LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಒತ್ತಾಯಿಸಿ ಮುಖ್ಯ ನ್ಯಾಯಮೂರ್ತಿಗೆ ಮನವಿ

ಬೆಂಗಳೂರು: ಶಿವಮೊಗ್ಗವನ್ನು ಮಂಗಳೂರಿನ ಹೈಕೋರ್ಟ್ ಸಂಚಾರಿ ಪೀಠಕ್ಕೆ ಸೇರಿಸಬಾರದು ಮತ್ತು ಮಧ್ಯಕರ್ನಾಟಕದ ಕೇಂದ್ರವಾದ ಶಿವಮೊಗ್ಗಕ್ಕೆ ಹೈಕೋರ್ಟ್ ಸಂಚಾರಿ ಪೀಠ ಕೊಡಬೆಕೆಂದು ಒತ್ತಾಯಿಸಿ ರಾಜ್ಯ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಿ ಶಿವಮೊಗ್ಗ ಜಿಲ್ಲೆಯ ಸಂಸದರು ಮತ್ತು  ಜಿಲ್ಲೆಯ ಎಲ್ಲಾ ಶಾಸಕರುಗಳು ನೀಡಿದ ಮನವಿ ಪತ್ರ ಮತ್ತು 47ಕ್ಕೂ ಹೆಚ್ಚು ಸಂಘಟನೆಗಳು ನೀಡಿದ ಮನವಿಗಳನ್ನು ನೀಡಿ ಹಕ್ಕೊತ್ತಾಯಗಳನ್ನು ತಿಳಿಸಲಾಯಿತು.

ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ರೀತಿ ಮಧ್ಯ ಕರ್ನಾಟಕದ ಕೇಂದ್ರ ಸ್ಥಾನ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಬೇಕೆಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ರಾಜ್ಯ ಸರ್ಕಾರ ಮತ್ತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಮನವಿ ಸಲ್ಲಿಸಲಾಗಿದೆ.

ಮಧ್ಯ ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳನ್ನು ಒಳಗೊಂಡ ಒಂದು ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸುವಂತೆ ಹಲವು ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ಆದರೆ ಮಂಗಳೂರಿನಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ಹೈಕೋರ್ಟ್ ಸಂಚಾರಿ ಪೀಠಕ್ಕೆ ಕರಾವಳಿ ಜಿಲ್ಲೆಗಳನ್ನು ಮಾತ್ರ ಸೇರಿಸಲಾಗಿದೆ. ಶಿವಮೊಗ್ಗದಲ್ಲಿ ಸಂಚಾರಿ ಪೀಠ ಸ್ಥಾಪಿಸುವ ಬಗೆಗಿನ ಬೇಡಿಕೆ ಪರಿಶೀಲಿಸುವುದಾಗಿ ರಾಜ್ಯ ಸರ್ಕಾರದಿಂದ ಭರವಸೆ ಸಿಕ್ಕಿದೆ. ಆದರೆ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ.

