LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರಿಗೆ ಸಿಹಿಸುದ್ದಿ ; ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರವು 2026 ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಬಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯ ಎಂಟು ತಾಲ್ಲೂಕಿನ ಎಲ್ಲಾ 14 ಹೋಬಳಿಗಳಲ್ಲಿ ಅನುಷ್ಠಾನಗೊಳಿಸಲು ಮಂಜೂರಾತಿ ನೀಡಿರುತ್ತದೆ.

ಧಾರವಾಡ ಜಿಲ್ಲೆಯ ಹೋಬಳಿ ಮಟ್ಟದ ಬೆಳೆಗಳು (12 ಬೆಳೆಗಳು):* ಭತ್ತ(ನೀ), ಭತ್ತ(ಮ.ಆ.), ಮುಸುಕಿನಜೋಳ (ನೀ), ಮುಸುಕಿನಜೋಳ (ಮ.ಆ.), ಉದ್ದು(ಮ.ಆ.), ತೊಗರಿ (ಮ.ಆ.), ಹೆಸರು (ಮ.ಆ.), ಸೋಯಾಅವರೆ(ಮ.ಆ.), ನೆಲಗಡಲೆ (ಶೇಂಗಾ) (ಮ.ಆ.), ನೆಲಗಡಲೆ (ಶೇಂಗಾ) (ನೀ.), ಹತ್ತಿ (ಮ.ಆ.), ಹತ್ತಿ (ನೀ), ಈರುಳ್ಳಿ (ಮ.ಆ.), ಈರುಳ್ಳಿ (ನೀ.), ಆಲೂಗಡ್ಡೆ (ಮ.ಆ.), ಟೊಮ್ಯಾಟೋ, ಕೆಂಪು ಮೆಣಸಿನಕಾಯಿ (ಮ.ಆ.) ಮತ್ತು ಕೆಂಪು ಮೆಣಸಿನಕಾಯಿ (ನೀ.)

*ಗ್ರಾಮ ಪಂಚಾಯತಿ ಮಟ್ಟದ ಬೆಳೆಗಳು:* ಧಾರವಾಡ ಮತ್ತು ಅಳ್ನಾವರ ತಾಲ್ಲೂಕು – ಭತ್ತ (ಮಳೆ ಆಶ್ರಿತ), ಕಲಘಟಗಿ ತಾಲ್ಲೂಕು – ಭತ್ತ (ಮಳೆ ಆಶ್ರಿತ), ಮುಸುಕಿನ ಜೋಳ (ಮಳೆ ಆಶ್ರಿತ), ಹುಬ್ಬಳ್ಳಿ ಮತ್ತು ಹುಬ್ಬಳ್ಳಿ ನಗರ ತಾಲ್ಲೂಕು – ನೆಲಗಡಲೆ (ಶೇಂಗಾ)(ಮಳೆ ಆಶ್ರಿತ), ಕುಂದಗೋಳ ತಾಲ್ಲೂಕು – ನೆಲಗಡಲೆ (ಶೇಂಗಾ)(ಮಳೆ ಆಶ್ರಿತ) ಮತ್ತು ಹತ್ತಿ (ಮಳೆ ಆಶ್ರಿತ), ನವಲಗುಂದ ಮತ್ತು ಅಣ್ಣಿಗೇರಿ ತಾಲ್ಲೂಕು – ಮುಸುಕಿನ ಜೋಳ (ಮಳೆಆಶ್ರಿತ) ಮತ್ತು ಹೆಸರು (ಮಳೆ ಆಶ್ರಿತ)

ಬೆಳೆ ಸಾಲ ಪಡೆಯುವ ಹಾಗೂ ಪಡೆಯದ ರೈತರು ಹೆಸರು ಮತ್ತು ಉದ್ದು ಬೆಳೆಗಳಿಗೆ ಜುಲೈ 15, 2026 ಮತ್ತು ಇತರೆ ಬೆಳೆಗಳಿಗೆ ಜುಲೈ 31, 2026 ಹಾಗೂ ಕೆಂಪು ಮೆಣಸಿನಕಾಯಿ (ನೀರಾವರಿ ಹಾಗೂ ಮಳೆ ಆಶ್ರಿತ) ಬೆಳೆಗೆ ಅಗಸ್ಟ್ 14, 2026 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಎಸ್‍ಬಿಐ ಜನರಲ್ ಇನ್ಸೂರೆನ್ಸ್ ಕಂಪನಿ ಲಿಂ. (SBI General Insurance Company Ltd), ಸ್ಥಳೀಯ ಕೃಷಿ ಇಲಾಖೆ, ಕಂದಾಯ, ಗ್ರಾಮೀಣ ಅಭಿವೃದ್ಧಿ, ತೋಟಗಾರಿಕೆ ಇಲಾಖೆ ಸಿಬ್ಬಂದಿ ಮತ್ತು ಸ್ಥಳೀಯ ಹಣಕಾಸು ಸಂಸ್ಥೆಗಳಾದ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ, ಸೇವಾ ಬ್ಯಾಂಕ, ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರದ ಸಿಬ್ಬಂದಿಯವರನ್ನು ಅಥವಾ ಎಸ್‍ಬಿಐಜಿಐಸಿ ಟೊಲ್ ಫ್ರೀ ನಂಬರ್: 18002091111 ಗೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ಸಹಕಾರ ಇಲಾಖೆಯ ಅಧೀನದಲ್ಲಿ ಬರುವ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಧಾರವಾಡ ಸಂಸ್ಥೆಯಿಂದ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು. ತರಬೇತಿಯ ಅವಧಿಯು 6 ತಿಂಗಳಾಗಿದ್ದು, ತರಬೇತಿ ಜೊತೆಗೆ ಪ್ರತಿ ತಿಂಗಳು ಶಿಷ್ಯವೇತನ ನೀಡಲಾಗುವುದು. ತರಬೇತಿ ಪಡೆದವರಿಗೆ ವಿವಿಧ ರೀತಿಯ ಸಹಕಾರ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅವಕಾಶವಿದ್ದು. ಸಹಕಾರ ಬ್ಯಾಂಕುಗಳಲ್ಲಿ ಹಾಗೂ ಇತರೆ ಸಹಕಾರ ಸಂಸ್ಥೆಗಳ ನೇಮಕಾತಿಯಲ್ಲಿ ಆದ್ಯತೆ ನೀಡಲಾಗುವುದು. ಜೂನ್ 27, 2026 ರೊಳಗಾಗಿ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2773349, 8317383188, 9845120371 ಗೆ ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!