುವುದರಿಂದ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರಿನ ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಬೇಕು. ಕಡ್ಡಾಯವಾಗಿ ನೀರಿನ ಗುಣಮಟ್ಟದ ಪರೀಕ್ಷೆ ಮಾಡಬೇಕು ಎಂದು ಸೂಚನೆ ನೀಡಿದರು.

ನೋಡಲ್ ಅಧಿಕಾರಿಗಳು ವಾರಕ್ಕೊಂದು ಬಾರಿ ವಸತಿ ನಿಲಯಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಬೇಕು. ಆರೋಗ್ಯ ಇಲಾಖೆಯವರು ಸಾರ್ವಜನಿಕರಿಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸಬೇಕು. ಜೆಜೆಎಂ ಕಾಮಗಾರಿಗಳನ್ನು ಸೂಕ್ತರೀತಿಯಲ್ಲಿ ನಿರ್ವಹಣೆ ಮಾಡಬೇಕು. ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಅಭಿವೃದ್ಧಿ ಕೆಲಸವನ್ನು ಮಾಡಬೇಕು. ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಸರಿಯಾದ ಸಮಯದಲ್ಲಿ ಕಚೇರಿಗೆ ಹಾಜರಿರಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಬಡಕುಂದ್ರಿ, ತಹಶೀಲ್ದಾರ್ ಮಲ್ಲಿಕಾರ್ಜುನ  ಹೆಗ್ಗನ್ನವರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಬಿ.ವಿ. ಅಯ್ಯನಗೌಡರ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ. ಖಾಜಿ, ತಾಪಂ ಸಹಾಯಕ ನಿರ್ದೇಶಕ ಆರ್.ಎ. ಪಾಟೀಲ ಸೇರಿದಂತೆ ವಿವಿಧ ಇಲಾಖೆಯ ತಾಲೂಕಾಮಟ್ಟದ ಅಧಿಕಾರಿಗಳು, ಎಲ್ಲ ಗ್ರಾಪಂಗಳ ಆಡಳಿತಾಧಿಕಾರಿಗಳು ಹಾಜರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!