ಹೋರಾಟ ಸಮಿತಿ ಗೌರವಾಧ್ಯಕ್ಷ ಕೆ. ಬಸಪ್ಪಗೌಡ, ಕಾರ್ಯಾಧ್ಯಕ್ಷ ಜಿ.ಆರ್. ರಾಘವೇಂದ್ರಸ್ವಾಮಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಜಸ್ವಂತ್ ಸಿಂಗ್ ವರದಿಯ ಪ್ರಕಾರ ಹೈಕೋರ್ಟ್ ಪೀಠ ಸ್ಥಾಪನೆಗೆ ಶಿವಮೊಗ್ಗ ಎಲ್ಲಾ ರೀತಿಯ ಅರ್ಹತೆ ಹೊಂದಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ಇರುವ ದೂರ, ಪ್ರಕರಣಗಳ ಸಂಖ್ಯೆ, ವಕೀಲರ ತಂಡ ಈ ಎಲ್ಲಾ ಅಂಶಗಳನ್ನು ನೆರೆಹೊರೆಯ ಜಿಲ್ಲೆಗಳು ಪೂರೈಸುತ್ತವೆ. ಈಗಾಗಲೇ ಶಿವಮೊಗ್ಗ ಮತ್ತು ಮಂಗಳೂರು ಭೌಗೋಳಿಕವಾಗಿ ಒಂದಕ್ಕೊಂದು ಹೊಂದಿಕೊಂಡ ಜಿಲ್ಲೆಗಳಾಗಿವೆ. ಇಲ್ಲಿಂದಲೇ ಬೇಡಿಕೆ ಮತ್ತು ಒತ್ತಾಯ ಎರಡು ಆರಂಭವಾಗಿದ್ದು, ಈ ಎರಡು ಜಿಲ್ಲೆಗಳ ಬೇಡಿಕೆಗಳನ್ನು ತುಲನೆ ಮಾಡದೆ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ಮನವಿ ಮಾಡಲಾಗಿದೆ. ಆದರೂ ಪ್ರಸ್ತಾವಿತ ತೀರ್ಮಾನ ತೆಗೆದುಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲೆಯ ಜನಾಭಿಪ್ರಾಯ, ಜನಪ್ರತಿನಿಧಿಗಳು, ವಕೀಲರ ಅಭಿಪ್ರಾಯ ಸಂಗ್ರಹಿಸದೆ ಏಕಮುಖ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ ಮುಖ್ಯ ನ್ಯಾಯಮೂರ್ತಿಗಳು ಮತ್ತು ರಾಜ್ಯ ಸರ್ಕಾರ ಶಿವಮೊಗ್ಗದ ಬೇಡಿಕೆಯನ್ನು ಪರಿಗಣಿಸಿ ಶಿವಮೊಗ್ಗದಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಬೇಕೆಂದು ಮನವಿ ಮಾಡಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BREAKING: ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣರಾಜ್ಯಾದ್ಯಂತ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ: ಗೃಹ ಇಲಾಖೆಗೆ 100 ದಿನಗಳ ಕಾರ್ಯಯೋಜನೆಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಮಹಾರಾಷ್ಟ್ರ ಟಿಇಟಿ ಪರೀಕ್ಷೆ ರದ್ದು: ಮೂವರು ಅರೆಸ್ಟ್ಮಾಲಿವುಡ್‌ಗೆ ಯಾರು ಬೇಕಾದರೂ ಬನ್ನಿ, ಆದರೆ ಏನನ್ನೂ ಬದಲಿಸುವ ಪ್ರಯತ್ನ ಮಾಡಬೇಡಿ, ಇಲ್ಲಿಂದ ಕಲಿತುಕೊಂಡು ಹೋಗಿ ಅಷ್ಟೇ: ಪೃಥ್ವಿರಾಜ್ ಸುಕುಮಾರನ್ ಖಡಕ್ ಹೇಳಿಕೆ; ವಿಡಿಯೊBREAKING: ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ರೌಡಿಶೀಟರ್ ಸಾವುBREAKING NEWS: RSS ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರಿಯಾಂಕ್ ಖರ್ಗೆ, ನಲಪಾಡ್ ಗೆ ಸಮನ್ಸ್ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ ಹೇಡಿತನದ ಕೃತ್ಯ: ಬಿ.ಕೆ.ಹರಿಪ್ರಸಾದ್BIG NEWS: ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಕೇಸ್: ಚಂಪತ್ ರಾಯ್ ರಾಜೀನಾಮೆ ದೃಢಪಡಿಸಿದ ಟ್ರಸ್ಟ್, ಜು. 11ರಂದು ಪ್ರಮುಖರ ಸಭೆBREAKING NEWS: ರಾಷ್ಟ್ರ ರಾಜಧಾನಿ ದೆಹಲಿ, ಕಣಿವೆ ರಾಜ್ಯ ಜಮ್ಮು –ಕಾಶ್ಮೀರದಲ್ಲಿ ಪ್ರಬಲ ಭೂಕಂಪ: ಆಫ್ಘಾನಿಸ್ತಾನದಲ್ಲೂ ನಡುಗಿದ ಭೂಮಿFIFA ವಿಶ್ವಕಪ್: ಕೊಲಂಬಿಯಾ ಪಂದ್ಯಕ್ಕೂ ಮುನ್ನ ವಿಶೇಷ ಚಿನ್ನದ ಬಣ್ಣದ ಬೂಟುಗಳಲ್ಲಿ ತರಬೇತಿ ಪಡೆದ ಕ್ರಿಸ್ಟಿಯಾನೊ ರೊನಾಲ್ಡೊ