LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘ನಮ್ಮ ರಾಜ್ಯದವರಿಗೆ ಮಾತ್ರ ನಮ್ಮ ಯೋಜನೆ, ಮತದಾನದ ಹಕ್ಕು ಇಲ್ಲದಿದ್ದರೆ ಗ್ಯಾರಂಟಿ ಇಲ್ಲ’

ಬೆಂಗಳೂರು: ಗೃಹಜ್ಯೋತಿ ಯೋಜನೆಯಲ್ಲಿ ನಮ್ಮ ರಾಜ್ಯದವರು ಉಚಿತ ವಿದ್ಯುತ್ ಪಡೆಯುತ್ತಿದ್ದಾರಾ? ಬೇರೆ ರಾಜ್ಯದವರು ವಿದ್ಯುತ್ ಪಡೆಯುತ್ತಿದ್ದಾರಾ ಎಂದು ಪರಿಶೀಲನೆ ಮಾಡಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ನಮ್ಮ ರಾಜ್ಯದಲ್ಲಿ ಈಗಾಗಲೇ 20 ಲಕ್ಷ ಜನರು ಹೊರ ರಾಜ್ಯಗಳಿಂದ ಬಂದು ವಿವಿಧ ಕೆಲಸ ಮಾಡುತ್ತಿದ್ದಾರೆ. ಅವರ ಮತ ಇಲ್ಲಿದೆಯೇ ಇಲ್ಲವೇ ಎಂದು ಪರಿಶೀಲನೆ ಮಾಡಬೇಕಲ್ಲವೇ? ನಾವು ನಮ್ಮ ಮತದಾರರಿಗೆ ಶಕ್ತಿ ನೀಡಬೇಕೋ. ಹೊರಗಿನವರಿಗೆ ಶಕ್ತಿ ನೀಡಬೇಕೋ? ಇಲ್ಲಿ ಮತದಾನದ ಹಕ್ಕು ಇರುವವರಿಗೆ ಯೋಜನೆ ನೀಡುವುದು ನಮ್ಮ ಕರ್ತವ್ಯ. ಬಸ್ ಗಳಲ್ಲಿಯೂ ರಾಜ್ಯದ ಮಹಿಳೆಯರಿಗೆ ಗುರುತಿನ ಚೀಟಿ ನೀಡಲು ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.

ಹೊರ ರಾಜ್ಯಗಳಲ್ಲಿ ಮತದಾನದ ಹಕ್ಕು ಇಲ್ಲದವರಿಗೆ ಸರ್ಕಾರದ ಯೋಜನೆ ತೆಗೆಯಲು ಹೊರಟಿದ್ದಾರೆ. ಮುಂದೆ ಮತದಾನ ಇಲ್ಲದಿದ್ದರೆ ಕೇಂದ್ರದಿಂದ ಯಾವುದೇ ಹಕ್ಕನ್ನು ನೀಡುವುದಿಲ್ಲ. ಹೀಗಾಗಿ ನಮ್ಮ ರಾಜ್ಯದವರಿಗೆ ತೊಂದರೆ ಆಗಬಾರದು ಎಂದು ಹೇಳಿದ್ದಾರೆ.

ವೃದ್ದಾಪ್ಯ ವೇತನ, ವಿಧವಾ ವೇತನ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಕಿತ್ತು ಹಾಕುವುದು ನಮ್ಮ ಉದ್ದೇಶವಲ್ಲ. ಯೋಜನೆಗಳು ನೈಜ ಫಲಾನುಭವಿಗಳಿಗೆ ತಲುಪುತ್ತಿದೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳಲು ಮುಂದಾಗಿದ್ದೇವೆ. ಹೀಗಾಗಿ ಮತ ಹಕ್ಕು ಇಲ್ಲದಿದ್ದರೆ ಗ್ಯಾರಂಟಿ ಸಿಗುವುದಿಲ್ಲ ಎಂದು ಸಿಎಂ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?