LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಯಾಂಡ್ ಮೈನಿಂಗ್ ಮಾಫಿಯಾ: ಬಿಜೆಪಿ ಮುಖಂಡ ಸೇರಿ ಮೂವರನ್ನು ಕಾರಿನೊಳಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ

ರಾಯ್ಪುರ: ಮರಳು ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ , ಮಾಜಿ ಜನಪದ ಪಂಚಾಯತ್ ಅಧ್ಯಕ್ಷ ಸೇರಿದಂತೆ ಮೂವರನ್ನು ಪೆಟ್ರೋಲ್ ಸುರಿದು ಕಾರಿನೊಳಗೆ ಸುಟ್ಟು ಹತ್ಯೆ ಮಾಡಿರುವ ಘೋರ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ.

ಇಲ್ಲಿನ ಕೊರಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ತಡರಾತ್ರಿ ಸೋನ್ಹಾಟ್ ಪೊಲೀಸ್ ಠಾಣೆ ವ್ಯಾಪ್ತಿಯ ನೌಗೈನ್ ಗ್ರಾಮದಲ್ಲಿ ಈ ಭೀಕರ ಕೃತ್ಯ ನಡೆದಿದೆ. ಮರಳು ಗಣಿ ವ್ಯವಹಾರಕ್ಕೆ ಸಂಬಂಧಿಸಿದ ವಿವಾದ ಬಗೆಹರಿಸಲು ತೆರಳಿದ್ದ ಬಿಜೆಪಿ ಮುಖಂಡ, ಮಾಜಿ ಜನಪದ ಪಂಚಾಯತ್ ಅಧ್ಯಕ್ಷ ಭರತ್ ಸಿಂಗ್ ಅಲಿಯಾಸ್ ಲಲ್ಲಾ ಸಿಂಗ್ ಮತ್ತು ಅವರ ಸಹಚರರನ್ನು ಪೂರ್ವಯೋಜಿತವಾಗಿ ಸಂಚು ರೂಪಿಸಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಭರತ್ ಸಿಂಗ್ ಪ್ರಯಾಣಿಸುತ್ತಿದ್ದ ಫಾರ್ಚುನರ್ ಕಾರನ್ನು ಟ್ರಕ್‌ಗಳ ಮೂಲಕ ಮುಂದೆ ಮತ್ತು ಹಿಂದೆ ಸುತ್ತುವರಿದು ದಾರಿಗಳನ್ನು ಬಂದ್ ಮಾಡಲಾಗಿತ್ತು. ಬಳಿಕ ವಾಹನದ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಕಿಯಿಂದಾಗಿ ಕಾರಿನಿಂದ ಹೊರಬರಲಾಗದೇ ಲಾಕ್ ಆಗಿದ್ದು, ಭರತ್ ಸಿಂಗ್ ಕಾರಿನೊಳಗೆ ಸಜೀವ ದಹನಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ವೀರೇಂದ್ರ ಸಿಂಗ್ ಚಿಕಿತ್ಸೆ ವೇಳೆ ಮೃತಪಟ್ಟರೆ, ಶಿಕ್ಷಕರಾಗಿದ್ದ ನಾಗೇಂದ್ರ ಸಿಂಗ್ ಕೂಡ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿರುವ ಮಯಾಂಕ್ ಸಿಂಗ್ ಬಿಲಾಸ್ಪುರದ ಅಪೋಲೊ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಮರಳು ಗಣಿಗಾರಿಕೆ ಹಾಗೂ ಅಕ್ರಮ ವಸೂಲಾತಿ ವಿಚಾರವಾಗಿ ಭರತ್ ಸಿಂಗ್ ಬಣ ಮತ್ತು ಮನೋಜ್ ತ್ರಿಪಾಠಿ ಕುಟುಂಬದ ನಡುವೆ ಹಲವು ತಿಂಗಳುಗಳಿಂದ ತೀವ್ರ ವೈಮನಸ್ಸು ಇತ್ತು ಎಂಬುದು ಬೆಳಕಿಗೆ ಬಂದಿದೆ. ಇದೇ ವೈಷಮ್ಯ ಹತ್ಯೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಷತ್ ತ್ರಿಪಾಠಿ, ವಿಶಾಲ್ ತ್ರಿಪಾಠಿ, ಸತ್ಯಪ್ರಕಾಶ್ ತ್ರಿಪಾಠಿ ಹಾಗೂ ಮನ್ನು ತ್ರಿಪಾಠಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಹಲವು ಆರೋಪಿಗಳು ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ಮುಂದುವರಿದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